ಬಿಎಸ್ ಎಫ್ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನಲ್ಲಿ ವಿವಿಧ ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
ಹುದ್ದೆ : 65 ಅಸಿಸ್ಟೆಂಟ್ ಏರ್ ಕ್ರಾಫ್ಟ್ ಮೆಕ್ಯಾನಿಕ್, ಅಸಿಸ್ಟೆಂಟ್ ರೇಡಿಯೋ ಮೆಕ್ಯಾನಿಕ್ ಮತ್ತು ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜುಲೈ 26 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ : 10 ನೇ ತರಗತಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ : ಕನಿಷ್ಠ 20 ರಿಂದ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,700/- ರಿಂದ ರೂ.92,300/- ಗಳವರೆಗೆ ವೇತನವನ್ನು ನೀಡಲಾಗುತ್ತದೆ.
ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಿದ್ಯಾರ್ಹತೆ : 10 ನೇ ತರಗತಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ರೂ.100/- ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು. ಇತರೆ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.