Category: Central Govt Jobs

Central Govt Jobs News in Kannada, Central Govt Employment News in Kannada, UPSC, Indian Railway Jobs, Bank Jobs News, Airforce Recruitment, Indian Army, Agniveer Jobs updates all Central govt jobs read in Sarakarijobs.com

  • NMPA Recruitment: ಮಂಗಳೂರಿನಲ್ಲಿ ಕೇಂದ್ರ ಸರಕಾರಿ ಉದ್ಯೋಗ; ಮಾಸಿಕ ರೂ. 75,000 – 2,18,750/- ವೇತನ

    NMPA Recruitment: ಮಂಗಳೂರಿನಲ್ಲಿ ಕೇಂದ್ರ ಸರಕಾರಿ ಉದ್ಯೋಗ; ಮಾಸಿಕ ರೂ. 75,000 – 2,18,750/- ವೇತನ

    NMPA Recruitment 2024: ನವ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎನ್‌ಎಂಪಿಎ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಪೈಲಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶ. ಆಸಕ್ತ ಅಭ್ಯರ್ಥಿಗಳು 31-ಮೇ-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

    ಪ್ರಮುಖ ದಿನಾಂಕಗಳು;
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 27-05-2024
    ನೇರ ಸಂದರ್ಶನದ ದಿನಾಂಕ; 31-05-2024

    ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ;
    ಸಂಸ್ಥೆಯ ಹೆಸರು: ನವ ಮಂಗಳೂರು ಬಂದರು ಪ್ರಾಧಿಕಾರ (NMPA) ದಲ್ಲಿ ಖಾಲಿ ಇರುವ ಪೈಲಟ್‌ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ. 75,000 – 2,18,750/- ದೊರಕಲಿದೆ.

    ವಿದ್ಯಾರ್ಹತೆ: NMPA ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಪೈಲಟ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷ ಮೀರಿರಬಾರದು. ನವ ಮಂಗಳೂರು ಬಂದರು ಪ್ರಾಧಿಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿದ ವಿಳಾಸಕ್ಕೆ ತಮ್ಮ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
    ವಿಳಾಸ ಇಲ್ಲಿದೆ;
    Chairperson, New Mangalore Port Authority at Panambur, Mangalore, Karnataka – 575010 ದಿ. 31-May-2024 ರಂದು ನೇರ ಸಂದರ್ಶನವಿರಲಿದೆ.

  • ICF Chennai Recruitment 2024: 1010 ಅಪ್ರೆಂಟಿಸ್‌ ಹುದ್ದೆಗಳು;10,ITI ಪಾಸಾದವರು ಈ ಕೂಡಲೇ ಅರ್ಜಿ ಸಲ್ಲಿಸಿ

    ICF Chennai Recruitment 2024: 1010 ಅಪ್ರೆಂಟಿಸ್‌ ಹುದ್ದೆಗಳು;10,ITI ಪಾಸಾದವರು ಈ ಕೂಡಲೇ ಅರ್ಜಿ ಸಲ್ಲಿಸಿ

    Indian Railway ICF Recruitment 2024: ಚೆನ್ನೈನಲ್ಲಿರುವ ಭಾರತೀಯ ರೈಲ್ವೇಯ ಇಂಟಿಗ್ರಲ್‌ ಕೋಚ್‌ ಫ್ಯಾಕ್ಟರಿಯು ತನ್ನಲ್ಲಿರುವ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ವಿವಿಧ ಇಂಜಿನಿಯರಿಂಗ್‌ ಟ್ರೇಡ್‌ಗಳಲ್ಲಿ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಸಾವಿರಾರು ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್‌ 21, 2024 ಕೊನೆಯ ದಿನಾಂಕವಾಗಿದ್ದು, ಅದರ ಮೊದಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ.

