Category: Central Govt Jobs

Central Govt Jobs News in Kannada, Central Govt Employment News in Kannada, UPSC, Indian Railway Jobs, Bank Jobs News, Airforce Recruitment, Indian Army, Agniveer Jobs updates all Central govt jobs read in Sarakarijobs.com

  • ಯುಪಿಎಸ್ ಸಿ : 241 ವಿವಿಧ ಹುದ್ದೆ ; ಈ ಕೂಡಲೇ ಅರ್ಜಿ ಸಲ್ಲಿಸಿ

    ಯುಪಿಎಸ್ ಸಿ : 241 ವಿವಿಧ ಹುದ್ದೆ ; ಈ ಕೂಡಲೇ ಅರ್ಜಿ ಸಲ್ಲಿಸಿ

    ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ( ಯುಪಿಎಸ್ ಸಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 27, ಎಪ್ರಿಲ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ( ಯುಪಿಎಸ್ ಸಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 27 ಎಪ್ರಿಲ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಹುದ್ದೆ : ಇಂಜಿನಿಯರಿಂಗ್ ಸರ್ವಿಸ್, ಐಇಎಸ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಹುದ್ದೆಗಳ ವಿವರ : ಇಂಜಿನಿಯರಿಂಗ್ ಸರ್ವಿಸ್ ಎಕ್ಸಾಮಿನೇಷನ್ (ಇಎಸ್ ಇ) – 215
    ಇಂಡಿಯನ್ ಎಕಾನಾಮಿಕ್ ಸರ್ವಿಸ್ ( ಐಇಎಸ್) – 15
    ಇಂಡಿಯನ್ ಸ್ಟಾಟಿಸ್ಟಿಕಲ್ ಸರ್ವಿಸ್( ಐಎಸ್ ಎಸ್) – 11

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 07-04-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-04-2021

    ಅರ್ಜಿ ಶುಲ್ಕ : ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು.
    ಜನರಲ್ ಅಭ್ಯರ್ಥಿಗಳಿಗೆ ರೂ. 200/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪಿಡ್ಬ್ಯುಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವಯೋಮಿತಿ ಹೊಂದಿರಬೇಕು.

    ಹುದ್ದೆ ಸ್ಥಳ : ಭಾರತದೆಲ್ಲೆಡೆ

    ವಿದ್ಯಾರ್ಹತೆ : ಇಂಜಿನಿಯರಿಂಗ್ ಸರ್ವಿಸ್ ಎಕ್ಸಾಮಿನೇಷನ್ (ಇಎಸ್ ಇ) ಗೆ ಡಿಪ್ಲೋಮಾ, ಬಿಇ/ಬಿಟೆಕ್/ ಎಂ.ಎಸ್ಸಿ ಪಡೆದಿರಬೇಕು.
    ಇಂಡಿಯನ್ ಎಕಾನಾಮಿಕ್ ಸರ್ವಿಸ್( ಐಇಎಸ್) ಹುದ್ದೆಗೆ ಪೋಸ್ಟ್ ಗ್ರಾಜ್ಯುಯೇಟ್ ಆಗಿರಬೇಕು.
    ಇಂಡಿಯನ್ ಸ್ಟಾಟಿಸ್ಟಿಕಲ್ ಸರ್ವಿಸ್ (ಐಎಸ್ ಎಸ್) ಡಿಗ್ರಿ, ಮಾಸ್ಟರ್ಸ್ ಡಿಗ್ರಿ ಪಡೆದಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ‌‌ ನೀಡಿ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

    ಆನ್ಲೈನ್ ಅಪ್ಲೈ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕ್ಯಾಪ್‌ಜೆಮಿನಿಯಲ್ಲಿ ಉದ್ಯೋಗವಕಾಶ

    ಕ್ಯಾಪ್‌ಜೆಮಿನಿಯಲ್ಲಿ ಉದ್ಯೋಗವಕಾಶ

    ವೃತ್ತಿಪರ ಸೇವೆಗಳನ್ನು ಒದಗಿಸುವ ವಿಶ್ವದ ಅಗ್ರಗಣ್ಯ ಪೂರೈಕೆದಾರರಲ್ಲಿ ಒಂದಾಗಿರುವ ಕ್ಯಾಪ್‌ಜೆಮಿನಿ ಕಂಪನಿಯು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.

    ಉದ್ಯೋಗ ಸ್ಥಳ : ಪುಣೆ

    ಹುದ್ದೆ : ಎಂಬಿಎ ಇಂಟರ್ನ್‌ಗಳನ್ನು ನೇಮಕಮಾಡಿಕೊಳ್ಳುತ್ತಿದೆ.

