BEL Recruitment 2024: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 517 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಯ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು 13-Mar-2024 ರಂದು ಅಥವಾ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28-02-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-03-2024
ಹುದ್ದೆಗಳ ವಿವರ ಇಲ್ಲಿ ನೀಡಲಾಗಿದೆ.
ಹುದ್ದೆ: ಟ್ರೈನಿ ಇಂಜಿನಿಯರ್ ಹುದ್ದೆಗೆ ಬಿಇಎಲ್ ಸಂಸ್ಥೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಸಂಖ್ಯೆ: ಒಟ್ಟು 517 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
BEL ಹುದ್ದೆಯ ವಲಯವಾರು ಪೋಸ್ಟ್‌ಗಳ ಸಂಖ್ಯೆ ವಿವರ
ಕೇಂದ್ರ 68
ಪೂರ್ವ 86
ಪಶ್ಚಿಮ 139
ಉತ್ತರ 78
ಈಶಾನ್ಯ 15
ದಕ್ಷಿಣ 131
ಒಟ್ಟು 517 ಹುದ್ದೆಗಳು.
ವಿದ್ಯಾರ್ಹತೆ: B.E ಅಥವಾ B.Tech, M.E ಅಥವಾ M.Tech ಅನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ: B.E ಅಥವಾ B.Tech ಮಾಡಿದ ಅಭ್ಯರ್ಥಿಗಳಿಗೆ 28 ವರ್ಷಗಳು ಮತ್ತು M.E ಅಥವಾ M.Tech ಮಾಡಿದ ಅಭ್ಯರ್ಥಿಗಳಿಗೆ 30 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ: SC/ST ಅಭ್ಯರ್ಥಿಗಳಿಗೆ 05 ವರ್ಷ, OBC (NCL) ಅಭ್ಯರ್ಥಿಗಳಿಗೆ 03 ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: SC/ST/PwBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಎಲ್ಲಾ ಇತರ ಅಭ್ಯರ್ಥಿಗಳು ರೂ.150/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30ಸಾವಿರದಿಂದ 40ಸಾವಿರದವರೆಗೆ ವೇತನ ಸಿಗಲಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