    ಹುದ್ದೆಯ ಕುರಿತ ಹೆಚ್ಚಿನ ವಿವರ ಇಲ್ಲಿದೆ;
    1010 ಅಪ್ರೆಂಟಿಸ್‌ಶಿಪ್‌ ಹುದ್ದೆಯನ್ನು ಎರಡು ವಿಭಾಗಗಳಾಗಿ ಮಾಡಲಾಗಿದೆ. ಇದರಲ್ಲಿ ಫ್ರೆಶರ್ಸ್‌ ಮತ್ತು ಎಕ್ಸ್‌ ಐಟಿಐ ಟ್ರೇಡ್‌ ಅಪ್ರೆಂಟಿಸ್‌ ಎಂದು ವಿಂಗಡಿಸಲಾಗಿದೆ.

    ಹುದ್ದೆಗಳ ಹೆಸರು, ಸಂಖ್ಯೆ ಇಲ್ಲಿದೆ;
    ಕಾರ್ಪೆಂಟರ್​​ – 90 ಹುದ್ದೆಗಳು
    ಎಲೆಕ್ಟ್ರಿಷಿಯನ್​ – 200 ಹುದ್ದೆಗಳು
    ಫಿಟ್ಟರ್​ – 260 ಹುದ್ದೆಗಳು
    ಮೆಕ್ಯಾನಿಕ್​ – 90 ಹುದ್ದೆಗಳು
    ಪೇಂಟರ್​​ – 90 ಹುದ್ದೆಗಳು
    ವೆಲ್ಡರ್​​ – 260 ಹುದ್ದೆಗಳು
    ಎಂಎಲ್​ಟಿ ರೇಡಿಯಾಲಜಿ – 5 ಹುದ್ದೆಗಳು
    ಎಂಎಲ್​ಟಿ ರೇಡಿಯಾಲಜಿ – 5 ಹುದ್ದೆಗಳು
    ಪಿಎಎಸ್​ಎಎ – 10 ಹುದ್ದೆಗಳು

    ಹುದ್ದೆಗಳ ಸಂಖ್ಯೆ: ಫ್ರೆಶರ್ಸ್‌ಗಳಿಗೆ 330 ಹುದ್ದೆಗಳಿದೆ. ಎಕ್ಸ್‌ ಐಟಿಐ ಹುದ್ದೆಗೆ 680 ಹುದ್ದೆಗಳು ಖಾಲಿ ಇದೆ.

    ಶೈಕ್ಷಣಿಕ ಅರ್ಹತೆ: ಫ್ರೆಶರ್ಸ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 50% ಅಂಕಗಳೊಂದಿಗೆ 10 ನೇ ತರಗತಿ ಪಾಸಾಗಿರಬೇಕು. ಜೊತೆಗೆ 10+2 ವಿಜ್ಞಾನ / ಗಣಿತದಲ್ಲಿ ತೇರ್ಗಡೆ ಹೊಂದಿರಬೇಕು.
    ಎಕ್ಸ್‌ ಐಟಿಐ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 50% (ಕನಿಷ್ಠ) ಅಂಕದೊಂದಿಗೆ 10 ನೇ ತರಗತಿ ತೇರ್ಗಡೆ ಹೊಂದಿರಬೇಕು. ಹಾಗೂ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪ್ರಮಾಣ ಪತ್ರ ಇರಬೇಕು.

    ಸ್ಟೈಫಂಡ್‌: 10ನೇ ತರಗತಿ ಉತ್ತೀರ್ಣರಾದವರಿಗೆ ರೂ.6000/-, 12ನೇ ತರಗತಿ ಪಾಸಾದವರಿಗೆ ರೂ.7000, ITI ಪಾಸಾದವರಿಗೆ ರೂ.7000 ಮಾಸಿಕ ಸ್ಟೈಫಂಡ್‌ ಪಡೆಯುತ್ತಾರೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಅಪ್ರೆಂಟಿಸ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ ಹೆಸರು, ಇಮೇಲ್‌, ಫೋನ್‌ ಸಂಖ್ಯೆ ಹಾಗೂ ವೈಯಕ್ತಿಕ ವಿವರಗಳನ್ನು pb.icf.gov.in ನಲ್ಲಿ ICF ಚೆನ್ನೈನ ನೇಮಕಾತಿ ಪೋರ್ಟಲ್‌ನಲ್ಲಿ ನೋಂದಾಯಿಸಿ ಅರ್ಜಿ ಸಲ್ಲಿಸಬೇಕು.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • RLDA Jobs: ರೈಲು ಭೂಮಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ನೇಮಕಾತಿ; ಅರ್ಹತೆ, ಸಂಬಳ ವಿವರ ಇಲ್ಲಿದೆ

