ಕೆನರಾ ಬ್ಯಾಂಕ್, ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 30,2021
ಹುದ್ದೆ : ಚೀಫ್ ಡಿಜಿಟಲ್ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಬಿ.ಇ/ಬಿ.ಟೆಕ್ ಮತ್ತು ಎಂಬಿಎ ಮತ್ತು ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ನಲ್ಲಿ ಸರ್ಟಿಫಿಕೇಶನ್ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ : ಎಪ್ರಿಲ್ 30, 2021 ರ ಅನ್ವಯ ಕನಿಷ್ಠ 35 ರಿಂದ ಗರಿಷ್ಠ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳು ರೂ. 1180/- ರೂ ಮತ್ತು ಪ.ಜಾತಿ/ ಪ.ಪಂಗಡ/pwd/ ಮಹಿಳಾ ಅಭ್ಯರ್ಥಿಗಳಿಗೆ ರೂ. 118 ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 30, 2021 ರೊಳಗೆ ತಲುಪಿಸಬೇಕಾಗುತ್ತದೆ.
ಕಚೇರಿ ವಿಳಾಸ : The Senior Manager, Canara Bank, Recruitment Cell, HR Wing, Head Office 112, JC Road, Bengaluru-560002
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