BSNL Recruitment 2024: 558 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಸ್‌ಎನ್‌ಎಲ್-‌ ತಿಂಗಳಿಗೆ 50ಸಾವಿರಕ್ಕಿಂತಲೂ ಹೆಚ್ಚು ಸಂಬಳ

Written By sarkari

Lorem ipsum dolor sit amet consectetur pulvinar ligula augue quis venenatis. 

Advertisements

BSNL Recruitment 2024: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 558 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಶೀಘ್ರದಲ್ಲೇ ಈ ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸುವ ದಿನಾಂಕ ಬಿಡುಗಡೆಯಾಗಲಿದೆ. ಬಿಎಸ್‌ಎನ್‌ಎಲ್‌ ನಲ್ಲಿ ಸೀನಿಯರ್ ಎಕ್ಸಿಕ್ಯೂಟಿವ್ ಟ್ರೈನಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲು ಇಚ್ಛಿಸುವವರು ಈ ಉದ್ಯೋಗದ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಪ್ರಮುಖ ದಿನಾಂಕಗಳು;
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಶೀಘ್ರದಲ್ಲೇ ಪ್ರಕಟವಾಗಲಿದೆ.
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ ಪ್ರಕಟವಾಗಲಿದೆ.

ಹುದ್ದೆಗಳ ವಿವರ;
ಹುದ್ದೆಯ ಹೆಸರು: ಭಾರತ್‌ ಸಂಚಾರ್‌ ನಿಗಮ್‌ ಲಿಮಿಟೆಡ್‌ (BSNL) ನಲ್ಲಿ ಸೀನಿಯರ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು ಮತ್ತು ಸಂಖ್ಯೆ:
ಟೆಲಿಕಾಂ ಕಾರ್ಯಾಚರಣೆಗಳು- 450 ಹುದ್ದೆಗಳು
ಹಣಕಾಸು – 84 ಹುದ್ದೆಗಳು
ನಾಗರಿಕ – 13 ಹುದ್ದೆಗಳು
ಎಲೆಕ್ಟ್ರಿಕಲ್- 11 ಹುದ್ದೆಗಳು
ಹುದ್ದೆ ಸಂಖ್ಯೆ: ಒಟ್ಟು 558 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.24900-50500/- ಪ್ರತಿ ತಿಂಗಳು ವೇತನ ನೀಡಲಾಗುವುದು.

ವಿದ್ಯಾರ್ಹತೆ: ಟೆಲಿಕಾಂ ಕಾರ್ಯಾಚರಣೆ- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.E ಅಥವಾ B.Tech in EEE/ECE/CSE/IT/Instrumentation Engineering ತೇರ್ಗಡೆ ಹೊಂದಿರಬೇಕು.
ಹಣಕಾಸು- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು CA, CMA ಮಾಡಿಬೇಕು.
ಸಿವಿಲ್- ಈ ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್ ಮಾಡಿರಬೇಕು
ಎಲೆಕ್ಟ್ರಿಕಲ್: ಈ ಹುದ್ದೆಗೆ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್ ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