BEML Recruitment 2024: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 04 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಟಾಫ್ ಡ್ರೈವರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಪೋಸ್ಟಿಂಗ್ ಬೆಂಗಳೂರು – ಕರ್ನಾಟಕದಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 05-Jun-2024 ರಂದು ಅಥವಾ ಮೊದಲು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ; 15-05-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-06-2024
ಹುದ್ದೆಗಳ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ನಲ್ಲಿ 04 ಹುದ್ದೆಗಳು ಖಾಲಿ ಇದ್ದು, ಸ್ಟಾಫ್ ಡ್ರೈವರ್ (ಸಿಬ್ಬಂದಿ ಚಾಲಕ) ಪೋಸ್ಟ್‌ಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.20000-23500/- ವೇತನ ದೊರಕಲಿದೆ.
ವಿದ್ಯಾರ್ಹತೆ: BEML ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷ ಮೀರಿರಬಾರದು. ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: SC/ST ಅಭ್ಯರ್ಥಿಗಳು ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ/EWS/OBC/ExSM ಅಭ್ಯರ್ಥಿಗಳಿಗೆ ರೂ.200/- ಅರ್ಜಿ ಶುಲ್ಕ ಪಾವತಿಸಬೇಕಾಗಿದೆ. ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ? ಭರ್ತಿ ಮಾಡಿದ ಅರ್ಜಿಯನ್ನು ಅಭ್ಯರ್ಥಿಗಳು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಗಳ ಮೂಲಕ ಈ ಕೆಳಗೆ ನೀಡಿದ ವಿಳಾಸಕ್ಕೆ ಕಳುಹಿಸಬೇಕು;
ವಿಳಾಸ: Sr. Manager (Corporate Recruitment), Recruitment Cell, BEML Soudha, No.23/1, 4th Main Road, S.R Nagar, Bangalore-560027