ಅಂಚೆ ವಿಭಾಗದಲ್ಲಿ ನೇರ ಸಂದರ್ಶನ

Advertisements

ಬಳ್ಳಾರಿ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆ ಮಾಡಲಾಗುತ್ತದೆ.
ಮಾರ್ಚ್‌ 25 ರಂದು ಬೆಳಗ್ಗೆ 11 ಕ್ಕೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಕೋಟೆ ಪ್ರದೇಶದಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗಿಯಾಗಬಹುದು.

ವಿದ್ಯಾರ್ಹತೆ: ಅಭ್ಯರ್ಥಿಗಳು ಖಡ್ಡಾಯವಾಗಿ 10 ನೇ ತರಗತಿ ಪಾಸಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18. ಹಾಗೂ ಗರಿಷ್ಠ 50 ವಯಸ್ಸಾಗಿರಬೇಕು

ಯಾರು ಅರ್ಜಿ ಸಲ್ಲಿಸಬಹುದು?
ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಮಾಜಿ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆ ಯರು,ಮಹಿಳಾ ಮಂಡಲದ ಕಾರ್ಯಕರ್ತೆ ಯರು,ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು,ಅಂಚೆವಿಭಾಗದ ಮುಖ್ಯಸ್ಥರು

ನುರಿತ ಸಂವಹನ ಕಲೆ ವಿಮಾ ಮಾರಾಟ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ. ಆಯ್ಕೆಯಾದ ಅಭ್ಯರ್ಥಿಗಳು 5 ಸಾವಿರ ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ್ ಪತ್ರದ ರೂಪದಲ್ಲಿ ಠೇವಣಿ ಇರಬೇಕಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಶನ್ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು 08392-266037/266768 ಸಂಖ್ಯೆ ಗೆ ಕರೆ ಮಾಡಬಹುದು.

Leave a Comment