ಬಾರ್ಡರ್ ರೋಡ್ ಆರ್ಗನೈಸೇಶನ್ ( ಬಿಆರ್ ಒ) ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆ ಸಂಖ್ಯೆ : ಒಟ್ಟು 459 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 5, 2021
ವಯೋಮಿತಿ : ಹುದ್ದೆಗಳಿಗನುಸಾರವಾಗಿ ಕನಿಷ್ಠ 18 ಹಾಗೂ ಗರಿಷ್ಠ 27 ವರ್ಷ ವಯಸ್ಸಿನವರಾಗಿರಬೇಕು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ: ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರವಾಗಿ ತಿಂಗಳಿಗೆ ರೂ. 18,000/- ರಿಂದ ರೂ. 92,300/- ರೂ.ಗಳವರೆಗೆ ವೇತನ ವಿರುತ್ತದೆ.
ವಿದ್ಯಾರ್ಹತೆ: 12ನೇ ತರಗತಿ, 10 ನೇ ತರಗತಿ ಹಾಗೂ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ.50 ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.ಪ.ಜಾತಿ/ ಪ.ಪಂಗಡ/ ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ವಿಳಾಸ: Commandant,GREF CENTRE,Doighi camp, Pune -411015