ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಖ್ಯೆ: 120
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22, ಫೆಬ್ರವರಿ2021
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ, ಪಿಯುಸಿ, ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಪದವಿ, ಬಿಎಸ್ಸಿ ಮತ್ತು ಐಟಿಐ ವಿದ್ಯಾರ್ಹತೆ ಯುಳ್ಳವರು ಅರ್ಜಿ ಸಲ್ಲಿಸಬಹುದು.
ನೇರ ಸಂದರ್ಶನ ಹಾಗೂ ಲಿಖಿತ ಪರೀಕ್ಷೆ ಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಯೋಮಿತಿ
ಹುದ್ದೆಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ ವಯೋಮಿತಿ ಹೊಂದಿರಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ,2ಎ, 2ಬಿ, ಮತ್ತು 3ಎ,3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ
ಪ.ಜಾತಿ/ಪ.ಪಂಗಡ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ.600 ಹಾಗೂ ಉಳಿದವರು 830/-ಅರ್ಜಿ ಶುಲ್ಕ ಪಾವತಿಸಬೇಕು.