33 ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

Advertisements

ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

ಹುದ್ದೆ : ಸಹಾಯಕ ಪ್ರಾಧ್ಯಾಪಕರ ಹುದ್ದೆ ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆ : 33

ಸಂಸ್ಥೆಯ ಅಂತರ್ಜಾಲದಲ್ಲು ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ‌ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ ಲೋಡ್ ಮಾಡತಕ್ಕದ್ದು. ಹಾಗೂ ಸ್ವೀಕೃತಿ ಪ್ರತಿ ಸಂಬಂಧಪಟ್ಟ ದಾಖಲಾತಿಗಳ ಸ್ವದೃಢೀಕೃತ ಎರಡು ಪ್ರತಿಗಳನ್ನು ದಿನಾಂಕ ; 30-06-2021 ರ ಸಂಜೆ 5 ಗಂಟೆಯೊಳಗೆ ಈ ಕಚೇರಿಗೆ ಸಲ್ಲಿಸತಕ್ಕದ್ದು ಹಾಗೂ ಅರ್ಜಿ ಶುಲ್ಕ ರೂ. 2000/- ಗಳನ್ನು ಆನ್ಲೈನ್ ಮೂಲಕ ಪಾವತಿಸತಕ್ಕದ್ದು.

ಅಭ್ಯರ್ಥಿಗಳಿಗೆ ವಿಭಾಗವಾರು ಸಂದರ್ಶನದ ದಿನಾಂಕವನ್ನು ಪ್ರತ್ಯೇಕವಾಗಿ ಸಂಸ್ಥೆಯ ವೆಬ್‌ಸೈಟ್‌ ನಲ್ಲಿ ತಿಳಿಸಲಾಗುವುದು. ಅವಧಿ ಮುಗಿದ ನಂತರ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವ ದಾಖಲಾತಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment