ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.
ಹುದ್ದೆ : 103 ಹ್ಯಾಂಡಿಮನ್ ಮತ್ತು ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2021
ವಿದ್ಯಾರ್ಹತೆ : 8 ನೇ ತರಗತಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ : ಸುಮಾರು 30 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.14,014 /- ರಿಂದ ರೂ.20,384 /- ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ : ಅರ್ಜಿದಾರರು ರೂ. 750/- ನ್ನು ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಆರ್ಥಿಕವಾಗಿ ಹಿಂದುಳಿದ / ಅಂಗವಿಕಲ ಅಭ್ಯರ್ಥಿಗಳಿಗೆ ರೂ. 450/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ನೋಟಿಫಿಕೇಶನ್ ನೋಡಿ.