    RLDA Jobs: ರೈಲು ಭೂಮಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ನೇಮಕಾತಿ; ಅರ್ಹತೆ, ಸಂಬಳ ವಿವರ ಇಲ್ಲಿದೆ

    RLDA Recruitment 2024: ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಮುಖ್ಯ ಪ್ರಾಜೆಕ್ಟ್ ಮ್ಯಾನೇಜರ್, ಜಂಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 04 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದವರಿಗೆ ಅಲಹಾಬಾದ್ – ಚೆನ್ನೈ – ಪಾಟ್ನಾ – ಬೆಂಗಳೂರು ಇಲ್ಲಿ ಪೋಸ್ಟಿಂಗ್‌ ಆಗಲಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 21-Jun-2024 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 28-05-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-06-2024

    ಹುದ್ದೆಯ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ (RLDA) ಇಲ್ಲಿ ಮುಖ್ಯ ಪ್ರಾಜೆಕ್ಟ್ ಮ್ಯಾನೇಜರ್, ಜಂಟಿ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಆಯ್ಕೆಯಾದವರಿಗೆ ಆರ್‌ಎಲ್‌ಡಿಎ ನಿಯಮಗಳ ಪ್ರಕಾರ ವೇತನ ನೀಡಲಾಗುವುದು.

    ಹುದ್ದೆ ಹೆಸರು ಮತ್ತು ಸಂಖ್ಯೆ:
    ಮುಖ್ಯ ಪ್ರಾಜೆಕ್ಟ್ ಮ್ಯಾನೇಜರ್ 3 ಹುದ್ದೆಗಳು
    ಜಂಟಿ/ಉಪ ಜನರಲ್ ಮ್ಯಾನೇಜರ್ 1 ಹುದ್ದೆಗಳು

    ಶೈಕ್ಷಣಿಕ ಅರ್ಹತೆ: ಜಂಟಿ/ಉಪ ಜನರಲ್ ಮ್ಯಾನೇಜರ್ ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಮಾಡಿರುವವರು ಅರ್ಜಿ ಸಲ್ಲಿಸಬಹುದು.
    ಮುಖ್ಯ ಪ್ರಾಜೆಕ್ಟ್‌ ಮ್ಯಾನೇಜರ್‌ ಹುದ್ದೆಗೆ ಆರ್‌ಎಲ್‌ಡಿಎ ನಿಯಮಗಳ ಪ್ರಕಾರ

    ವಯೋಮಿತಿ: ರೈಲ್ ಲ್ಯಾಂಡ್ ಡೆವಲಪ್ಮೆಂಟ್ ಅಥಾರಿಟಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಾಗೆ ಅಭ್ಯರ್ಥಿಗಳು ಆರ್‌ಎಲ್‌ಡಿಎ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
    ರೈಲು ಭೂಮಿ ಅಭಿವೃದ್ಧಿ ಪ್ರಾಧಿಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಅರ್ಜಿದಾರರು ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Dy ಗೆ ಕಳುಹಿಸಬೇಕಾಗುತ್ತದೆ. ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ವಿಳಾಸವನ್ನು ಈ ಕೆಳಗೆ ನೀಡಲಾಗಿದೆ.
    ವಿಳಾಸ: Dy. General Manager (HR), Rail Land Development Authority, Unit No.-702-B, 7th Floor, Konnectus Tower-II, DMRC Building, Ajmeri Gate, Delhi-110002 ಇಲ್ಲಿಗೆ ಅರ್ಜಿಗಳ ಸಾಫ್ಟ್ ಕಾಪಿಯನ್ನು ಇಮೇಲ್ ಐಡಿಯಲ್ಲಿ ಫಾರ್ವರ್ಡ್ ಮಾಡಬಹುದು: [email protected]

