Category: Central Govt Jobs

Central Govt Jobs News in Kannada, Central Govt Employment News in Kannada, UPSC, Indian Railway Jobs, Bank Jobs News, Airforce Recruitment, Indian Army, Agniveer Jobs updates all Central govt jobs read in Sarakarijobs.com

  • UPSC Jobs: ಯುಪಿಎಸ್‌ಸಿ ಮೂಲಕ 827 ಹುದ್ದೆಗಳ ಭರ್ತಿ; ಕೇಂದ್ರ ಸರಕಾರದ ಹುದ್ದೆಗಳಿಗೆ ಎ.30 ರೊಳಗೆ ಅರ್ಜಿ ಸಲ್ಲಿಸಿ

    UPSC Jobs: ಯುಪಿಎಸ್‌ಸಿ ಮೂಲಕ 827 ಹುದ್ದೆಗಳ ಭರ್ತಿ; ಕೇಂದ್ರ ಸರಕಾರದ ಹುದ್ದೆಗಳಿಗೆ ಎ.30 ರೊಳಗೆ ಅರ್ಜಿ ಸಲ್ಲಿಸಿ

    UPSC Recruitment 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 827 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕ ವಿಭಾಗೀಯ ವೈದ್ಯಕೀಯ ಅಧಿಕಾರಿ, ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲಿಚ್ಛಿಸುವವರು ಈ ಅವಕಾಶವನ್ನು ಬಳಸಬಹುದು. ಆಸಕ್ತ ಅಭ್ಯರ್ಥಿಗಳು 30-Apr-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾದ ಆರಂಭಿಕ ದಿನಾಂಕ: 10-04-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾದ ಕೊನೆಯ ದಿನಾಂಕ: 30-Apr-2024
    OTR ಅನ್ನು ಮಾರ್ಪಡಿಸುವ ಕೊನೆಯ ದಿನಾಂಕ: 07-ಮೇ-2024

    ಹುದ್ದೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ.
    ಸಂಸ್ಥೆಯ ಹೆಸರು: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಇಲ್ಲಿ ಖಾಲಿ ಇರುವ 827 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಹಾಯಕ ವಿಭಾಗೀಯ ವೈದ್ಯಕೀಯ ಅಧಿಕಾರಿ, ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100-177500/- ವೇತನ ದೊರಕಲಿದೆ.

    ಹುದ್ದೆ ಹೆಸರು ಮತ್ತು ಸಂಖ್ಯೆ:
    ವೈದ್ಯಕೀಯ ಅಧಿಕಾರಿ (GDMO) – 163 ಹುದ್ದೆಗಳು
    ಸಹಾಯಕ ವಿಭಾಗೀಯ ವೈದ್ಯಾಧಿಕಾರಿ- 450 ಹುದ್ದೆಗಳು
    ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿ- 14 ಹುದ್ದೆಗಳು
    ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ Gr-II -200 ಹುದ್ದೆಗಳು

    ಶೈಕ್ಷಣಿಕ ಅರ್ಹತೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ MBBS ತೇರ್ಗಡೆ ಮಾಡಿರಬೇಕು.

    ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಆಗಸ್ಟ್-2024 ರಂತೆ 32 ವರ್ಷಗಳನ್ನು ಮೀರಿರಬಾರದು ಎಂದು ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. OBC ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ:
    SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಇತರ ಎಲ್ಲಾ ಅಭ್ಯರ್ಥಿಗಳು ರೂ.200/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್‌ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • SSC CHSL Recruitment 2024: ಎಸ್‌ಎಸ್‌ಸಿಯಿಂದ ಬಂಪರ್‌ ಉದ್ಯೋಗಾವಕಾಶ; 3712 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೇಗ ಅಪ್ಲೈ ಮಾಡಿ

    SSC CHSL Recruitment 2024: ಎಸ್‌ಎಸ್‌ಸಿಯಿಂದ ಬಂಪರ್‌ ಉದ್ಯೋಗಾವಕಾಶ; 3712 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೇಗ ಅಪ್ಲೈ ಮಾಡಿ