    ವೇತನ : ಕಂಪನಿಯು ನೇಮಕಗೊಂಡ ಎಂಬಿಎ ಇಂಟರ್ನ್‌ಗಳಿಗೆ ರೂ. 8500/- ಮಾಸಿಕ ಸ್ಟೈಫಂಡ್ ನೀಡುತ್ತದೆ. ಈ ಹುದ್ದೆಯು ವರ್ಕ್‌ ಫ್ರಂ ಹೋಮ್ ಆಗಿರುತ್ತದೆ.

    ವಿದ್ಯಾರ್ಹತೆ : ಎಂಬಿಎ ಇನ್ ಹೆಚ್‌ಆರ್‌

    ವೆಬ್‌ಕ್ಯಾಮ್ ಫೀಚರ್‌ವುಳ್ಳ ಲ್ಯಾಪ್‌ಟಾಪ್‌ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

    ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚೆಗಿನ ಬಯೋಡಾಟಾವನ್ನು ಇ-ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

    ಇ-ಮೇಲ್ ವಿಳಾಸ :
    [email protected]

  • ಮೈಸೂರು ಜಿಲ್ಲಾ ಪಂಚಾಯತ್ : “ಗ್ರಾಮ ಕಾಯಕ ಮಿತ್ರ” ಹುದ್ದೆಗೆ ಅರ್ಜಿ ಆಹ್ವಾನ

    ಮೈಸೂರು ಜಿಲ್ಲಾ ಪಂಚಾಯತ್ : “ಗ್ರಾಮ ಕಾಯಕ ಮಿತ್ರ” ಹುದ್ದೆಗೆ ಅರ್ಜಿ ಆಹ್ವಾನ

    ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೈಸೂರು ಜಿಲ್ಲೆಗೆ ಒಟ್ಟು 57 ಗ್ರಾಮ ಪಂಚಾಯತಿಗಳಿಗೆ ” ಗ್ರಾಮ ಕಾಯಕ ಮಿತ್ರ” ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಗೆ ಅರ್ಜಿಗಳನ್ನು ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ 08 ತಾಲ್ಲೂಕು ವ್ಯಾಪ್ತಿಯಲ್ಲಿರುವ ಆಯಾ ಗ್ರಾಮ ಪಂಚಾಯಿತಿಗಳನ್ನು ಸಂಪರ್ಕಿಸುವುದು.

    ಅರ್ಹತೆಗಳು : 1. “ಗ್ರಾಮ ಕಾಯಕ ಮಿತ್ರ” ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

    1. ಕನಿಷ್ಠ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
    2. ಅಭ್ಯರ್ಥಿಯು ದಿ.01.01.2021 ಕ್ಕೆ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಗ್ರಾ.ಪಂ.ಯಲ್ಲಿ ನರೇಗಾ ಯೋಜನೆಯಡಿ ಕ್ರಿಯಾ ಶೀಲ ಜಾಬ್‌ ಕಾರ್ಡ್ ಹೊಂದಿರಬೇಕು.
    3. ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ ( 2018-19, 2019-20, 2020-21) ಕನಿಷ್ಠ ಎರಡು ವರ್ಷಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಬೇಕು.
    4. ವಯೋಮಿತಿ ದಿ. 01.01.2021 ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಬಾರದು.
    5. ಓದು ಮತ್ತು ಬರಹ ಚೆನ್ನಾಗಿ ತಿಳಿದಿರಬೇಕು.
    6. ಹುದ್ದೆಗೆ ಅರ್ಜಿ ಸಲ್ಲಿಸುವವರು ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
    7. ಅಭ್ಯರ್ಥಿಯು ಪರಿಣಾಮಕಾತಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣಗಳನ್ನುಹೊಂದಿರಬೇಕು.
    8. ಗ್ರಾಮ ರೋಜ್‌ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು ಇದಕ್ಕೆ ಗ್ರಾಮ ರೋಜ್‌ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

    ಗೌರವಧನ : ಗ್ರಾಮ ಕಾಯಕ ಮಿತ್ರರಿಗೆ ಮಾಸಿಕ ರೂ. 6೦೦೦/- ನಿಗದಿತ ಗೌರವಧನ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-04-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್ ಮಾಡಿ

  • BECIL : 1679 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    BECIL : 1679 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್( BECIL)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 2021, ಎಪ್ರಿಲ್, 20 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಹುದ್ದೆ : ಸ್ಕಿಲ್ಡ್/ಸೆಮಿ ಸ್ಕಿಲ್ಡ್‌/ ಅನ್‌ಸ್ಕಿಲ್ಡ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01-04-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-04-2021

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.6000/- ರಿಂದ ರೂ.15,000/- ವೇತನವಿರುತ್ತದೆ.

