ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿ ಪರಿಷ್ಕೃತ ಮಾರ್ಗಸೂಚಿಯಂತೆ, ಬೀದರ್ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 17 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 96 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 113 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-07-2021 ರ ಒಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
ಅಭ್ಯರ್ಥಿಯ ವಯಸ್ಸು 18-35 ವರ್ಷದೊಳಗಿನವರಾಗಿರಬೇಕು. ( ಕಾರ್ಯಕರ್ತರ ಹುದ್ದೆಗಳಿಗೆ ಮಾತ್ರ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ಅಂದರೆ ಗರಿಷ್ಠ 45 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ)
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು.
ಅಂಗವಿಕಲರು ಸಹಾಯಕಿ ಹುದ್ದೆಗೆ ಅನರ್ಹರಾಗಿರುತ್ತಾರೆ.
ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭ : 25-06-2021
ಅರ್ಜಿಗಳನ್ನು ಸಲ್ಲಿಕೆಯ ಕೊನೆಯ ದಿನಾಂಕ : 31-07-2021
ಆಯ್ಕೆ ಸಮಿತಿಯಿಂದ ಅರ್ಜಿಗಳ ಪರಿಶೀಲನೆ : 10-08-2021
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಮಿತಿಯಿಂದ ಅನುಮೋದನೆ ಪಡೆಯುವುದು : 24-08-2021
ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿರುವ ಹಾಗೂ ಸಾರ್ವಜನಿಕ ಆಕ್ಷೇಪಣೆ ಸಲ್ಲಿಸುವಿಕೆಗೆ ಕಾಲಾವಕಾಶ : 03-09-2021
ಬಂದ ಆಕ್ಷೇಪಣೆಗಳನ್ನು ಪರಿಶೀಲನೆ : 24-09-2021
ಅಂತಿಮ ಆಯ್ಕೆ ಪಟ್ಟಿಗೆ ಸಮಿತಿಯಿಂದ ಅನುಮೋದನೆ ಪಡೆಯುವುದು: 22-10-2021