ಬಿಡಿಎಲ್ 70 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Advertisements

ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿಡಿಎಲ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 12-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2021
ಸಂದರ್ಶನ ದಿನಾಂಕ : ಕೂಡಲೇ ತಿಳಿಸಲಾಗುತ್ತದೆ.

ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿಡಿಎಲ್) ನಲ್ಲಿ ಪ್ರಾಜೆಕ್ಟ್ ಇಂಜಿನಿಯರ್, ಆಫೀಸರ್ ಹುದ್ದೆಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ.

ಒಟ್ಟು 70 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿ ಇದರ ಸದುಪಯೋಗ ಪಡೆದುಕೊಳ್ಳಬಹುದು.

ಒಟ್ಟ 70 ಹುದ್ದೆಗಳ ಪೈಕಿ 55 ಪ್ರಾಜೆಕ್ಟ್ ಇಂಜಿನಿಯರ್, 15 ಪ್ರಾಜೆಕ್ಟ್ ಆಫೀಸರ್ ಹುದ್ದೆಗಳ ನ್ನು ಬಿಡಿಎಲ್ ಭರ್ತಿ ಮಾಡಿಕೊಳ್ಳಲಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಹತೆ: ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್/ಎಂ.ಇ/ಎಂ.ಟೆಕ್/ಸಿ.ಎ/ಐಸಿಡ್ಬ್ಲುಎ/ಬಿ.ಎಸ್ಸಿ/ಎಂಬಿಎ/ಪಿಜಿಡಿಪ್ಲೋಮ ಅಥವಾ ಎಂಎಸ್ ಡಬ್ಲ್ಯು ತೇರ್ಗಡೆ ಹೊಂದಿರಬೇಕು.

ಸಂಬಂಧಿಸಿದ ಹುದ್ದೆಯಲ್ಲಿ ಒಂದು ವರ್ಷದ ಅನುಭವ ಹೊಂದಿರಬೇಕು.

ವಯೋಮಿತಿ: ಗರಿಷ್ಠ 28 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

https://bdl-india.in/

Leave a Comment