BSF Recruitment 2024: ಡೈರೆಕ್ಟೋರೇಟ್ ಜೆನೆರಲ್ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಾನ್‌ಗೆಜೆಟೆಡ್ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 162 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಬಿಎಸ್‌ಎಫ್‌ನ ಈ ಹುದ್ದೆಗಳಿಗೆ 30 ದಿನ ಕಾಲಾವಕಾಶವಿದೆ. ಡಿಟೇಲ್ಡ್ ನೋಟಿಫಿಕೇಶನ್ ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ. ಆನ್‌ಲೈನ್ ಮೂಲಕ ಮಾತ್ರವೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು.
ಹುದ್ದೆ: ಎಸ್‌ಐ, ಹೆಡ್‌ಕಾನ್ಸ್‌ಟೇಬಲ್, ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ: ಎಸ್‌ಐ -11 ಹುದ್ದೆಗಳು, ಹೆಡ್‌ಕಾನ್ಸ್‌ಟೇಬಲ್ -105 ಹುದ್ದೆಗಳು, ಕಾನ್ಸ್‌ಟೇಬಲ್ ಹುದ್ದೆಗಳು-46 ಹುದ್ದೆಗಳು
ಒಟ್ಟು 162 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ, ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಎಸ್‌ಐ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛೆ ಪಡುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಮಾಡಿರಬೇಕು. ಹೆಡ್‌ಕಾನ್ಸ್‌ಟೇಬಲ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ ಪಾಸ್ ಆಗಿರಬೇಕು. ಕಾನ್ಸ್‌ಟೇಬಲ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ವೇತನ: ಎಸ್‌ಐ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ Rs.35,400- 1,12,400. (level-6) ನೀಡಲಾಗುವುದು.
ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಆಯ್ಕೆಯಾದವರಿಗೆ Rs.25,500-81,100 (Level-4) ವೇತನ ನೀಡಲಾಗುವುದು.
ಕಾನ್ಸ್‌ಟೇಬಲ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ Rs.21,700-69,100. (Level-3) ವೇತನ ನಿಗದಿಪಡಿಸಲಾಗಿದೆ.
ವಯೋಮಿತಿ: ಎಸ್‌ಐ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 22-28 ವರ್ಷದೊಳಗಿರಬೇಕು.
ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 20-25 ವರ್ಷದೊಳಗಿರಬೇಕು.
ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 20-25 ವರ್ಷದೊಳಗಿರಬೇಕು.
ಅರ್ಜಿ ಶುಲ್ಕ: ಗ್ರೂಪ್ ಬಿ ಹುದ್ದೆಗೆ ಅರ್ಜಿ ಸಲ್ಲಿಸುವವರು ರೂ.200, ಗ್ರೂಪ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು ರೂ.100 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್‌ಬ್ಯಾಂಕಿಂಗ್ ಮೂಲಕ ಮಾತ್ರವೇ ಪಾವತಿ ಮಾಡಬೇಕು.