BEL Recruitment 2024: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಹಲವು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟ ಮಾಡಿದೆ. ತಾತ್ಕಾಲಿಕ ಆಧಾರದ ಮೇಲೆ ಟ್ರೈನಿ ಇಂಜಿನಿಯರ್-I ಮತ್ತು ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಯ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 31-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-02-2024
ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ;
ಟ್ರೈನಿ ಇಂಜಿನಿಯರ್-I ಮತ್ತು ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ
ಒಟ್ಟು ಹುದ್ದೆ:
ಟ್ರೈನಿ ಇಂಜಿನಿಯರ್-I; 33 ಹುದ್ದೆಗಳು
ಪ್ರಾಜೆಕ್ಟ್ ಇಂಜಿನಿಯರ್-I; 22 ಹುದ್ದೆಗಳು
ಟ್ರೈನಿ ಇಂಜಿನಿಯರ್ ವಿಭಾಗದಲ್ಲಿ ಎಲೆಕ್ಟ್ರಾನಿಕ್ಸ್-26, ಮೆಕ್ಯಾನಿಕಲ್-03, ಕಂಪ್ಯೂಟರ್ ಸೈನ್ಸ್ -04 ಹುದ್ದೆಗಳಿದೆ
ಪ್ರಾಜೆಕ್ಟ್ ಇಂಜಿನಿಯರ್ ವಿಭಾಗದಲ್ಲಿ ಎಲೆಕ್ಟ್ರಾನಿಕ್ಸ್-16, ಕಂಪ್ಯೂಟರ್ ಸೈನ್ಸ್ -06 ಹುದ್ದೆಗಳಿದೆ.
ವಯೋಮಿತಿ: ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 32 ವರ್ಷ ನಿಗದಿಪಡಿಸಲಾಗಿದೆ. OBC ಅಭ್ಯರ್ಥಿಗಳಿಗೆ 03 ವರ್ಷಗಳು, SC/ST ಅಭ್ಯರ್ಥಿಗಳಿಗೆ 05 ವರ್ಷಗಳು, PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: GEN/ OBC/ EWS ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಟ್ರೇನಿ ಇಂಜಿನಿಯರ್ ಹುದ್ದೆಗೆ ಅರ್ಜಿ ಶುಲ್ಕವಾಗಿ ರೂ. 150+ 18% GST
GEN/ OBC/ EWS ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ರೂ. 400+ 18% GST ಅರ್ಜಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ. SC/ST/PwBD ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪಾವತಿ ವಿಧಾನ: SBI ಕಲೆಕ್ಟ್ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿ ಮಾಡಲು ಸೂಚಿಸಲಾಗಿದೆ.
ಶಿಕ್ಷಣ ಅರ್ಹತೆ; ಟ್ರೈನಿ ಇಂಜಿನಿಯರ್‌ಗಳು-I-ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ BE B. Tech B.Sc ಇಂಜಿನಿಯರಿಂಗ್ ಪದವಿ, ಅಎಲೆಕ್ಟ್ರಾನಿಕ್ಸ್/ಮೆಕ್ಯಾನಿಕಲ್ ಕಂಪ್ಯೂಟರ್ ಸೈನ್ಸ್‌ನ ಸಂಬಂಧಿತ ವಿಭಾಗಗಳಲ್ಲಿ ವಿಶ್ವವಿದ್ಯಾಲಯ/ಸಂಸ್ಥೆಯಿಂದ ತೇರ್ಗಡೆ ಹೊಂದಿರಬೇಕು.
ಪ್ರಾಜೆಕ್ಟ್ ಎಂಜಿನಿಯರ್ ಗಳು-I- ಎಲೆಕ್ಟ್ರಾನಿಕ್ಸ್ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದಲ್ಲಿ BE B. Tech B.Sc ಇಂಜಿನಿಯರಿಂಗ್ ಪದವಿ ಎಲೆಕ್ಟ್ರಾನಿಕ್ಸ್ ಕಂಪ್ಯೂಟರ್ ಸೈನ್ಸ್‌ನ ಸಂಬಂಧಿತ ವಿಭಾಗಗಳಲ್ಲಿ ವಿಶ್ವವಿದ್ಯಾಲಯ/ಸಂಸ್ಥೆಯಿಂದ ತೇರ್ಗಡೆ ಹೊಂದಿರಬೇಕು.
ಆಯ್ಕೆ ವಿಧಾನ: ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆ/ಸಂದರ್ಶನದ ಸ್ಥಳವು ಬೆಂಗಳೂರಿನಲ್ಲಿ ಇರುತ್ತದೆ.
ಅಭ್ಯರ್ಥಿಗಳು ಅರ್ಜಿಯನ್ನು ಪೋಸ್ಟ್ ಮೂಲಕ ಕಳುಹಿಸಬೇಕು. ಅರ್ಜಿಯು 14.02.2024 ರಂದು ಸಂಜೆ 5.00 ಗಂಟೆಯೊಳಗೆ ವಿಳಾಸವನ್ನು ತಲುಪಬೇಕು. ಇ-ಮೇಲ್ ಮೂಲಕ ಕಳುಹಿಸುವಂತಿಲ್ಲ. ಅಂತಿಮ ದಿನಾಂಕದ ನಂತರ ಸ್ವೀಕರಿಸಿದ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅಪೂರ್ಣ ಅರ್ಜಿಗಳನ್ನು ತಿರಸ್ಕರಿಲಾಗುವುದು. ಯಾವುದೇ ಕಾರಣಕ್ಕೂ ಅಂಚೆ ಸಾಗಣೆಯಲ್ಲಿನ ಯಾವುದೇ ವಿಳಂಬ ಅಥವಾ ನಷ್ಟಕ್ಕೆ BEL ಜವಾಬ್ದಾರನಾಗಿರುವುದಿಲ್ಲ.
ಅಂಚೆ ಮೂಲಕ ಅರ್ಜಿ ಕಳುಹಿಸಬೇಕಾದ ವಿಳಾಸ;
Manager (HR).
Product Development & Innovation Centre (PDIC),
Bharat Electronics Limited,
Prof. UR Rao Road, Near Nagaland Circle,
Jalahalli Post, Bengaluru 560 013, India.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