    ಒಟ್ಟು ಹುದ್ದೆ : 1679

    ಹುದ್ದೆ ಸ್ಥಳ : ನೊಯಿಡಾ-ಉತ್ತರಪ್ರದೇಶ

    ವಿದ್ಯಾಭ್ಯಾಸ : ಅಭ್ಯರ್ಥಿಗಳು ಸಂಸ್ಥೆಯ ನೇಮಕಾತಿ ನಿಯಮಾನುಸಾರ 8th, 10th, 12th, ಐಟಿಐ ಯನ್ನು ಅಂಗೀಕೃತ ಬೋರ್ಡ್‌/ ಯುನಿವರ್ಸಿಟಿಯಿಂದ ಪಡೆದುಕೊಂಡಿರಬೇಕು.

    ವಯೋಮಿತಿ : ಸಂಸ್ಥೆಯ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ಅರ್ಜಿ ಶುಲ್ಕ : ಜನರಲ್/ ಒಬಿಡಿ ಅಭ್ಯರ್ಥಿಗಳು ರೂ.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ.
    ಅರ್ಜಿ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಾಗುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ASRB : ಉದ್ಯೋಗ ಅಧಿಸೂಚನೆ ಪ್ರಕಟ

    ASRB : ಉದ್ಯೋಗ ಅಧಿಸೂಚನೆ ಪ್ರಕಟ

    ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯು (ಎಎಸ್‌ಆರ್‌ಬಿ) ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್‌(ಎನ್‌ಇಟಿ), ಅಗ್ರಿಕಲ್ಚರಲ್ ರಿಸರ್ಚ್ ಸರ್ವೀಸ್‌( ಎಆರ್‌ಎಸ್‌) ಸೀನಿಯರ್ ಟೆಕ್ನಿಕಲ್ ಆಫೀಸರ್ ( ಎಸ್‌ಟಿಒ) ಪರೀಕ್ಷೆಗಳಿಗೆ ನೋಟಿಫಿಕೇಶನ್ ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ವಿವರಗಳನ್ನು ತಿಳಿದುಕೊಂಡು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

    ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 05-04-2021
    ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-04-2021
    ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25-04-2021 (ಸಂಜೆ 5 ಗಂಟೆ)
    ಕಂಬೈನ್ಡ್ ಪ್ರಿಲಿಮಿನರಿ ಎಕ್ಸಾಮ್‌ – 21-04-2021 ರಿಂದ 27-06-2021
    ಎಆರ್‌ಎಸ್‌- 2021 ಮುಖ್ಯ ಪರೀಕ್ಷೆ – 19-09-2021
    ಸೀನಿಯರ್ ಟೆಕ್ನಿಕಲ್ ಆಫೀಸರ್ ಸಂದರ್ಶನ್, ಎಆರ್‌ಎಸ್ ಸಂದರ್ಶನ – ಬಿಡುಗಡೆ ಮಾಡಬೇಕಿದೆ.

    ವಿದ್ಯಾರ್ಹತೆ : ಅಭ್ಯರ್ಥಿಗಳು ಮಾಸ್ಟರ್ ಡಿಗ್ರಿಯನ್ನು ತೇರ್ಗಡೆ ಹೊಂದಿರಬೇಕು.

    ವಯೋಮಿತಿ : ಕನಿಷ್ಠ 21 ವರ್ಷ, 31 ಗರಿಷ್ಠ ವರ್ಷ ವಯೋಮಿತಿ ಮೀರಿರಬಾರದು. ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
    ಹುದ್ದೆಗಳ ವಿವರ : ಅಗ್ರಿಕಲ್ಚರ್ ರಿಸರ್ಚ್ ಸರ್ವೀಸ್ (ಎಆರ್‌ಎಸ್‌)- 222
    ಸೀನಿಯರ್ ಟೆಕ್ನಿಕಲ್ ಆಫೀಸರ್ (ಎಸ್‌ಟಿಒ) – 65

    ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ ರೂ.1000/-,
    ಒಬಿಸಿ/ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ ರೂ.500/-
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡ್ಬ್ಲ್ಯುಡಿ/ ಮಹಿಳಾ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

    ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • NTRO : 45 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

    NTRO : 45 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ( ಎನ್‌ಟಿಆರ್‌ಓ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಎಪ್ರಿಲ್ 12, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

    ಹುದ್ದೆ : ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ಯು ತಾಂತ್ರಿಕ ಸಹಾಯಕ (ಟೆಕ್ನಿಷಿಯನ್) ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ ಸಂಖ್ಯೆ : 45

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 27, ಮಾರ್ಚ್ 2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12, ಎಪ್ರಿಲ್ 2021

    ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ನೇ ತರಗತಿ, ಐಟಿಐ, ಡಿಪ್ಲೋಮಾ. ಪದವಿ ಹಾಗೂ ತತ್ಸಮಾನ ಪದವಿ ಪಡೆದಿರಬೇಕು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ವಯೋಮಿತಿ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷ ಮೀರಿರಬಾರದು.

    ಆಯ್ಕೆ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ ಫಲಿತಾಂಶದ ಮೇಲೆ ನೇಮಕ ಮಾಡಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.