KEA BMTC Conductor Jobs: 2500 ಸಾವಿರ ಬಿಎಂಟಿಸಿ ಕಂಡಕ್ಟರ್‌ ಹುದ್ದೆಗೆ ಅಧಿಸೂಚನೆ ಬಿಡುಗಡೆ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ.18, ಹುದ್ದೆಯ ಸಂಪೂರ್ಣ ವಿವರ ಇಲ್ಲಿದೆ

Written By sarkari

Lorem ipsum dolor sit amet consectetur pulvinar ligula augue quis venenatis. 

Advertisements

KEA BMTC Conductor Recruitment 2024: 2500 ಗ್ರೇಡ್ III ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಬೆಂಗಳೂರು ಮೆಟ್ರೋಪಾಲಿಟನ್ ಸಾರಿಗೆ ನಿಗಮವು ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದ್ದು, ಇದೀಗ ನೋಟಿಫಿಕೇಶನ್‌ ಜಾರಿ ಮಾಡಿದೆ. ಒಟ್ಟು 2500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲು ಇಚ್ಛಿಸುವವರು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹದು. ಆಸಕ್ತ ಅಭ್ಯರ್ಥಿಗಳು 18-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; ಎಪ್ರಿಲ್‌ 19, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; ಮೇ. 18, 2024
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: ಮೇ. 19, 2024

ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ
ಸಂಸ್ಥೆಯ ಹೆಸರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯು ಗ್ರೇಡ್‌ III (ಕಂಡಕ್ಟರ್)‌ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 2500 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18660-25300/- ವೇತನವಿರಲಿದೆ.

ಹುದ್ದೆ ಸಂಖ್ಯೆ:
ಮಿಕ್ಕುಳಿದ ವೃಂದ-2286 ಹುದ್ದೆಗಳು
ಸ್ಥಳೀಯ ವೃಂದ-214 ಹುದ್ದೆಗಳು
ಒಟ್ಟು 2500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಪಿಯುಸಿ (ಆರ್ಟ್ಸ್‌/ಕಾಮರ್ಸ್‌/ ಸೈನ್ಸ್‌) ನಲ್ಲಿ ತೇರ್ಗಡೆ ಅಥವಾ 10+2 ಐ.ಸಿ.ಎಸ್‌.ಇ/ಸಿ.ಬಿ.ಎಸ್‌.ಇ ಉತ್ತೀರ್ಣರಾಗಿರತಕ್ಕದ್ದು. ಅಥವಾ ತತ್ಸಮಾನ ವಿದ್ಯಾರ್ಹತೆ ಅಂದರೆ, ತಾಂತ್ರಿಕ ಶಿಕ್ಷಣ ಇಲಾಖೆಯಿಂದ 03 ವರ್ಷಗಳ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರತಕ್ಕದ್ದು.

ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಕನಿಷ್ಠ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ವರ್ಗ ಕನಿಷ್ಠ 18 ವರ್ಷಗಳು, 35 ವರ್ಷ ಗರಿಷ್ಠ, 2ಎ/2ಬಿ/3ಎ/3ಬಿ 18 ವರ್ಷ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು, ಹಾಗೂ 38 ವರ್ಷ ಗರಿಷ್ಠ ವಯೋಮಿತಿಯನ್ನು ನೀಡಲಾಗಿದೆ. ಪ.ಜಾ/ಪ.ಪಂ/ಪ್ರವರ್ಗ-1 ಇವರಿಗೆ 18 ವರ್ಷ ಕನಿಷ್ಠ ವಯೋಮಿತಿ, 40 ವರ್ಷ ಗರಿಷ್ಠ ವಯೋಮಿತಿಯನ್ನು ಮೀರಬಾರದು. ಮಾಜಿ ಸೈನಿಕ/ಇಲಾಖಾ ಅಭ್ಯರ್ಥಿ ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.

ತರಬೇತಿ ಅವಧಿ ಭತ್ಯೆ ಮತ್ತು ವೇತನ ಶ್ರೇಣಿ: ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷ ಕಾಲ ವೃತ್ತಿ ತರಬೇತಿಯಾಗಿ ನಿಯೋಜನೆ ಮಾಡಲಾಗುವುದು. ಈ ತರಬೇತಿ ಅವಧಿಯಲ್ಲಿ ಮಾಸಿಕ ಸಮಗ್ರ ತರಬೇತಿ ಭತ್ಯೆಯಾಗಿ 9,100ರೂ.ನ್ನು ನೀಡಲಾಗುವುದು. ಆಯ್ಕೆಗೊಂಡ ಅಭ್ಯರ್ಥಿಗಳು ಒಂದು ವರ್ಷದ ವೃತ್ತಿ ತರಬೇತಿ ಪೂರೈಸಿದ ನಂತರ ಎರಡು ವರ್ಷಗಳ ಅವಧಿಗೆ ನಿಯಮಾನುಸಾರ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಯನ್ನು ನೇಮಕ ಮಾಡಲಾಗುವುದು. ವೇತನ ಶ್ರೇಣಿ ಈ ರೀತಿ ಇರಲಿದೆ.
18660-230-19120-280-20240-410-22700-520-25300

ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ-2ಎ/2ಬಿ/3ಎ/3ಬಿ) ಅಭ್ಯರ್ಥಿಗಳು ರೂ.750 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.500 ಅರ್ಜಿ ಶುಲ್ಕ ವಿಧಿಸಲಾಗಿದೆ.

ಪರೀಕ್ಷಾ ಕೇಂದ್ರಗಳು: ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೀದರ್‌, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿಯಲ್ಲಿ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ನೋಟಿಫಿಕೇಶನ್‌ ಕ್ಲಿಕ್‌ ಮಾಡಿ.
New Notification RPC, New Notification HK, Apply Online