IIM CAT ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭ

Advertisements

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIMS) ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಿದೆ.

ಐಐಎಂ ಅಹಮದಬಾದ್ ಈ ಬಾರಿ ಪರೀಕ್ಷೆಯನ್ನು ಆಯೋಜಿಸುತ್ತಿದೆ. 158 ನಗರಗಳಲ್ಲಿ ಈ ಬಾರಿ ಪರೀಕ್ಷೆ ನಡೆಯಲಿದೆ. ಟಾಪ್ ಮ್ಯಾನೇಜ್ಮೆಂಟ್ ಸೀಟಿಗಾಗಿ ನಡೆಯುವ ಪರೀಕ್ಷೆ ಇದಾಗಿದೆ.

ನವೆಂಬರ್ 28, 2021 ರಂದು 3 ಸೆಶನ್ ಗಳಲ್ಲಿ ಈ ಬಾರಿ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಆಗಸ್ಟ್ 4,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 15, 2021
ಪ್ರವೇಶ ಪತ್ರ ಬಿಡುಗಡೆ ದಿನಾಂಕ : ಅಕ್ಟೋಬರ್ 17, 2021
ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೊನೆಯ ದಿನಾಂಕ : ನವೆಂಬರ್ 17, 2021
ಪರೀಕ್ಷೆ ದಿನಾಂಕ : ನವೆಂಬರ್ 28, 2021

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ iimcat.ac.in. ಗೆ ಭೇಟಿ ನೀಡಿ, ನಂತರ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ ನಂತರ ಪ್ರಿಂಟೌಟ್ ತೆಗೆದುಕೊಳ್ಳಿ.

Leave a Comment