BOI Jobs: ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಉದ್ಯೋಗಾವಕಾಶ: ಮಾಸಿಕ 94 ಸಾವಿರ ವೇತನ

Advertisements

BOI Recruitment 2024: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 15 ಹುದ್ದೆಗಳು ಖಾಲಿ ಇದ್ದು, ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲಿಚ್ಛಿಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅಭ್ಯರ್ಥಿಗಳು 03-Apr-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಮಾತ್ರವೇ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಕುರಿತ ವಿವರ ಇಲ್ಲಿದೆ;
ಬ್ಯಾಂಕ್ ಆಫ್ ಇಂಡಿಯಾ (BOI)ದಲ್ಲಿ ಒಟ್ಟು 15 ಹುದ್ದೆಗಳು ಖಾಲಿ ಇದೆ. ಭಾರತದಾದ್ಯಂತ ಹುದ್ದೆ ಮಾಡಲು ಇಚ್ಛಿಸುವವರು ಭದ್ರತಾ ಅಧಿಕಾರಿ (ಸೆಕ್ಯುರಿಟಿ ಆಫೀಸರ್‌) ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು;
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20-03-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2024

ವೇತನ: ಮೇಲೆ ತಿಳಿಸಿದ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.64820-93960/- ವೇತನವಿರಲಿದೆ.

ವಿದ್ಯಾರ್ಹತೆ: BOI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದವಿಶ್ವವಿದ್ಯಾಲಯಗಳಿಂದ ಪದವಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯೋಮಿತಿ 25 ವರ್ಷ ಮತ್ತು ಗರಿಷ್ಠ 35 ವರ್ಷಗಳನ್ನು ಮೀರಿರಬಾರದು. OBC ಅಭ್ಯರ್ಥಿಗಳಿಗೆ 03 ವರ್ಷ, SC/ST/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: SC/ST ಅಭ್ಯರ್ಥಿಗಳು: ರೂ.175/-, ಸಾಮಾನ್ಯ ಅಭ್ಯರ್ಥಿಗಳು: ರೂ.850/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್‌ಲೈನ್‌ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.