ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ( ಬಿಪಿಸಿಎಲ್) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಜೂನ್ 15 , 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಹುದ್ದೆ: ನಿರ್ದೇಶಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಎಂಬಿಎ/ಪಿಜಿಡಿಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ : ಕನಿಷ್ಠ 45 ರಿಂದ ಗರಿಷ್ಠ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ : ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.1,80,000/- ರಿಂದ ರೂ. 3,40,000/- ವೇತನವನ್ನು ನೀಡಲಾಗುವುದು.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೂನ್.15, ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