ಬೀದರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಿಂಬಾಕಿ ಹುದ್ದೆಗಳಾದ ಸ್ಟೆನೋಗ್ರಾಫರ್ ಗ್ರೇಡ್ ||| ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಬೀದರ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 13-09-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-10-2021
ಹುದ್ದೆ ವಿವರ : ಸ್ಟೆನೋಗ್ರಾಫರ್ ಗ್ರೇಡ್ ||| – 12
ಟೈಪಿಸ್ಟ್ – 9
ಅರ್ಜಿ ಶುಲ್ಕ : ಸಾಮಾನ್ಯ ವರ್ಗ : ಪ್ರವರ್ಗ 2A, 2B, 3A,3B ಅಭ್ಯರ್ಥಿಗಳಿಗೆ ರೂ.200
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ – 1 ರೂ.100
ವಯೋಮಿತಿ : ಸಾಮಾನ್ಯ ವರ್ಗ : 35 ವರ್ಷ, ಪ್ರವರ್ಗ 2A, 2B, 3A, 3B ; 38 ವರ್ಷ
ಎಸ್ ಸಿ, ಎಸ್ ಟಿ, ಪ್ರವರ್ಗ – 1 : 40 ವರ್ಷ
ವಿದ್ಯಾರ್ಹತೆ : ದ್ವಿತೀಯ ಪಿಯುಸಿ/ ಮೂರು ವರ್ಷದ ಡಿಪ್ಲೊಮಾ/ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹಿರಿಯ ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ , ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ನೋಡಿ