ತುಮಕೂರಿನಲ್ಲಿ ಕ್ಯಾಂಪಸ್ ಸಂದರ್ಶನ

Advertisements

ತುಮಕೂರಿನಲ್ಲಿರುವ ಶ್ರೀ ಸಿದ್ಧಗಂಗಾ ಐಟಿಐ ಕಾಲೇಜ್‌ನಲ್ಲಿ ಕ್ಯಾಂಪಸ್‌ ಸಂದರ್ಶನ ನಡೆಯಲಿದೆ. ಶ್ರೀ ಸಿದ್ಧಗಂಗಾ ಐ.ಟಿ.ಐ ಕಾಲೇಜಿನಲ್ಲಿ ಮಾರ್ಚ್ 30 ರಂದು ಬೆಳಗ್ಗೆ 9 ಗಂಟೆಗೆ ಕ್ಯಾಂಪಸ್ ಸಂದರ್ಶನ ನಡೆಯಲಿದೆ.
ರಾಮನಗರದ ಬಿಡದಿಯಲ್ಲಿರುವ ಬಹುರಾಷ್ಟ್ರೀಯ ಕಂಪನಿ ಕ್ಯಾಂಪಸ್ ಸಂದರ್ಶನವನ್ನು ಆಯೋಜನೆ ಮಾಡಿದೆ.

2020 ರ ಐಟಿಐ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಬರಬಹುದು. ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತಯ ಐಟಿಐ ಅಂಕಪಟ್ಟಿಯನ್ನು ತಮ್ಮನ ಜೊತೆ ತರಬೇಕು.

ಫಿಟ್ಟರ್,ಟರ್ನರ್, ಎಂಎಂಟಿಎಂ, ಎಂಎಂವಿ, ಮೆಕಾನಿಕ್ ಡೀಸೆಲ್, ಎಂಎಆರ್‌ಸಿ, ವೆಲ್ಡರ್ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳು ಕ್ಯಾಂಪಸ್‌ ಸಂದರ್ಶನದಲ್ಲಿ ಭಾಗಿಯಾಬಹುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಎನ್‌.ಸುನಿಲ್‌ ಪ್ರಾಂಶುಪಾಲರು, ಶ್ರೀ ಸಿದ್ಧಗಂಗಾ ಕೈಗಾರಿಕಾ ತರಬೇತಿ ಸಂಸ್ಥೆ, ಬಟವಾಡಿ ಇವರನ್ನು ಸಂಪರ್ಕಿಸಬಹುದು.

Leave a Comment