    SSC CHSL Recruitment 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 3712 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಸಂಯೋಜಿತ ಹೈಯರ್ ಸೆಕೆಂಡರಿ (10+2) ಮಟ್ಟದ LDC/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಮತ್ತು DEO ಪೋಸ್ಟ್‌ಗಳನ್ನು SSC CHSL ಅಧಿಕೃತ ಅಧಿಸೂಚನೆಯಯಲ್ಲಿ ಭರ್ತಿ ಮಾಡುವ ಕುರಿತು ಹೇಳಿದೆ. ಅಖಿಲ ಭಾರತ ಸರ್ಕಾರದಲ್ಲಿ ಈ ಹುದ್ದೆಯ ಪೋಸ್ಟಿಂಗ್‌ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 07-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08-04-2024
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-ಮೇ-2024
    ಆನ್‌ಲೈನ್ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 08-ಮೇ-2024
    ಅರ್ಜಿ ನಮೂನೆ ತಿದ್ದುಪಡಿ ಮತ್ತು ತಿದ್ದುಪಡಿ ಶುಲ್ಕಗಳ ಆನ್‌ಲೈನ್ ಪಾವತಿಯ ದಿನಾಂಕ: 10 ರಿಂದ 11 ನೇ ಮೇ 2024
    ಶ್ರೇಣಿ-I (ಕಂಪ್ಯೂಟರ್ ಆಧಾರಿತ ಪರೀಕ್ಷೆ) ವೇಳಾಪಟ್ಟಿಯ ದಿನಾಂಕ: ಜೂನ್-ಜುಲೈ 2024
    ಶ್ರೇಣಿ-II ವೇಳಾಪಟ್ಟಿಯ ದಿನಾಂಕ (ಕಂಪ್ಯೂಟರ್ ಆಧಾರಿತ ಪರೀಕ್ಷೆ): ಶೀಘ್ರದಲ್ಲೇ ತಿಳಿಸಲಾಗುವುದು

    ಹುದ್ದೆಯ ಕುರಿತ ಮಾಹಿತಿ ಇಲ್ಲಿದೆ;
    ಸಂಸ್ಥೆಯ ಹೆಸರು: ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಮಟ್ಟ (SSC CHSL) ನಲ್ಲಿ ಒಟ್ಟು 3712 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಎಸ್‌ಎಸ್‌ಸಿಯಲ್ಲಿ LDC/Junior Secretariat Assistant & DEO ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900-92300/- ವೇತನ ನೀಡಲಾಗುವುದು.

    ವಿದ್ಯಾರ್ಹತೆ: SSC CHSL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿ ಪಾಸ್‌ ಮಾಡಿರಬೇಕು.

    ವಯಸ್ಸಿನ ಮಿತಿ: ಮೇಲಿನ ಹುದ್ದೆಗೆ ಅಭ್ಯರ್ಥಿಗಳ ವಯೋಮಿತಿಯು 01-ಆಗಸ್ಟ್-2024 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯಸ್ಸಿನ ಮಿತಿ 27 ವರ್ಷ ಮೀರಿರಬಾರದು. OBC ಅಭ್ಯರ್ಥಿಗಳಿಗೆ 03 ವರ್ಷ,
    SC/ST ಅಭ್ಯರ್ಥಿಗಳಿಗೆ 05 ವರ್ಷ, PwBD (UR/EWS) ಅಭ್ಯರ್ಥಿಗಳಿಗೆ 10 ವರ್ಷ, PwBD (OBC) ಅಭ್ಯರ್ಥಿಗಳಿಗೆ 13 ವರ್ಷ, PwBD (SC/ST) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: SC/ST/PwBD/ಮಹಿಳೆ/ಮಾಜಿ-SM ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಸಾಮಾನ್ಯ/OBC ಅಭ್ಯರ್ಥಿಗಳು ರೂ.100/- ಅರ್ಜಿ ಶುಲ್ಕ ಪಾವತಿ ಮಾಡಬೇಕು. ಆನ್‌ಲೈನ್‌ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಶ್ರೇಣಿ-1 ಲಿಖಿತ ಪರೀಕ್ಷೆ, ಶ್ರೇಣಿ-2 ಲಿಖಿತ ಪರೀಕ್ಷೆ, ಶ್ರೇಣಿ-3 ಕೌಶಲ್ಯ ಪರೀಕ್ಷೆ/ಟೈಪಿಂಗ್ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ: ಕೆಳ ವಿಭಾಗದ ಕ್ಲರ್ಕ್ (LDC)/ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (JSA) ರೂ.19900-63200/- ವೇತನ, ಡೇಟಾ ಎಂಟ್ರಿ ಆಪರೇಟರ್ (DEO) ರೂ.25500-92300/- ವರೆಗೆ ವೇತನ ಲಭಿಸಲಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ.