  • BSF Recruitment 2024: ಬಿಎಸ್‌ಎಫ್‌ನಲ್ಲಿ ಎಸ್‌ಐ, ಹೆಡ್‌ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌ಎಸ್‌ಎಲ್‌ಸಿ ಪಾಸಾದವರಿಗೂ ಉದ್ಯೋಗ

    BSF Recruitment 2024: ಬಿಎಸ್‌ಎಫ್‌ನಲ್ಲಿ ಎಸ್‌ಐ, ಹೆಡ್‌ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌ಎಸ್‌ಎಲ್‌ಸಿ ಪಾಸಾದವರಿಗೂ ಉದ್ಯೋಗ

    BSF Recruitment 2024: ಡೈರೆಕ್ಟೋರೇಟ್‌ ಜೆನೆರಲ್‌ ಬಾರ್ಡರ್‌ ಸೆಕ್ಯೂರಿಟಿ ಫೋರ್ಸ್‌ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಾನ್‌ಗೆಜೆಟೆಡ್‌ ಗ್ರೂಪ್‌ ಬಿ ಹಾಗೂ ಗ್ರೂಪ್‌ ಸಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 162 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಬಿಎಸ್‌ಎಫ್‌ನ ಈ ಹುದ್ದೆಗಳಿಗೆ 30 ದಿನ ಕಾಲಾವಕಾಶವಿದೆ. ಡಿಟೇಲ್ಡ್‌ ನೋಟಿಫಿಕೇಶನ್‌ ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ. ಆನ್‌ಲೈನ್‌ ಮೂಲಕ ಮಾತ್ರವೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು.

    ಹುದ್ದೆ: ಎಸ್‌ಐ, ಹೆಡ್‌ಕಾನ್ಸ್‌ಟೇಬಲ್‌, ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ಸಂಖ್ಯೆ: ಎಸ್‌ಐ -11 ಹುದ್ದೆಗಳು, ಹೆಡ್‌ಕಾನ್ಸ್‌ಟೇಬಲ್‌ -105 ಹುದ್ದೆಗಳು, ಕಾನ್ಸ್‌ಟೇಬಲ್‌ ಹುದ್ದೆಗಳು-46 ಹುದ್ದೆಗಳು
    ಒಟ್ಟು 162 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ, ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಎಸ್‌ಐ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛೆ ಪಡುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಮಾಡಿರಬೇಕು. ಹೆಡ್‌ಕಾನ್ಸ್‌ಟೇಬಲ್‌ ಹುದ್ದೆಗೆ ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ ಪಾಸ್‌ ಆಗಿರಬೇಕು. ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು.

    ವೇತನ: ಎಸ್‌ಐ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ Rs.35,400- 1,12,400. (level-6) ನೀಡಲಾಗುವುದು.
    ಹೆಡ್‌ ಕಾನ್ಸ್‌ಟೇಬಲ್ ಹುದ್ದೆಗೆ ಆಯ್ಕೆಯಾದವರಿಗೆ Rs.25,500-81,100 (Level-4) ವೇತನ ನೀಡಲಾಗುವುದು.
    ಕಾನ್ಸ್‌ಟೇಬಲ್‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ Rs.21,700-69,100. (Level-3) ವೇತನ ನಿಗದಿಪಡಿಸಲಾಗಿದೆ.

    ವಯೋಮಿತಿ: ಎಸ್‌ಐ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 22-28 ವರ್ಷದೊಳಗಿರಬೇಕು.
    ಹೆಡ್‌ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 20-25 ವರ್ಷದೊಳಗಿರಬೇಕು.
    ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 20-25 ವರ್ಷದೊಳಗಿರಬೇಕು.

