BBMP Job: ಬಿಬಿಎಂಪಿಯಲ್ಲಿ 444 ಹುದ್ದೆಗಳಿಗೆ ಅರ್ಜಿ ಆಹ್ವಾನ

Written By sarkari

Lorem ipsum dolor sit amet consectetur pulvinar ligula augue quis venenatis. 

Advertisements

BBMP Recruitment 2024: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 444 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 444 ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ನಡೆಯಲಿದ್ದು, ಯುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ.
ಹುದ್ದೆ: ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಂಬಾಕು ನಿಯಂತ್ರಣ ಕಾರ್ಯಕ್ರಮ, ಕುಷ್ಠರೋಗ ನಿರ್ಮೂಲಕನಾ ಕಾರ್ಯಕ್ರಮ, ಅಂಧತ್ವ ನಿರ್ಮೂಲಕನಾ ಕಾರ್ಯಕ್ರಮದಡಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಯಾವೆಲ್ಲ ಹುದ್ದೆಗಳು: ನೇತ್ರ ತಜ್ಞರು, ಮಕ್ಕಳ ತಜ್ಞರು, ಫಾರ್ಮಾಸಿಸ್ಟ್‌, ಲ್ಯಾಬ್‌ ಟೆಕ್ನಿಶಿಯನ್ಸ್‌, ಸ್ಟಾಫ್‌ ನರ್ಸ್‌ ಹಾಗೂ ಇತರ ಅರೆವೈದ್ಯ ಸಿಬ್ಬಂದಿ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿದ್ಯಾಭ್ಯಾಸ: ಹುದ್ದೆಗಳಿಗನುಗುಣವಾಗಿ ಎಸ್‌ಎಸ್‌ಎಲ್ಸಿ, ಪಿಯುಸಿ, ಜೆಎನ್‌ಎಂ ,ಎ.ಎನ್‌.ಎಂ.ಎಂ.ಎಸ್ಸಿ, ಬಿಎಸ್ಸಿ, ಡಿಪ್ಲೊಮಾ ಇನ್‌ ನರ್ಸಿಂಗ್‌, ಬಿ.ಫಾರ್ಮಾ/ಡಿ.ಫಾರ್ಮಾ,ಬಿಇ, ಬಿ.ಟೆಕ್‌, ಎಂ.ಟೆಕ್‌, ಎಂಬಿಎ,ಎಂಬಿಬಿಎಸ್‌, ಎಂಡಿ(ಓಬಿಜಿ/ಪಿಡಿಯಾಟ್ರಿಕ್ಸ್‌/ಮೆಡಿಸಿನ್/ಅನಸ್ಥೇಷಿಯಾ/ರೆಡಿಯೋಲಾಜಿ) ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಠ 18ವರ್ಷ ವಯಸ್ಸಾಗಿರಬೇಕು.

ಆಯ್ಕೆ ಮಾಡುವ ವಿಧಾನ: ಅಭ್ಯರ್ಥಿಗಳನ್ನು ಮೆರಿಟ್‌ ಕಂ ರೋಸ್ಟರ್‌ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

ವಾಕ್‌ಇನ್‌ ಇಂಟರ್‌ವ್ಯೂ ದಿನಾಂಕ: ಪಾಲಿಕೆ ನಿಗದಿಪಡಿಸಿರುವ ಸ್ಥಳಗಳಲ್ಲಿ ಫೆ.13ರಿಂದ 15, 2024ರವರೆಗೆ ಸಮಯ ಬೆಳಿಗ್ಗೆ 10.30ರಿಂದ ಸಂಜೆ 4.30 ರವರೆಗೆ. ಆಯಾ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಆಧರಿಸಿ ನೇಮಕಾತಿ ನಡೆಯಲಿದೆ.

ನೇರ ಸಂದರ್ಶನ ನಡೆಯುವ ಸ್ಥಳ: ಡಾ.ರಾಜ್‌ಕುಮಾರ್‌ ಗಾಜಿನ ಮನೆ, ಬಿಬಿಎಂಪಿ ಕೇಂದ್ರ ಕಛೇರಿ, ಎನ್‌.ಆರ್‌.ಚೌಕ, ಬೆಂಗಳೂರು.

ಮೇಲೆ ನೀಡಿದ ಎಲ್ಲಾ ಹುದ್ದೆಗಳಿಗೆ ಒಂದು ವರ್ಷದ ಗುತ್ತಿಗೆಯಾಧಾರದಲ್ಲಿ ನೇಮಕಾತಿ ಮಾಡಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಬಿಬಿಎಂಪಿ ವೆಬ್‌ಸೈಟ್‌ನಲ್ಲಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು, ವಾಕ್‌ಇನ್‌ ಆಯ್ಕೆ ಪ್ರಕ್ರಿಯೆಗೆ ಹಾಜರಾಗಲು ಸೂಚಿಸಲಾಗಿದೆ. ಹೆಚ್ಚಿನ ವಿವರಗಳಾಗಿ ಅಭ್ಯರ್ಥಿಗಳು Email [email protected] ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ವೆಬ್‌ಸೈಟ್‌ ಗೆ ಸಂಪರ್ಕಿಸಿ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