  • Railway Recruitment 2024: ರೈಲ್ವೆ ರಕ್ಷಣಾ ದಳದಲ್ಲಿ 4660 ಹುದ್ದೆ; ಕಾನ್ಸ್‌ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ನೇಮಕ; ಈಗಲೇ ಅಪ್ಲೈ ಮಾಡಿ

    Railway Recruitment 2024: ರೈಲ್ವೆ ರಕ್ಷಣಾ ದಳದಲ್ಲಿ 4660 ಹುದ್ದೆ; ಕಾನ್ಸ್‌ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ನೇಮಕ; ಈಗಲೇ ಅಪ್ಲೈ ಮಾಡಿ

    RPF Recruitment 2024: ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಒಟ್ಟು 4660 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಬ್ ಇನ್‌ಸ್ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ ಎಂದೇ ಹೇಳಬಹುದು. ಆಸಕ್ತ ಅಭ್ಯರ್ಥಿಗಳು 14-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-04-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2024

    ಹುದ್ದೆಯ ವಿವರ ಇಲ್ಲಿದೆ
    ಸಬ್-ಇನ್ಸ್‌ಪೆಕ್ಟರ್ ; 452 ಹುದ್ದೆಗಳು
    ಕಾನ್ಸ್ಟೇಬಲ್ ; 4208 ಹುದ್ದೆಗಳು
    ಒಟ್ಟು 4660 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ: ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ತೇರ್ಗಡೆ ಹೊಂದಿರಬೇಕು.
    ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪಾಸಾಗಿದ್ದರೆ ಸಾಕು.

    ವಯೋಮಿತಿ: ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 20-28ವರ್ಷದೊಳಗಿರಬೇಕು. ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 18-28ವರ್ಷ ವಯೋಮಿತಿಯಲ್ಲಿರಬೇಕು. ರೈಲ್ವೇ ಸಂರಕ್ಷಣಾ ದಳದ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ:
    SC/ST/ಮಾಜಿ ಸೈನಿಕರು/ಮಹಿಳೆ/ಅಲ್ಪಸಂಖ್ಯಾತರು/EBC ಅಭ್ಯರ್ಥಿಗಳಿಗೆ ರೂ.250/-, ಇತರ ಅಭ್ಯರ್ಥಿಗಳಿಗೆ ರೂ.500/- ಅರ್ಜಿ ಶುಲ್ಕ ವಿಧಿಸಲಾಗಿದೆ. ಆನ್‌ಲೈನ್‌ ಮೂಲಕ ಮಾತ್ರವೇ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಮತ್ತು ದೈಹಿಕ ಮಾಪನ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ: ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35400/-, ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21700/- ವೇತನ ಸಿಗಲಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • CLW Jobs: ಸಿಎಲ್‌ಡಬ್ಲ್ಯೂನಿಂದ ನೇಮಕ ಅಧಿಸೂಚನೆ; 592 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    CLW Jobs: ಸಿಎಲ್‌ಡಬ್ಲ್ಯೂನಿಂದ ನೇಮಕ ಅಧಿಸೂಚನೆ; 592 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    Chittaranjan Locomotive Works Act Recruitment 2024: ರೈಲ್ವೆ ಸಚಿವಾಲಯದ ಚಿತ್ತರಂಜನ್‌ ಲೋಕೋಮೊಟಿವ್‌ ವರ್ಕ್ಸ್‌ ನಲ್ಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಒಟ್ಟು 592 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫಿಟ್ಟರ್/ಟರ್ನರ್‌, ಮಷನಿಸ್ಟ್‌, ವೆಲ್ಡರ್‌, ಇತರೆ ಟ್ರೇಡ್‌ ಹುದ್ದೆಗಳಿದ್ದು, ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ. ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು 18-04-2024 ಕೊನೆಯ ದಿನವಾಗಿದ್ದು, ಬೇಗನೇ ಅರ್ಜಿ ಸಲ್ಲಿಸಿ.