    ಅರ್ಜಿ ಶುಲ್ಕ: ಗ್ರೂಪ್‌ ಬಿ ಹುದ್ದೆಗೆ ಅರ್ಜಿ ಸಲ್ಲಿಸುವವರು ರೂ.200, ಗ್ರೂಪ್‌ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು ರೂ.100 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, ನೆಟ್‌ಬ್ಯಾಂಕಿಂಗ್‌ ಮೂಲಕ ಮಾತ್ರವೇ ಪಾವತಿ ಮಾಡಬೇಕು.

  • BSF Recruitment 2024: ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ; ಭರ್ಜರಿ ವೇತನ, ಹೆಚ್ಚಿನ ಮಾಹಿತಿ ಇಲ್ಲಿದೆ

    BSF Recruitment 2024: ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ; ಭರ್ಜರಿ ವೇತನ, ಹೆಚ್ಚಿನ ಮಾಹಿತಿ ಇಲ್ಲಿದೆ

    BSF Recruitment 2024: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 07 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಜೂನಿಯರ್ ಏರ್‌ಕ್ರಾಫ್ಟ್ ಮೆಂಟೆನೆನ್ಸ್ ಇಂಜಿನಿಯರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಈ ಹುದ್ದೆಗಳಿಗೆ ಪೋಸ್ಟಿಂಗ್‌ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 24-Jun-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 25-05-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-06-2024

    ಹುದ್ದೆಯ ಕುರಿತ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ಗಡಿ ಭದ್ರತಾ ಪಡೆ (BSF)ಯಲ್ಲಿ ಖಾಲಿ ಇರುವ ಜೂನಿಯರ್‌ ಏರ್‌ಕ್ರಾಫ್ಟ್‌ ನಿರ್ವಹಣಾ ಇಂಜಿನಿಯರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ರೂ.67700-208700/- ಪ್ರತಿ ತಿಂಗಳು ವೇತನ ದೊರಕಲಿದೆ.

    ವಿದ್ಯಾರ್ಹತೆ: BSF ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್ಸ್/ಏರೋನಾಟಿಕಲ್ ಇಂಜಿನಿಯರಿಂಗ್‌ನಲ್ಲಿ B.E ಅಥವಾ B.Tech ತೇರ್ಗಡೆ ಮಾಡಿರಬೇಕು.

    ವಯೋಮಿತಿ: ಗಡಿ ಭದ್ರತಾ ಪಡೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 24-ಜೂನ್-2024 ರಂತೆ 35 ವರ್ಷ ಆಗಿರಬೇಕು. OBC ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: SC/ST/BSF ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ/ಮಹಿಳಾ ಅಭ್ಯರ್ಥಿಗಳಿಗೆ ರೂ.47.2/-, ಹಾಗೂ ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ.447.2/- ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ: ದೈಹಿಕ ಮಾನದಂಡಗಳ ಪರೀಕ್ಷೆ, ಮೌಖಿಕ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

  • CRPF Jobs: ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯಲ್ಲಿ ಉದ್ಯೋಗ; ನೇರ ಸಂದರ್ಶನ

    CRPF Jobs: ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯಲ್ಲಿ ಉದ್ಯೋಗ; ನೇರ ಸಂದರ್ಶನ

    CRPF Recruitment 2024: ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಪೋರ್ಸ್‌ ನೇಮಕಾತಿ ಮಾಡಲಿದ್ದು, ಇಲ್ಲಿ 03 ಖಾಲಿ ಹುದ್ದೆಗಳಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫಿಸಿಯೋಥೆರಪಿಸ್ಟ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ನೇರ ಸಂದರ್ಶನವು ದಿ.17-06-2024 ರಂದು ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದು.

