ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾಬಗರ ಪಾಲಿಕೆ ) ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 120 ಹಿರಿಯ ವೈದ್ಯಾಧಿಕಾರಿ/ತಜ್ಞರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆ ಪ್ರಕ್ರಿಯೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅವರ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡವಾರು ಅಂಕ, ಸೇವಾ ಕೃಪಾಂಕ ಮತ್ತು ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿಯನ್ನು ನೀಡಲಾಗಿದೆ.
ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.5೦೦/-, ಸಾಮಾನ್ಯ ಅಭ್ಯರ್ಥಿಗಳಿಗೆ ರೂ.1೦೦೦/-, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.1೦೦/- ಅರ್ಜಿ ಶುಲ್ಕವನ್ನು ಚಲನ್ ಮೂಲಕ ಮಾರ್ಚ್ 25, 2021 ರೊಳಗ ಪಾವತಿಸಬೇಕಾಗುತ್ತದೆ.
ಅರ್ಜಿ ಸಲ್ಲಿಕೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಬಿಎಂಪಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ಮಾರ್ಚ್ 24, 2021 ರೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು.
ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ವಿದ್ಯಾರ್ಹತೆ : ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಪೋಸ್ಟ್ ಗ್ರಾಜ್ಯುಯೇಶನ್/ಡಿಪ್ಲೋಮಾ ಮತ್ತು ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದ ಅನ್ವಯ ಕನಿಷ್ಠ 26 ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 42 ವರ್ಷ ವಯಸ್ಸಾಗಿರಬೇಕು.
2ಎ,2ಬಿ,2ಎ ಮತ್ತು 3ಬಿಯ ಅಭ್ಯರ್ಥಿಗಳಿಗೆ 45 ವರ್ಷ ಮತ್ತು ಪ.ಜಾ, ಪ.ಪಂ, ಪ್ರವರ್ಗ -1 ರ ಅಭ್ಯರ್ಥಿಗಳಿಗೆ ಗರಿಷ್ಠ 47 ವರ್ಷ ವಯೋಮಿತಿ ಆಗಿರಬೇಕು.
ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಹುದ್ದೆ ಸಂಖ್ಯೆ: 120
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 23-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-03-2021
ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ : 25-03-2021
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕನ್ನು ಕ್ಲಿಕ್ ಮಾಡಿ. www.bbmp.gov.in