Advertisements
ಭಾರತೀಯ ಅಂಚೆ ಇಲಾಖೆ ವತಿಯಿಂದ ಬೆಂಗಳೂರಿನ ಜಿಪಿಒ ಅಂಚೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
ಹುದ್ದೆ : ಅಂಚೆ ಜೀವ ವಿಮೆ ಏಜೆಂಟ್ ಆಗಿ ಕಾರ್ಯನಿರ್ವಹಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಯೋಮಿತಿ : 18 ರಿಂದ 60 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್, ಪಾನ್ ಕಾರ್ಡ್, ಎಸ್ ಎಸ್ ಎಲ್ ಸಿ ಅಂಕಪಟ್ಟಿಯ ಮೂಲ ಪ್ರತಿ ಹಾಗೂ 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಬೆಂಗಳೂರು ಜಿಪಿಓ ಅಂಚೆ ಕಚೇರಿಯಲ್ಲಿ ಆಗಸ್ಟ್ 5 ರಿಂದ 7 ರವರೆಗೆ ನಡೆಯುವ ಸಂದರ್ಶನದಲ್ಲಿ ಭಾಗಿಯಾಗಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.080 22850002, 9901354022 ಗೆ ಸಂಪರ್ಕಿಸಬಹುದಾಗಿದೆ.