    ಹುದ್ದೆಯ ವಿವರ ಇಲ್ಲಿದೆ:
    ಹುದ್ದೆ ಸಂಖ್ಯೆ ಹೆಚ್ಚಿನ ವಿವರ: ಕೇಂದ್ರೀಯ ಮೀಸಲು ಪಡೆಯಲ್ಲಿ 03 ಹುದ್ದೆಗಳು ಖಾಲಿ ಇದ್ದು, ಫಿಸಿಯೋಥೆರಪಿಸ್ಟ್‌ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಈ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.55000 ವೇತನವಿರಲಿದೆ.

    ವಿದ್ಯಾರ್ಹತೆ: ಮಾನ್ಯತೆ ಪಡೆದ ಭಾರತೀಯ ಅಥವಾ ವಿದೇಶಿ ವಿಶ್ವವಿದ್ಯಾಲಯದಿಂದ ಭೌತಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

    ವಯೋಮಿತಿ: ಫಿಸಿಯೋಥೆರಪಿಸ್ಟ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 40 ವರ್ಷ ಮೀರಿರಬಾರದು.

    ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು ರೂ.55,000 ಇರುತ್ತದೆ.

    ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗೆ ಒಂದು ವರ್ಷದ ಪ್ರೊಬೆಷನರಿ ಪಿರಿಯೇಡ್‌ ಇರುತ್ತದೆ. ಇದನ್ನು ಅಭ್ಯರ್ಥಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಎರಡು ವರ್ಷಕ್ಕೆ ವಿಸ್ತರಣೆ ಮಾಡಲಾಗುವುದು.

    ನೇಮಕ ಸ್ಥಳ: ಎಸ್‌ಎಂಸಿ, ಜಿಸಿ ನವದೆಹಲ್ಲಿ ಈ ಹುದ್ದೆಗೆ ಆಯ್ಕೆಯಾದವರನ್ನು ಪೋಸ್ಟಿಂಗ್‌ ಮಾಡಲಾಗುವುದು. ಹಾಗೆನೇ ಜಿಸಿ, ಸೋನೆಪತ್‌, ಜಿಸಿ ಜಲಂಧರ್‌, ಜಿಸಿ ಕತ್ಗೊಡಮ್‌, ಜಿಸಿ ಜಮ್ಶೆಡ್‌ಪುರ, ಜಿಸಿ-1&2 ಅಜ್ಮೀರ್‌, ಜಿಸಿ ಕೇಂದ್ರೀತ ಕೇಂದ್ರ ಕ್ರೀಡಾ ತಂಡ ಹೆಚ್ಚಾಗಿ ಇರುವ ರಂಗಾರೆಡ್ಡಿ ಜಿಲ್ಲೆ, ಚಂಡೀಗಢ, ಹಾಗೂ ಇತರ ಸ್ಥಳಗಳಲ್ಲಿ ಕೆಲಸವಿರುತ್ತದೆ.

    ಅರ್ಜಿ ಸಲ್ಲಿಸಬೇಕಾದ ವಿಳಾಸ; ಅಭ್ಯರ್ಥಿಗಳು ಭರ್ತಿ ಮಾಡಿದ ದಾಖಲೆಗಳ ಜೊತೆ ಈ ಕೆಳಗೆ ನೀಡಿದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಿರಬೇಕು.
    ವಿಳಾಸ ಇಲ್ಲಿದೆ;
    Training Directorate,
    East Block No 10,
    Level 7, R K Puram,
    New Delhi, 110066
    ಸಂಪರ್ಕ ಸಂಖ್ಯೆ -011-20867225 ಇಲ್ಲಿ ದಿ.17-06-2024 ರಂದು ನೇರ ಸಂದರ್ಶನವಿರಲಿದೆ.
    ಅಭ್ಯರ್ಥಿಗಳು ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾದ ಲಿಂಕ್‌ ಕ್ಲಿಕ್‌ ಮೂಲಕ ಪಡೆದುಕೊಳ್ಳಬಹುದು.