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-04-2024 (ರಾತ್ರಿ 11.59 ಗಂಟೆವರೆಗೆ)

    ಹುದ್ದೆಯ ಕುರಿತ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ;
    ಹುದ್ದೆಯ ಹೆಸರು ಮತ್ತು ಸಂಖ್ಯೆ;
    ಟ್ರೇಡ್‌ವಾರು ಹುದ್ದೆಗಳ ವಿವರ
    ಫಿಟ್ಟರ್ – 200 ಹುದ್ದೆಗಳು
    ಟರ್ನರ್ – 20 ಹುದ್ದೆಗಳು
    ಮಷಿನಿಸ್ಟ್‌ – 56 ಹುದ್ದೆಗಳು
    ವೆಲ್ಡರ್ – 88 ಹುದ್ದೆಗಳು
    ಇಲೆಕ್ಟ್ರೀಷಿಯನ್ – 112 ಹುದ್ದೆಗಳು
    ಎಸಿ ಮೆಕ್ಯಾನಿಕ್ – 04 ಹುದ್ದೆಗಳು
    ಪೇಂಟರ್ – 12 ಹುದ್ದೆಗಳು

    ವಿದ್ಯಾರ್ಹತೆ
    ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳು ಟ್ರೇಡ್‌ಗಳಲ್ಲಿ ಐಟಿಐ ಪಾಸ್‌ ಮಾಡಿರಬೇಕು. ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಪ್ರಮಾಣ ಪತ್ರವನ್ನು ಪಡೆದಿರಬೇಕು. ಈ ಎಲ್ಲಾ ಪ್ರಮಾಣ ಪತ್ರವನ್ನು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಬೇಕು.

    ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯೋಮಿತಿಯು 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ಮೀರಿರಬಾರದು. ವರ್ಗಾವಾರ ವಯೋಮಿತಿಯ ಸಡಿಲಿಕೆಯ ನಿಯಮವನ್ನು ನೀಡಲಾಗಿದೆ.

    ಅರ್ಜಿ ಸಲ್ಲಿಸುವ ರೀತಿ ಹೇಗೆ?
    ಮೊದಲಿಗೆ ಅಭ್ಯರ್ಥಿಗಳು ಆನ್‌ಲೈನ್‌ ಪೋರ್ಟಲ್‌ ನ ಈ ಲಿಂಕ್‌ಗೆ ಭೇಟಿ ನೀಡಬೇಕು. ನಂತರ ರಿಜಿಸ್ಟ್ರೇಷನ್‌ ಪಡೆದು, ಕೆಳಲಾದ ಎಲ್ಲಾ ವಿವರಗಳನ್ನು ನೀಡಿ ಭರ್ತಿ ಮಾಡಿ, ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಸಮಯದಲ್ಲಿ ಅಭ್ಯರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಆಧಾರ್‌ ಕಾರ್ಡ್‌, ಮೀಸಲಾತಿ ಪ್ರಮಾಣ ಪತ್ರಗಳು, ಇ-ಮೇಲ್‌ ವಿಳಾಸ, ಮೊಬೈಲ್‌ ನಂಬರ್‌ ಇತರೆ ಮಾಹಿತಿಯನ್ನು ಹೊಂದಿರಬೇಕು.

  • Railway Jobs 2024: ಸೌಥ್‌ ಈಸ್ಟ್‌ ಸೆಂಟ್ರಲ್‌ ರೈಲ್ವೆಯಲ್ಲಿ ಭರ್ಜರಿ 1113 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

    Railway Jobs 2024: ಸೌಥ್‌ ಈಸ್ಟ್‌ ಸೆಂಟ್ರಲ್‌ ರೈಲ್ವೆಯಲ್ಲಿ ಭರ್ಜರಿ 1113 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

    South East Central Railway Recruitment 2024: ಸೌಥ್‌ ಈಸ್ಟ್‌ ಸೆಂಟ್ರಲ್‌ ರೈಲ್ವೆಯು ( ಆಗ್ನೇಯ ಮಧ್ಯೆ ರೈಲ್ವೆಯ) ರಾಯ್‌ಪುರ್‌ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 1113 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕಚೇರಿಗಳು, ವ್ಯಾಗನ್‌ ರಿಪೇರ್‌ ಆಫೀಸ್‌ಗಳಲ್ಲಿ ಅಗತ್ಯ ಇರುವ ಅಪ್ರೆಂಟಿಸ್‌ ಪೋಸ್ಟ್‌ಗಳ ಭರ್ತಿಗೆ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಯ ಕುರಿತ ಇತರ ಮಾಹಿತಿಯನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 01-05-2024 ರವರೆಗೆ ಸಮಯಾವಕಾಶವಿದ್ದು, ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 02-04-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-05-2024 ರ ರಾತ್ರಿ 11-59 ರವರೆಗೆ.

