BEL Recruitment 2024: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 47 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಿಇಎಲ್‌ನಲ್ಲಿ ಟ್ರೈನಿ ಇಂಜಿನಿಯರ್-I ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೊಚ್ಚಿ – ಬೆಂಗಳೂರು ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಉದ್ಯೋಗದ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು 07-Mar-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 21-02-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-03-2024
ಹುದ್ದೆಗಳ ವಿವರ;
ಹುದ್ದೆಯ ಹೆಸರು; ಟ್ರೈನಿ ಇಂಜಿನಿಯರ್-1 ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಸಂಖ್ಯೆ: 47 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ CSE/IT ನಲ್ಲಿ B.Sc, B.E ಅಥವಾ B.Tech ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 28 ವರ್ಷ ಮೀರಿರಬಾರದು. OBC (NCL) ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30,000-ರೂ.40,000 ವರೆಗೆ ವೇತನ ಸಿಗಲಿದೆ.
ಅರ್ಜಿ ಶುಲ್ಕ: ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ ರೂ.177/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