Canara Bank: ಕೆನರಾ ಬ್ಯಾಂಕ್‌ನಲ್ಲಿ ಉದ್ಯೋಗ; ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ

Advertisements

Canara Bank Recruitment 2024: ಕೆನರಾ ಬ್ಯಾಂಕ್‌ನಲ್ಲಿ ಕೆಲಸ ಮಾಡಲು ಇಚ್ಛೆ ಪಡುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ. ಕೆನರಾ ಬ್ಯಾಂಕ್‌ ಖಾಲಿ ಇರುವ ಒಂದು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತರು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಸೆಕ್ರೆಟರಿ-ಅಕೌಂಟ್ಸ್‌ ಮತ್ತು ಅಡ್ಮಿನಿಸ್ಟೇಷನ್‌ ಹುದ್ದೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಕೆನರಾ ಬ್ಯಾಂಕಿನ ಖಾತೆಗಳು ಮತ್ತು ಆಡಳಿತ ಪ್ರಕ್ರಿಯೆಯನ್ನು ನಿರ್ವಹಿಸಬೇಕು. ಅರ್ಜಿ ಸಲ್ಲಿಕೆಗೆ ಜೂನ್‌ 3, 2024 ಕೊನೆಯ ದಿನಾಂಕವಾಗಿದ್ದು, 12 ತಿಂಗಳ ಪ್ರೊಬೆಷನರಿ ಅವಧಿ ಇರಲಿದ್ದು, ಈ ಕೂಡಲೇ ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 03-06-2024

ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ;
ಸಂಸ್ಥೆ ಹೆಸರು: ಕೆನರಾ ಬ್ಯಾಂಕ್‌ ತನ್ನಲ್ಲಿ ಖಾಲಿ ಇರುವ ಸೆಕ್ರೆಟರಿ-ಅಕೌಂಟ್ಸ್‌ ಮತ್ತು ಅಡ್ಮಿನಿಸ್ಟ್ರೇಷನ್‌ (Secretary- Accounts and Administration) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 28 ವರ್ಷ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು, ಇತರ ವರ್ಗಗಳಿಗೆ 25 ಗರಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ವಿದ್ಯಾಭ್ಯಾಸ: ಬಿಕಾಂ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ್‌ ಜ್ಞಾನದ ಅಗತ್ಯವಿರಬೇಕು.

ಅನುಭವ: ಲೆಕ್ಕಪರಿಶೋಧಕ ಸಾಫ್ಟ್‌ವೇರ್‌ ಜ್ಞಾನದೊಂದಿಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತವನ್ನು ನಿರ್ವಹಿಸುವಲ್ಲಿ ಎರಡು ವರ್ಷಗಳ ಅನುಭವ ಇರಬೇಕು.

ವೇತನ: ಮೇಲೆ ತಿಳಿಸಿದ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30000 ವೇತನ ಇರಲಿದೆ.

ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.300 ಅರ್ಜಿ ಶುಲ್ಕವಿರಲಿದೆ. ಇತರೆ ಅಭ್ಯರ್ಥಿಗಳಿಗೆ ರೂ.500 ಅರ್ಜಿ ಶುಲ್ಕ ಪಾವತಿ ಮಾಡಬೇಕು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್‌ ಮಾಡಿ ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ನೇರ ಸಂದರ್ಶದನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