    ಹುದ್ದೆಯ ಕುರಿತ ಮಾಹಿತಿ ಇಲ್ಲಿದೆ;
    ಡಿಆರ್‌ಎಂ ಆಫೀಸ್ – ರಾಯ್‌ಪುರ್ ವಿಭಾಗದ ಹುದ್ದೆಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ;
    ವೆಲ್ಡರ್ – 161 ಹುದ್ದೆಗಳು
    ಟರ್ನರ್ – 54 ಹುದ್ದೆಗಳು
    ಫಿಟ್ಟರ್ – 207 ಹುದ್ದೆಗಳು
    ಇಲೆಕ್ಟ್ರೀಷಿಯನ್ – 212 ಹುದ್ದೆಗಳು
    ಸ್ಟೆನೋಗ್ರಾಫರ್ (ಇಂಗ್ಲಿಷ್) – 15 ಹುದ್ದೆಗಳು
    ಸ್ಟೆನೋಗ್ರಾಫರ್ (ಹಿಂದಿ) : 8 ಹುದ್ದೆಗಳು
    ಕಂಪ್ಯೂಟರ್ ಆಪರೇಟರ್ / ಪ್ರೋಗ್ರಾಮ್ ಅಸಿಸ್ಟಂಟ್ : 10 ಹುದ್ದೆಗಳು
    ಹೆಲ್ತ್‌ ಅಂಡ್ ಸ್ಯಾನಿಟರಿ ಇನ್ಸ್‌ಪೆಕ್ಟರ್ : 25 ಹುದ್ದೆಗಳು
    ಮಷಿನಿಸ್ಟ್ : 15 ಹುದ್ದೆಗಳು
    ಮೆಕ್ಯಾನಿಕಲ್ ಡೀಸೆಲ್ : 81 ಹುದ್ದೆಗಳು
    ಮೆಕ್ಯಾನಿಕಲ್ ರೆಫ್ರಿಜರೇಟರ್ ಅಂಡ್ ಏರ್‌ ಕಂಡೀಷನರ್ : 21 ಹುದ್ದೆಗಳು
    ಮೆಕ್ಯಾನಿಕ್ ಆಟೋ ಇಲೆಕ್ಟ್ರಿಕಲ್ ಅಂಡ್ ಇಲೆಕ್ಟ್ರಾನಿಕ್ಸ್‌ : 35 ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.

    ವ್ಯಾಗನ್ ರಿಪೇರ್ ಶಾಪ್ ರಾಯ್‌ಪುರ್‌ ಹುದ್ದೆಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ;
    ಫಿಟ್ಟರ್ – 110 ಹುದ್ದೆಗಳು
    ವೆಲ್ಡರ್ – 110 ಹುದ್ದೆಗಳು
    ಮಷಿನಿಸ್ಟ್‌ – 15 ಹುದ್ದೆಗಳು
    ಟರ್ನರ್ – 14 ಹುದ್ದೆಗಳು
    ಇಲೆಕ್ಟ್ರೀಷಿಯನ್ – 14 ಹುದ್ದೆಗಳು
    ಕಂಪ್ಯೂಟರ್ ಆಪರೇಟರ್ / ಪ್ರೋಗ್ರಾಮ್ ಅಸಿಸ್ಟಂಟ್ – 4 ಹುದ್ದೆಗಳು
    ಸ್ಟೆನೋ (ಇಂಗ್ಲಿಷ್) – 1 ಹುದ್ದೆ
    ಸ್ಟೆನೋ (ಹಿಂದಿ) : 1 ಹುದ್ದೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಿದ್ಯಾರ್ಹತೆ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10th ಪಾಸ್‌ ಜೊತೆಗೆ ಐಟಿಐ ವಿವಿಧ ಟ್ರೇಡ್‌ನಲ್ಲಿ ಮಾಡಿರಬೇಕು. ಹಾಗೆನೇ ಎನ್‌ಸಿವಿಟಿ, ಎಸ್‌ಸಿವಿಟಿ ಪ್ರಮಾಣಪತ್ರಗಳನ್ನು ಪಡೆದಿರಬೇಕು.

    ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯೋಮಿತಿಯು 15 ವರ್ಷ, ಗರಿಷ್ಠ 24 ವರ್ಷ ಮೀರಿರಬಾರದು. ಒಬಿಸಿ-3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮತಿ ಸಡಿಲಿಕೆಯನ್ನು ನೀಡಲಾಗಿದೆ.

    ಮಾಸಿಕ ಸ್ಟೈಫಂಡ್‌; ರೂ.8000-10000 ರವರೆಗೆ ಮಾಸಿಕ ಸ್ಟೈಫಂಡ್‌ ನೀಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    https://www.apprenticeshipindia.gov.in/candidate-registration ಗೆ ಅಭ್ಯರ್ಥಿಗಳು ಕ್ಲಿಕ್‌ ಮಾಡಿ. ಇದು ಓಪನ್‌ ಆದ ನಂತರ ಅಲ್ಲಿ ಇಮೇಲ್‌ ವಿಳಾಸ, ಇತರೆ ಮಾಹಿತಿ ನೀಡಬೇಕು. ಆಗ ನಿಮಗೆ ರಿಜಿಸ್ಟ್ರೇಶನ್‌ ದೊರಕುತ್ತದೆ. ನಂತರ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ತಮ್ಮ ಆಧಾರ್ ಕಾರ್ಡ್‌, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಐಟಿಐ ಪಾಸ್ ಸರ್ಟಿಫಿಕೇಟ್‌, ಇತರೆ ಮಾಹಿತಿಗಳನ್ನು ಇಟ್ಟುಕೊಂಡಿರಬೇಕು.

  • Navy Jobs: 4000 ವಿವಿಧ ಹುದ್ದೆಗಳಿಗೆ ಇಂಡಿಯನ್‌ ಮರ್ಚೆಂಟ್‌ ನೇವಿಯಲ್ಲಿ ಅರ್ಜಿ ಆಹ್ವಾನ; ಈಗಲೇ ಅಪ್ಲೈ ಮಾಡಿ

    Navy Jobs: 4000 ವಿವಿಧ ಹುದ್ದೆಗಳಿಗೆ ಇಂಡಿಯನ್‌ ಮರ್ಚೆಂಟ್‌ ನೇವಿಯಲ್ಲಿ ಅರ್ಜಿ ಆಹ್ವಾನ; ಈಗಲೇ ಅಪ್ಲೈ ಮಾಡಿ

    Indian Merchant Navy Recruitment 2024: ಇಂಡಿಯನ್‌ ಮರ್ಚೆಂಟ್‌ ನೇವಿಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 4000 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಸೀಮನ್, ಮೆಸ್ ಬಾಯ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 30-Apr-2024 ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2024
    ಪರೀಕ್ಷಾ ದಿನಾಂಕ: ಮೇ, 2024
    ಫಲಿತಾಂಶದ ತಾತ್ಕಾಲಿಕ ದಿನಾಂಕ: ಲಿಖಿತ ಪರೀಕ್ಷೆಯ 03 ದಿನಗಳ ನಂತರ
    ಹುದ್ದೆಯ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು ಮತ್ತು ಹೆಸರು: ಇಂಡಿಯನ್ ಮರ್ಚೆಂಟ್ ನೇವಿಯಲ್ಲಿ ಒಟ್ಟು 4000 ಹುದ್ದೆಗಳು ಖಾಲಿ ಇದ್ದು, ಸೀಮನ್, ಮೆಸ್‌ಬಾಯ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು. ಈ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.38000-90000/- ವರೆಗೆ ವೇತನವಿರಲಿದೆ.

