BSF Recruitment 2024: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 07 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಜೂನಿಯರ್ ಏರ್‌ಕ್ರಾಫ್ಟ್ ಮೆಂಟೆನೆನ್ಸ್ ಇಂಜಿನಿಯರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಈ ಹುದ್ದೆಗಳಿಗೆ ಪೋಸ್ಟಿಂಗ್ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 24-Jun-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 25-05-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-06-2024
ಹುದ್ದೆಯ ಕುರಿತ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಗಡಿ ಭದ್ರತಾ ಪಡೆ (BSF)ಯಲ್ಲಿ ಖಾಲಿ ಇರುವ ಜೂನಿಯರ್ ಏರ್‌ಕ್ರಾಫ್ಟ್ ನಿರ್ವಹಣಾ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ರೂ.67700-208700/- ಪ್ರತಿ ತಿಂಗಳು ವೇತನ ದೊರಕಲಿದೆ.
ವಿದ್ಯಾರ್ಹತೆ: BSF ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್ಸ್/ಏರೋನಾಟಿಕಲ್ ಇಂಜಿನಿಯರಿಂಗ್‌ನಲ್ಲಿ B.E ಅಥವಾ B.Tech ತೇರ್ಗಡೆ ಮಾಡಿರಬೇಕು.
ವಯೋಮಿತಿ: ಗಡಿ ಭದ್ರತಾ ಪಡೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 24-ಜೂನ್-2024 ರಂತೆ 35 ವರ್ಷ ಆಗಿರಬೇಕು. OBC ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: SC/ST/BSF ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ/ಮಹಿಳಾ ಅಭ್ಯರ್ಥಿಗಳಿಗೆ ರೂ.47.2/-, ಹಾಗೂ ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ.447.2/- ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ದೈಹಿಕ ಮಾನದಂಡಗಳ ಪರೀಕ್ಷೆ, ಮೌಖಿಕ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.