District Court Recruitment: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯದಲ್ಲಿ ಟೈಪಿಸ್ಟ್‌, ಪ್ಯೂನ್‌ ಉದ್ಯೋಗ; ಎಸ್‌ಎಸ್‌ಎಲ್‌ಸಿ, ಪಿಯುಸಿ ಆಗಿದ್ರೆ ಸಾಕು

Advertisements

Bangalore Rural District Court Recruitment : ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಮೂಲಕ 58 ಪ್ಯೂನ್, ಟೈಪಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಚಿಸುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು20-Mar-2024 ಕೊನೆಯ ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16-02-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-03-2024

ಹುದ್ದೆಗಳ ವಿವರ:
ಪ್ಯೂನ್, ಟೈಪಿಸ್ಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಸಂಖ್ಯೆ: ಪ್ಯೂನ್ ಒಟ್ಟು ಹುದ್ದೆ 28
ಟೈಪಿಸ್ಟ್‌ -30 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಪ್ಯೂನ್ ಹುದ್ದೆಗೆ ಅಭ್ಯರ್ಥಿಗಳು 10 ನೇ ತರಗತಿ ತೇರ್ಗಡೆ ಹೊಂದಿರಬೇಕು.
ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12th, ಡಿಪ್ಲೊಮಾ ತೇರ್ಗಡೆ ಹೊಂದಿರಬೇಕು

ವಯೋಮಿತಿ: ಬೆಂಗಳೂರು ಗ್ರಾಮಾಂತರ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. Cat-2A/2B/3A & 3B ಅಭ್ಯರ್ಥಿಗಳಿಗೆ 03 ವರ್ಷ, SC/ST/Cat-I ಅಭ್ಯರ್ಥಿಗಳು: 05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗಳಿಗೆ SC/ST/Cat-I/PwBD ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ.
Cat-2A/2B/3A & 3B ಅಭ್ಯರ್ಥಿಗಳು ರೂ.100/- ನ್ನು ಅರ್ಜಿ ಶುಲ್ಕವಾಗಿ ಪಾವತಿ ಮಾಡಬೇಕು.
ಸಾಮಾನ್ಯ ಅಭ್ಯರ್ಥಿಗಳು ರೂ.200/- ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಆಯ್ಕೆ ಪ್ರಕ್ರಿಯೆ: ಪಿಯೋನ್‌ ಟೈಪಿಸ್ಟ್‌ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನ: ಪ್ಯೂನ್‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17000-28950ರೂ. ಮಾಸಿಕ ವೇತನವಿರಲಿದೆ.
ಬೆರಳಚ್ಚುಗಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21400-42000/-ರೂ. ತಿಂಗಳ ವೇತನ ಲಭ್ಯವಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಸಂವಹನಕ್ಕಾಗಿ ಸರಿಯಾದ ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ ಹೊಂದಿರಬೇಕು. ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವದ ದಾಖಲೆ ಇದ್ದರೆ ಮೊದಲೇ ಸಿದ್ಧವಾಗಿಡಿ. ಪ್ಯೂನ್‌, ಟೈಪಿಸ್ಟ್‌ ಹುದ್ದೆಗೆ ನೀಡಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ, ಅಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ, ನಂತರ ಅರ್ಜಿ ಶುಲ್ಕ ಪಾವತಿಸಿ, ನಂತರ ಸಲ್ಲಿಸಲು ಬಟನ್‌ ಕ್ಲಿಕ್‌ ಮಾಡಿ‌

ಪ್ಯೂನ್‌ ಹುದ್ದೆಯ ನೋಟಿಫಿಕೇಶನ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಟೈಪಿಸ್ಟ್‌ ಹುದ್ದೆಯ ನೋಟಿಫಿಕೇಶನ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಆನ್‌ಲೈನ್‌ ಅಪ್ಲೈ ಮಾಡಲು ಈ ಲಿಂಕ್‌ ಕ್ಲಿಕ್‌ ಮಾಡಿ