Category: Central Govt Jobs

Central Govt Jobs News in Kannada, Central Govt Employment News in Kannada, UPSC, Indian Railway Jobs, Bank Jobs News, Airforce Recruitment, Indian Army, Agniveer Jobs updates all Central govt jobs read in Sarakarijobs.com

  • KVS : ಒಂದನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

    KVS : ಒಂದನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

    ಕೇಂದ್ರಿಯ ವಿದ್ಯಾಲಯದ ಒಂದನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಏಪ್ರಿಲ್ 1, 2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 19, 2021
    ಅಭ್ಯರ್ಥಿಗಳ ಮೊದಲ ತಾತ್ಕಾಲಿಕ ಆಯ್ಕೆ ಪಟ್ಟಿ: ಏಪ್ರಿಲ್ 23, 2021
    ಅಭ್ಯರ್ಥಿಗಳ ಎರಡನೇ ಆಯ್ಕೆ ಪಟ್ಟಿ : ಏಪ್ರಿಲ್ 30,2021
    ಅಭ್ಯರ್ಥಿಗಳ ಮೂರನೇ ಆಯ್ಕೆ ಪಟ್ಟಿ : ಮೇ 5,2021

    ಕೇಂದ್ರಿಯ ವಿಶ್ವವಿದ್ಯಾಲಯದ ಬಗ್ಗೆ ಹೆಚ್ಚು ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ

  • ಇಎಂಆರ್‌ಎಸ್ ನಲ್ಲಿ 3479 ವಿವಿಧ ಹುದ್ದೆ

    ಇಎಂಆರ್‌ಎಸ್ ನಲ್ಲಿ 3479 ವಿವಿಧ ಹುದ್ದೆ

    ಬುಡಕಟ್ಟು ಸಂಬಂಧಿ ಸಚಿವಾಲಯವು, ಏಕಲವ್ಯ ಮಾದರಿ ವಸತಿ ಶಾಲೆಗಳ (ಇಎಂಆರ್‌ಎಸ್‌) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 30, ಎಪ್ರಿಲ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 01-04-2021
    ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ : 30-04-2021

    ಸ್ಪರ್ಧಾತ್ಮ ಪರೀಕ್ಷೆ ದಿನಾಂಕ : ಜೂನ್‌ ಮೊದಲ ವಾರ

    ಹುದ್ದೆ : ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಪೋಸ್ಟ್‌ ಗ್ರಾಜ್ಯುಯೇಟ್ ಟೀಚರ್, ಟ್ರೈನ್ಡ್‌ ಗ್ರಾಜ್ಯುಯೇಟ್ ಟೀಚರ್ ಸೇರಿದಂತೆ ಒಟ್ಟು 17 ವಿವಿಧ ಪೋಸ್ಟ್‌ಗಳಿಗೆ 3479 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿದೆ.

    ಹುದ್ದೆಗಳ ವಿವರ ಈ ಕೆಳಗಿನಂತಿವೆ:
    ಪ್ರಾಂಶುಪಾಲರು – 175
    ಉಪಪ್ರಾಂಶುಪಾಲರು- 116
    ಪಿಜಿಟಿ ಹುದ್ದೆಗಳು- 1244
    ಟಿಜಿಟಿ ಹುದ್ದೆಗಳು-1944

    ವಿದ್ಯಾರ್ಹತೆ : ಹುದ್ದೆಗಳಿಗನುಸಾರವಾಗಿ ಪಿಯುಸಿ/ಪದವಿ/ಸ್ನಾತಕೋತ್ತರ ಪದವೊ/ ಬಿ.ಇಡಿ/ಎಂ.ಇಡಿ ತೇರ್ಗಡೆ ಹೊಂದಿರಬೇಕು.

    ಸದರಿ ಹುದ್ದೆಗಳನ್ನು ಪ್ರತಿ ರಾಜ್ಯದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಗಳ್ಲಿ ಬುಡಕಟ್ಟು ಸಂಬಂಧಿ ಸಚಿವಾಲಯದ ವತಿಯಿಂದ ನೇಮಕ ಮಾಡಿಕೊಳ್ಳಲಾಗುತ್ತಿದೆ.

    ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

    ಅಧಿಕೃತ ವೆಬ್‌ಸೈಟ್‌ ಲಿಂಕ್‌ ಗಾಗಿ ಇಲ್ಲಿ ಕ್ಲಿಕ್ ಮಾಡಿ

    ನೋಟಿಫಿಕೇಶನ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

  • SAIL ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕ

    SAIL ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕ

    ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಮೆಡಿಕಲ್ ಆಫೀಸರ್, ಮೆಡಿಕಲ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 30, 2021

    ವಿದ್ಯಾರ್ಹತೆ : ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

    ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅರ್ಜಿ ಶುಲ್ಕ : ಸಾಮಾನ್ಯ/ಒಬಿಸಿ/ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ರೂ.500/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

    ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಎಪ್ರಿಲ್ 30,2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫೀಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕೇಂದ್ರಿಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕೇಂದ್ರಿಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕೇಂದ್ರಿಯ ಉಗ್ರಾಣ ನಿಗಮವು ಒಪ್ಪಂದದ ಆಧಾರದ ಮೇಲೆ ಸಲಹೆಗಾರರಾಗಿ ಕೆಲಸ‌ ಮಾಡಲು ಕೇಂದ್ರೀಯ ಉಗ್ರಾಣ ನಿಗಮದ ನಿವೃತ್ತ ನೌಕರರಿಂದ ಹಾಗೂ ಪಿಎಸ್ ಯುಗಳಲ್ಲಿಯ ಪರಿಣಿತರಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ.

    ಹುದ್ದೆ : ಸಲಹೆಗಾರರಾಗಿ( ಕನ್ಸಲ್ಟೆಂಟ್)

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ‌: 22-04-2021

    ಹುದ್ದೆ ಸ್ಥಳ : ಬೆಂಗಳೂರು

    ವೇತನ : ಈ‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ರೂ.40,000 ರಿಂದ ರೂ.50,000/- ವರೆಗೆ ವೇತನವಿರುತ್ತದೆ.

    ಹುದ್ದೆ ಸಂಖ್ಯೆ : 02

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 22-04-2021 (5pm) ರೊಳಗೆ ಪೋಸ್ಟ್, ಕೊರಿಯರ್ ಅಥವಾ ಕಚೇರಿಗೆ ಅಭ್ಯರ್ಥಿಗಳು ತಾವಾಗೇ ಸಲ್ಲಿಸಬಹುದು.

    ಕಚೇರಿ‌ ವಿಳಾಸ :

    Regional Manager, Central Warehousing Corporation,Regional Office, LF-10, Next to RBI Quarters, 4th cross, Circular Road, Nandini Layout, Bangalore- 560096

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • IRCON ನಲ್ಲಿ 74 ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ

    IRCON ನಲ್ಲಿ 74 ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ

    IRCON ಇಂಟರ್ ನ್ಯಾಷನಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಈ ಕೆಳಗಿನ ವಿವರಗಳನ್ನು ಓದಿ ಸಲ್ಲಿಸಬಹುದು.

    ಹುದ್ದೆ : ವರ್ಕ್ಸ್ ಇಂಜಿನಿಯರ್ /ಸಿವಿಲ್ , ವರ್ಕ್ಸ್ ಇಂಜಿನಿಯರ್ /ಎಸ್&ಟಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಒಟ್ಟು ಹುದ್ದೆ : ವರ್ಕ್ಸ್ ಇಂಜಿನಿಯರ್ /ಸಿವಿಲ್ – 60, ವರ್ಕ್ಸ್ ಇಂಜಿನಿಯರ್ /ಎಸ್&ಟಿ- 14

    ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ : 18-04-2021

    ವಯೋಮಿತಿ : ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವಯೋಮಿತಿ ಹೊಂದಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.ircon.org ಗೆ ಭೇಟಿ ನೀಡಿ.

  • NBCC ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

    NBCC ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

    ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟ್ರಕ್ಷನ್ ಕೋರ್ಪರೇಶನ್ ಲಿಮಿಟೆಡ್ (ಎನ್ ಬಿಸಿಸಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು 30, ಮಾರ್ಚ್ 2021 ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು 30, ಎಪ್ರಿಲ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 31-03-2021 (10.00 am)
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-04-2021(5pm)

    ಹುದ್ದೆ : ಅಡಿಶನಲ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಪ್ರಾಜೆಕ್ಟ್ ಮ್ಯಾನೇಜರ್, ಡೆಪ್ಯುಟಿ ಪ್ರೊಜೆಕ್ಟ್ ಮ್ಯಾನೇಜರ್, ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯುಟಿವ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಸ್ಟೆನೋಗ್ರಾಫರ್, ಆಫೀಸ್ ಅಸಿಸ್ಟೆಂಟ್ ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ವಯೋಮಿತಿ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳಿಗೆ ಕನಿಷ್ಠ 28 ರಿಂದ ಗರಿಷ್ಠ 52 ವರ್ಷ ಮೀರಿರಬಾರದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.nbccindia.com ಗೆ ಭೇಟಿ ನೀಡಿ.