ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:
ಹುದ್ದೆ : ಟ್ರೈನಿ ಇಂಜಿನಿಯರ್ ಹುದ್ದೆ
ಹುದ್ದೆ ಸಂಖ್ಯೆ : 10
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ ,27, 2021
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆ ಯಿಂದ ಬಿ.ಇ/ಬಿ.ಟೆಕ್ ಹಾಗೂ ಬಿ.ಎಸ್ಸಿ ವಿದ್ಯಾರ್ಹತೆ ಯನ್ನು ಅಭ್ಯರ್ಥಿಗಳು ಹೊಂದಿರಬೇಕು.
ವಯೋಮಿತಿ : ಜನವರಿ 1, 2021 ರ ಅನ್ವಯ ಅಭ್ಯರ್ಥಿಗೆ ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು.
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ, 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: ಅಂಗವಿಕಲ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳ ಯಾವುದೇ ಶುಲ್ಕ ಪಾವತಿಸುವಂತಿಲ್ಲ.
ಇತರೆ ಅಭ್ಯರ್ಥಿಗಳು ರೂ. 200/- ಶುಲ್ಕವನ್ನು ಆನ್ ಲೈನ್ ಮುಖಾಂತರ ಪಾವತಿಸಬೇಕು.
ನೇರ ಸಂದರ್ಶನ ದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ಕಿಸಿ:
https://bel-india.in/