    ಹುದ್ದೆ ಹೆಸರು ಮತ್ತು ಸಂಖ್ಯೆ;
    ಡೆಕ್ ರೇಟಿಂಗ್ – 721 ಹುದ್ದೆಗಳು
    ಎಂಜಿನ್ ರೇಟಿಂಗ್ – 236 ಹುದ್ದೆಗಳು
    ಸೀಮನ್ – 1432 ಹುದ್ದೆಗಳು
    ಎಲೆಕ್ಟ್ರಿಷಿಯನ್ – 408 ಹುದ್ದೆಗಳು
    ವೆಲ್ಡರ್/ಸಹಾಯಕ – 78 ಹುದ್ದೆಗಳು
    ಮೆಸ್ ಬಾಯ್ – 922 ಹುದ್ದೆಗಳು
    ಕುಕ್ – 203 ಹುದ್ದೆಗಳು

    ಶೈಕ್ಷಣಿಕ ಅರ್ಹತೆ:
    ಡೆಕ್ ರೇಟಿಂಗ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12 ನೇ ತರಗತಿ ಪಾಸಾಗಿರಬೇಕು.
    ಎಂಜಿನ್ ರೇಟಿಂಗ್, ಸೀಮನ್ ಹುದ್ದೆಗೆ ಅರ್ಜಿ ಸಲ್ಲಿಸುವವರು 10 ನೇ ತರಗತಿ ಪಾಸ್‌ ಮಾಡಿರಬೇಕು.
    ಎಲೆಕ್ಟ್ರಿಷಿಯನ್ ಹುದ್ದೆಗೆ 10th ಎಲೆಕ್ಟ್ರಿಷಿಯನ್‌ನಲ್ಲಿ ಐಟಿಐ ಮಾಡಿರುವವರು ಅರ್ಜಿ ಸಲ್ಲಿಸಬಹುದು.
    ವೆಲ್ಡರ್/ಸಹಾಯಕ ಹುದ್ದೆಗೆ 10th ಐಟಿಐ ಮಾಡಿರುವವರು ಅರ್ಜಿ ಸಲ್ಲಿಸಬೇಕು.
    ಮೆಸ್ ಬಾಯ್, ಕುಕ್‌ ಹುದ್ದೆಗೆ 10 ನೇ ತರಗತಿ ಪಾಸ್‌ ಆದವರು ಅರ್ಜಿ ಸಲ್ಲಿಸಬೇಕು.

    ವಯೋಮಿತಿ:
    ಡೆಕ್ ರೇಟಿಂಗ್, ಎಂಜಿನ್ ರೇಟಿಂಗ್ , ಸೀಮನ್ 17.5-25 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು.
    ಎಲೆಕ್ಟ್ರಿಷಿಯನ್, ವೆಲ್ಡರ್/ಸಹಾಯಕ, ಮೆಸ್‌ ಬಾಯ್‌, ಕುಕ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು 17.5-27 ವರ್ಷದೊಳಗಿನವರು ಅರ್ಜಿ ಸಲ್ಲಿಸಬೇಕು.

    ವಯೋಮಿತಿ ಸಡಿಲಿಕೆ: ಭಾರತೀಯ ಮರ್ಚೆಂಟ್ ನೇವಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುವುದು.

    ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲಾ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ:
    ಡೆಕ್ ರೇಟಿಂಗ್ ಹುದ್ದೆಗೆ ರೂ.50000-85000/- ವೇತನವಿರಲಿದೆ.
    ಇಂಜಿನ್ ರೇಟಿಂಗ್ ಹುದ್ದೆಗೆ ರೂ.40000-60000/- ವೇತನ ಸಿಗಲಿದೆ.
    ಸೀಮನ್ ಹುದ್ದೆಗೆ ರೂ.38000-55000/- ವೇತನ ಸಿಗಲಿದೆ.
    ಎಲೆಕ್ಟ್ರಿಷಿಯನ್ ಹುದ್ದೆಗೆ ರೂ.60000-90000/- ವೇತನ ಸಿಗಲಿದೆ.
    ವೆಲ್ಡರ್/ಸಹಾಯಕ ಹುದ್ದೆಗೆ ಆಯ್ಕೆಯಾದವರಿಗೆ ರೂ.50000-85000/- ವೇತನ ಸಿಗಲಿದೆ.
    ಮೆಸ್ ಬಾಯ್, ಕುಕ್‌ ಹುದ್ದೆಗೆ ಆಯ್ಕೆಯಾದವರಿಗೆ ರೂ.40000-60000/- ವೇತನ ಸಿಗಲಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು indianmerchantnavy.com ಗೆ ಭೇಟಿ ನೀಡಿ