Advertisements
2021-22 ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕಲಾ ಮತ್ತು ವಿಜ್ಞಾನ ವಿಭಾಗಗಳ ಅಡಿಯಲ್ಲಿ ಈ ಕೆಳಗಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಬೋಧಿಸಲು ಪೂರ್ಣ/ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯುಜಿಸಿ ನಿಯಮಗಳ ಪ್ರಕಾರ ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ಜಾಲತಾಣ www.bcu.ac.in ದಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಸಂಬಂಧಿತ ದಾಖಲೆಯ ಪ್ರತಿಗಳೊಂದಿಗೆ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು – 560001 ಇವರಿಗೆ ಕಚೇರಿ ಸಮಯದಲ್ಲಿ ದಿನಾಂಕ : 30-11-2021 ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಲತಾಣಕ್ಕೆ ಭೇಟಿ ನೀಡಿ.