BHEL : 389 ಅಪ್ರೆಂಟಿಸ್ ಹುದ್ದೆಗಳ ನೇಮಕ

Advertisements

ಭಾರತ್ ಹೆವಿ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌(ಬಿಹೆಚ್‌ಇಎಲ್‌) ತ್ರಿಚಿ, ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು , ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ 14-04-2021 ರೊಳಗೆ ಸಲ್ಲಿಸಬಹುದು. ಹುದ್ದೆಗಳ ವಿವರ, ಅರ್ಜಿಶುಲ್ಕ, ವಿದ್ಯಾರ್ಹತೆ ಇನ್ನಿತರ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ : ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆ- 66
ಟೆಕ್ನಿಷಿಯನ್ ಅಪ್ರೆಂಟಿಸ್ – 70
ಟ್ರೇಡ್ ಅಪ್ರೆಂಟಿಸ್ – 253

ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 01-04-2021
ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ :14-04-2021
ಶಾರ್ಟ್‌ಲಿಸ್ಟ್‌ ಆದ ಅಭ್ಯರ್ಥಿಗಳ ಲಿಸ್ಟ್‌ ಪ್ರಕಟಣೆ ದಿನಾಂಕ :16-04-2021
ದಾಖಲೆಗಳ ಪರಿಶೀಲನೆ ನಿರೀಕ್ಷಿತ ದಿನಾಂಕ :21-04-2021
ಕರ್ತವ್ಯಕ್ಕೆ ಹಾಜರಾಗುವ ದಿನಾಂಕ : ಮುಂದಿನ ದಿನಗಳಲ್ಲಿ ತಿಳಿಸಲಾಗುವುದು

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ಕನಿಷ್ಠ ವರ್ಷ, ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ವಿದ್ಯಾರ್ಹತೆ : ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಡಿಪ್ಲೋಮಾ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ ತೇರ್ಗಡೆಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave a Comment