ಬೆಳಗಾವಿ ನ್ಯಾಯಾಲಯದಲ್ಲಿ ನೇಮಕ : ಮಾರ್ಚ್ 25ರ ಮೊದಲು ಅರ್ಜಿ ಸಲ್ಲಿಸಿ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಬೆಳಗಾವಿ ಡಿಸ್ಟ್ರಿಕ್ ಕೋರ್ಟ್ ನಲ್ಲಿ  31 ಪಿಯೋನ್ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 25-03-2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮುಖಾಂತರ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-03-2021
ಅರ್ಜಿ ಶುಲ್ಕ: ಆನ್ಲೈನ್ ಮುಖಾಂತರ ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ : 25-03-2021(11:59pm)
ಅರ್ಜಿ ಶುಲ್ಕ ಚಲನ್ ಮೂಲಕ ಸಲ್ಲಿಸುವುದಾದರೆ ಕೊನೆಯ ದಿನಾಂಕ : 29-03-2021.

ಪಿಯೋನ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು 200 ರೂ. ಅರ್ಜಿ ಶುಲ್ಕ ವನ್ನು ಸಾಮಾನ್ಯ, ಸಿಎಟಿ 2ಎ,2ಬಿ,3ಎ,3ಬಿ ಅಭ್ಯರ್ಥಿಗಳು ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಸಿಎಟಿ-1/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆನ್ಲೈನ್ ಹಾಗೂ ಚಲನ್ ಮೂಲಕ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವಯಸ್ಸಾಗಿರಬೇಕು. (25ಮಾರ್ಚ್ 2021 ರ ಅನ್ವಯ)

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಸಿಎಟಿ-1 ಅಭ್ಯರ್ಥಿಗಳಿಗೆ 5 ವರ್ಷ, ಸಿಎಟಿ 2ಎ,2ಬಿ,3ಎ,3ಬಿ -3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ : ಪಿಯೊನ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.17,000/- ರಿಂದ ರೂ.28950/- ವೇತನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆನ್ ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment