Category: Central Govt Jobs

Central Govt Jobs News in Kannada, Central Govt Employment News in Kannada, UPSC, Indian Railway Jobs, Bank Jobs News, Airforce Recruitment, Indian Army, Agniveer Jobs updates all Central govt jobs read in Sarakarijobs.com

  • AIATSL Jobs: ಏರ್‌ಇಂಡಿಯಾ ಏರ್‌ಟ್ರಾನ್ಸ್‌ಪೋರ್ಟ್‌ ಸರ್ವಿಸೆಸ್‌ನಿಂದ ಉದ್ಯೋಗಾವಕಾಶ, ನೇರಸಂದರ್ಶನಕ್ಕೆ ಅರ್ಜಿ ಆಹ್ವಾನ, ಉತ್ತಮ ವೇತನ

    AIATSL Jobs: ಏರ್‌ಇಂಡಿಯಾ ಏರ್‌ಟ್ರಾನ್ಸ್‌ಪೋರ್ಟ್‌ ಸರ್ವಿಸೆಸ್‌ನಿಂದ ಉದ್ಯೋಗಾವಕಾಶ, ನೇರಸಂದರ್ಶನಕ್ಕೆ ಅರ್ಜಿ ಆಹ್ವಾನ, ಉತ್ತಮ ವೇತನ

    AIATSL Recruitment 2024: ಏರ್‌ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವಿಸಸ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 145 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಜೂನಿಯರ್‌ ಆಫಿಸರ್‌ ಟೆಕ್ನಿಕಲ್‌, ಕಸ್ಟಮರ್‌ ಸರ್ವೀಸ್‌ ಎಕ್ಸಿಕ್ಯೂಟಿವ್‌ ಹೀಗೆ ಹಲವು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ:
    ನೇರ ಸಂದರ್ಶನಕ್ಕೆ ಹಾಜರಾಗಬೇಕಾದ ದಿನಾಂಕ:

    ಹುದ್ದೆಗಳ ವಿವರ ಇಲ್ಲಿದೆ;
    ಜೂನಿಯರ್ ಆಫೀಸರ್ – ಟೆಕ್ನಿಕಲ್ : 02
    ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 21
    ಜೂನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 21
    ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್ : 18
    ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ : 17
    ಹ್ಯಾಂಡಿಮನ್ : 66

    ವಿದ್ಯಾರ್ಹತೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳು ಬಿಇ/ಪದವಿ/ಐಟಿಐ (ಎನ್‌ಸಿವಿಟಿ/ಎಸ್‌ಸಿವಿಟಿ)/ಎಸ್‌ಎಸ್‌ಸಿ/ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

    ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 28 ವರ್ಷ ವಯಸ್ಸಾಗಿರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
    ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500, ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
    ಅಭ್ಯರ್ಥಿಗಳು ಡಿಡಿ ಮೂಲಕ ಶುಲ್ಕವನ್ನು ಪಾವತಿ ಮಾಡಬೇಕು.

    ಆಯ್ಕೆ ವಿಧಾನ: ಅಭ್ಯರ್ಥಿಗಳು ದಿನಾಂಕ 08-05-2024 ರಿಂದ 10-05-2024 ರವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ಈ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು;
    ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಂಕಪಟ್ಟಿ
    ಜಾತಿ ಮತ್ತು ಆದಾಯ ಪ್ರಮಾಣ ಪತ್ರ
    ಕಾರ್ಯಾನುಭವ ಇರುವ ದಾಖಲೆ, ಹಾಗೂ ಇತರೆ ದಾಖಲು ಅತ್ಯಗತ್ಯ

    ಮೇಲ್ಕಂಡ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗುವ ಸಮಯದಲ್ಲಿ ಅಭ್ಯರ್ಥಿಗಳು ಮೇಲೆ ತಿಳಿಸಿದ ಎಲ್ಲಾ ದಾಖಲೆಗಳನ್ನು ತಮ್ಮಲ್ಲಿ ಇಟ್ಟುಕೊಂಡು ಹೋಗಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

  • UPSC Police Jobs 2024: ಕೇಂದ್ರ ಪೊಲೀಸ್‌ ಪಡೆಗಳಲ್ಲಿ 506 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವಿ ಪಾಸಾದವರಿಗೆ ಆದ್ಯತೆ, ಮೇ.14 ಅರ್ಜಿ ಸಲ್ಲಿಸಲು ಕೊನೆಯ ದಿನ

    UPSC Police Jobs 2024: ಕೇಂದ್ರ ಪೊಲೀಸ್‌ ಪಡೆಗಳಲ್ಲಿ 506 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವಿ ಪಾಸಾದವರಿಗೆ ಆದ್ಯತೆ, ಮೇ.14 ಅರ್ಜಿ ಸಲ್ಲಿಸಲು ಕೊನೆಯ ದಿನ

    UPSC Police Jobs 2024: ಕೇಂದ್ರ ಲೋಕಸೇವಾ ಆಯೋಗವು ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 506 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಗಡಿ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್‌ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಇಂಡೋ-ಟೆಬೆಟನ್‌ ಗಡಿ ಪೊಲೀಸ್‌ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿ ಖಾಲಿ ಇರುವ ಗ್ರೂಪ್‌ ಎ ಅಸಿಸ್ಟಂಟ್‌ ಕಮಾಂಡಂಟ್‌ ಹುದ್ದೆಗಳ ಭರ್ತಿ ನಡೆಯಲಿದೆ.

    ಅರ್ಜಿಯನ್ನು ಆನ್‌ಲೈನ್‌ ಮೂಲಕ ಮಾತ್ರವೇ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ನಡೆಯಲಿದೆ. ತಪ್ಪು ಉತ್ತರಗಳಿಗೆ ನೆಗೆಟಿವ್‌ ಮಾರ್ಕಿಂಗ್‌ ಇರುತ್ತದೆ.

    ಪ್ರಮುಖ ದಿನಾಂಕಗಳು;
    ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ; 24-04-2024
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-04-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2024 ರ 6 ಗಂಟೆ ತನಕ
    ಅರ್ಜಿ ತಿದ್ದುಪಡಿಗೆ ಇರುವ ದಿನಾಂಕ: 15-05-2024 – 21-05-2024 ರವರೆಗೆ
    ಲಿಖಿತ ಪರೀಕ್ಷೆಯ ದಿನಾಂಕ: 04-08-2024

    ಹುದ್ದೆಯ ಕುರಿತು ಹೆಚ್ಚಿನ ವಿವರ ಇಲ್ಲಿದೆ;
    ಗಡಿ ಭದ್ರತಾ ಪಡೆ-186 ಹುದ್ದೆಗಳು
    ಕೇಂದ್ರ ಮೀಸಲು ಪೊಲೀಸ್‌ ಪಡೆ : 120 ಹುದ್ದೆಗಳು
    ಕೇಂದ್ರ ಕೈಗಾರಿಕಾ ಭದ್ರತಾ ಪಡೆ : 100 ಹುದ್ದೆಗಳು
    ಇಂಡೋ-ಟೆಬೆಟನ್‌ ಗಡಿ ಪೊಲೀಸ್‌ – 58 ಹುದ್ದೆಗಳು
    ಸಶಸ್ತ್ರ ಸೀಮಾ ಬಲ – 42 ಹುದ್ದೆಗಳು

    ವಿದ್ಯಾರ್ಹತೆ: ಸಿಎಪಿಎಳ್‌ ಪಡೆಗಳ ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ/ತತ್ಸಮಾನ ಶೈಕ್ಷಣಿಕ ವಿದ್ಯಾರ್ಹತೆಯನ್ನು ಪಡೆದಿರಬೇಕು.

    ವಯೋಮಿತಿ; ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿಯು 20 ವರ್ಷ, ಗರಿಷ್ಠ 25 ವರ್ಷ ಮೀರಿರಬಾರದು. ಒಬಿಸಿ ವರ್ಗ 3 ವರ್ಷ, ಇತರೆ ಹಿಂದುಳಿದ ವರ್ಗದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ರೂ.200 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

    ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಪಿಎಸ್‌ಟಿ, ಪಿಇಟಿ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ : ಈ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100 ರಿಂದ 177500 ಮಾಸಿಕ ವೇತನವಿರಲಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

  • ECIL Jobs: ಇಸಿಐಎಲ್‌ ನಲ್ಲಿ 10 ಎಕ್ಸಿಕ್ಯೂಟಿವ್‌ ಆಫೀಸರ್‌ ಹುದ್ದೆಗಳ ನೇಮಕಾತಿ; ಪದವಿ ಪಾಸಾದವರಿಗೆ ಅವಕಾಶ

    ECIL Jobs: ಇಸಿಐಎಲ್‌ ನಲ್ಲಿ 10 ಎಕ್ಸಿಕ್ಯೂಟಿವ್‌ ಆಫೀಸರ್‌ ಹುದ್ದೆಗಳ ನೇಮಕಾತಿ; ಪದವಿ ಪಾಸಾದವರಿಗೆ ಅವಕಾಶ

    ECIL Recruitment 2024: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 10 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಕ್ಸಿಕ್ಯುಟಿವ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹಾಗಾಗಿ ಆಸಕ್ತ ಅಭ್ಯರ್ಥಿಗಳು 03-ಮೇ-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

    ಪ್ರಮುಖ ದಿನಾಂಕಗಳು;
    ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ: 23-04-2024
    ನೇರ ಸಂದರ್ಶನದ ದಿನಾಂಕ: 03-05-2024

    ಹುದ್ದೆಯ ಕುರಿತ ವಿವರ ಇಲ್ಲಿದೆ;
    ಹುದ್ದೆಯ ಸಂಸ್ಥೆ: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ತನ್ನಲ್ಲಿ ಖಾಲಿ ಇರುವ 10 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆಯ್ಕೆಯಾದವರಿಗೆ ರೂ.40000-55000/- ಪ್ರತಿ ತಿಂಗಳು ದೊರೆಯುತ್ತದೆ.

    ಶೈಕ್ಷಣಿಕ ಅರ್ಹತೆ: ECIL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ, MBA, M.Com, PGDM ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 33 ವರ್ಷ ಮೀರಿರಬಾರದು.
    OBC ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗೆ ನೀಡಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
    ವಿಳಾಸ: Electronics Corporation of India Limited, Administrative Building, NFC Road, ECIL Post, Hyderabad – 500062 ಇಲ್ಲಿಗೆ ದಿನಾಂಕ 03-ಮೇ-2024 ರಂದು ಸಂದರ್ಶನಕ್ಕೆ ಹಾಜರಾಗಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

  • Railway Jobs: ನಾರ್ಥನ್‌ ರೈಲ್ವೆಯಲ್ಲಿ ಉದ್ಯೋಗ; ಕ್ರೀಡಾ ಸಾಧಕರಿಗೆ ಸುವರ್ಣಾವಕಾಶ, ಈಗಲೇ ಅಪ್ಲೈ ಮಾಡಿ

    Railway Jobs: ನಾರ್ಥನ್‌ ರೈಲ್ವೆಯಲ್ಲಿ ಉದ್ಯೋಗ; ಕ್ರೀಡಾ ಸಾಧಕರಿಗೆ ಸುವರ್ಣಾವಕಾಶ, ಈಗಲೇ ಅಪ್ಲೈ ಮಾಡಿ

    Northern Railway Sports: ರೈಲ್ವೆ ನೇಮಕಾತಿ ಮಂಡಳಿ, ಉತ್ತರ ರೈಲ್ವೆ, ಕ್ರೀಡಾ ಕೋಟಾದಡಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್‌ ಡಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಒಟ್ಟು 38 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರಕಾರದಲ್ಲಿ ಉದ್ಯೋಗ ಮಾಡಲಿಚ್ಛಿಸುವ ಕ್ರೀಡಾ ಸಾಧಕ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ಹುದ್ದೆಗೆ ಅರ್ಜಿ ಸಲ್ಲಿಸಲು 16-05-2024 ಕೊನೆಯ ದಿನಾಂಕವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತು ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.

    ಪ್ರಮುಖ ದಿನಾಂಕಗಳು;
    ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ: 15-04-2024
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16-04-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-05-2024

    ಹುದ್ದೆಯ ಮಾಹಿತಿ ಇಲ್ಲಿದೆ;
    ಹುದ್ದೆಯ ಹೆಸರು: ಉತ್ತರ ರೈಲ್ವೆ ಆರ್‌ಆರ್‌ಸಿ ಯಲ್ಲಿ ಕ್ರೀಡಾ ಕೋಟಾದಡಿಯ ಗ್ರೂಪ್‌ ಡಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 38 ಹುದ್ದೆಗಳು ಖಾಲಿ ಇದೆ.

    ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    ಕುಸ್ತಿ (ಪುರುಷ) ಫ್ರೀ ಸ್ಟೈಲ್
    ಶೂಟಿಂಗ್
    ಕಬ್ಬಡಿ
    ಹಾಕಿ
    ತೂಕ ಎತ್ತುವಿಕೆ
    ಪವರ್‌ಲಿಫ್ಟಿಂಗ್ (ಪುರುಷ)
    ಪವರ್‌ಲಿಫ್ಟಿಂಗ್ (ಮಹಿಳೆ)
    ಜಿಮ್ನಾಸ್ಟಿಕ್ (ಪುರುಷ)
    ಕ್ರಿಕೆಟ್ (ಪುರುಷ)
    ಕ್ರಿಕೆಟ್ (ಮಹಿಳೆ)
    ಬಾಲ್‌ ಬ್ಯಾಡ್ಮಿಂಟನ್ (ಪುರುಷ)

    ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ/ಸೆಕೆಂಡರಿ ಎಜುಕೇಷನ್‌ ಅಥವಾ ತತ್ಸಮಾನ ಶೈಕ್ಷಣಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

    ವಯೋಮಿತಿ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು. ಹಾಗೂ ಮುಖ್ಯವಾದ ವಿಷಯವೇನೆಂದರೆ ಕ್ರೀಡಾ ಕೋಟಾದಡಿಯ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗುವುದಿಲ್ಲ.

    ಅರ್ಜಿ ಶುಲ್ಕ:
    ಎಸ್‌ಸಿ/ಎಸ್‌ಟಿ/ಮಹಿಳಾ/ ಇತರೆ ಹಿಂದುಳಿದ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ರೂ.250 ಅರ್ಜಿ ಶುಲ್ಕ ಪಾವತಿ ಮಾಡಬೇಕು. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಈ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ, ಆನ್‌ಲೈನ್‌ ಅಪ್ಲಿಕೇಶನ್‌ ಎಂದಿರುವಲ್ಲಿ ಕ್ಲಿಕ್‌ ಮಾಡಿ, ನಂತರ ಅಲ್ಲಿರುವ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬೇಕು.
    ವಿಶೇಷ ಸೂಚನೆ; ಈ ವಿಧಾನ ಹೊರತು ಪಡಿಸಿ ಅಭ್ಯರ್ಥಿಗಳು ಇನ್ನುಳಿದ ಯಾವುದೇ ಮಾದರಿಯಲ್ಲಿ ಅರ್ಜಿ ಸಲ್ಲಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ರಾಜ್ಯ, ರಾಷ್ಟ್ರ, ವಿಶ್ವವಿದ್ಯಾಲಯಗಳು, ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿದ್ದಲ್ಲಿ ಅಂತವರು ಅರ್ಜಿ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್‌ ಮಾಡಿ.

  • NBCC Jobs: ರಾಷ್ಟ್ರೀಯ ಕಟ್ಟಡ ನಿರ್ಮಾಣ ಮಂಡಳಿಯಿಂದ ಮ್ಯಾನೇಜರ್‌, ವಿವಿಧ ಹುದ್ದೆಗಳು ಸೇರಿ 92 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ಭಾರೀ ವೇತನ

    NBCC Jobs: ರಾಷ್ಟ್ರೀಯ ಕಟ್ಟಡ ನಿರ್ಮಾಣ ಮಂಡಳಿಯಿಂದ ಮ್ಯಾನೇಜರ್‌, ವಿವಿಧ ಹುದ್ದೆಗಳು ಸೇರಿ 92 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ಭಾರೀ ವೇತನ

    NBCC Recruitment 2024: ನ್ಯಾಷನಲ್ ಬಿಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೊರೇಶನ್ (NBCC) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 92 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನರಲ್ ಮ್ಯಾನೇಜರ್, ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದೆಂದು NBCC ತನ್ನ ಅಧಿಕೃತ ಅಧಿಸೂಚನೆಯ ಮೂಲಕ ತಿಳಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಿ. ಆಸಕ್ತ ಅಭ್ಯರ್ಥಿಗಳು 07-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08-04-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-05-2024

    ಹುದ್ದೆಯ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ (NBCC) ತನ್ನ ಅಧಿಕೃತ ಅಧಿಸೂಚನೆಯಲ್ಲಿ ಒಟ್ಟು 92 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಜನರಲ್ ಮ್ಯಾನೇಜರ್, ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,270-2,40,000/- ವೇತನ ದೊರಕಲಿದೆ.

    ಪೋಸ್ಟ್‌ ಹೆಸರು ಮತ್ತು ಸಂಖ್ಯೆ:
    ಜನರಲ್ ಮ್ಯಾನೇಜರ್ 3 ಹುದ್ದೆಗಳು
    ADDL. ಜನರಲ್ ಮ್ಯಾನೇಜರ್ 1 ಹುದ್ದೆ
    ಡಿವೈ. ಜನರಲ್ ಮ್ಯಾನೇಜರ್ 1 ಹುದ್ದೆ
    ಮ್ಯಾನೇಜರ್ 2 ಹುದ್ದೆಗಳು
    ಪ್ರಾಜೆಕ್ಟ್ ಮ್ಯಾನೇಜರ್ 3 ಹುದ್ದೆಗಳು
    ಡಿವೈ. ಮ್ಯಾನೇಜರ್ 6 ಹುದ್ದೆಗಳು
    ಡಿವೈ. ಪ್ರಾಜೆಕ್ಟ್ ಮ್ಯಾನೇಜರ್ 2 ಹುದ್ದೆಗಳು
    ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ 30 ಹುದ್ದೆಗಳು
    ಮ್ಯಾನೇಜ್‌ಮೆಂಟ್ ಟ್ರೈನಿ 4 ಹುದ್ದೆಗಳು
    ಜೂನಿಯರ್ ಇಂಜಿನಿಯರ್ 40 ಹುದ್ದೆಗಳು

    ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗೆ ತಕ್ಕಂತೆ CA, ICWA, ಡಿಪ್ಲೊಮಾ, LLB, ಪದವಿ, BE/ B.Tech, MBA, MSW, ಸ್ನಾತಕೋತ್ತರ ಪದವಿ, PGDM ಅನ್ನು ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

    ವೇತನ:
    ಜನರಲ್ ಮ್ಯಾನೇಜರ್ ಹುದ್ದೆಗೆ ರೂ. 90,000-2,40,000/- ಮಾಸಿಕ ವೇತನ ಸಿಗಲಿದೆ.
    ADDL. ಜನರಲ್ ಮ್ಯಾನೇಜರ್ ಹುದ್ದೆಗೆ ರೂ. 80,000-2,20,000/- ಮಾಸಿಕ ವೇತನ ಲಭ್ಯವಿದೆ.
    ಡಿವೈ. ಜನರಲ್ ಮ್ಯಾನೇಜರ್ ಹುದ್ದೆಗೆ ರೂ. 70,000-2,00,000/- ಮಾಸಿಕ ವೇತನ ಸಿಗಲಿದೆ.
    ವ್ಯವಸ್ಥಾಪಕ ಈ ಹುದ್ದೆಗೆ ಆಯ್ಕೆಯಾದವರಿಗೆ ರೂ. 60,000-1,80,000/- ಮಾಸಿಕ ವೇತನ ಸಿಗಲಿದೆ.
    ಪ್ರಾಜೆಕ್ಟ್ ಮ್ಯಾನೇಜರ್, ಡಿವೈ. ವ್ಯವಸ್ಥಾಪಕ ಹುದ್ದೆಗೆ ರೂ. 50,000-1,60,000/- ಮಾಸಿಕ ವೇತನ ಲಭ್ಯ.
    ಡಿವೈ. ಪ್ರಾಜೆಕ್ಟ್ ಮ್ಯಾನೇಜರ್ , ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗೆ ರೂ. 40,000 -1,40,000/- ಮಾಸಿಕ ವೇತನ ಇರಲಿದೆ.
    ಮ್ಯಾನೇಜ್ಮೆಂಟ್ ಟ್ರೈನಿ, ಜೂನಿಯರ್ ಇಂಜಿನಿಯರ್ ರೂ. 27,270/ – ಮಾಸಿಕ ವೇತನ ಲಭ್ಯ.

    ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 49 ವರ್ಷ ಮೀರಿರಬಾರದು.
    ಜನರಲ್ ಮ್ಯಾನೇಜರ್ 49 ವರ್ಷ ಗರಿಷ್ಠ
    ADDL. ಜನರಲ್ ಮ್ಯಾನೇಜರ್ 45 ಗರಿಷ್ಠ
    ಡಿವೈ. ಜನರಲ್ ಮ್ಯಾನೇಜರ್ 41 ವರ್ಷ ಗರಿಷ್ಠ
    ಮ್ಯಾನೇಜರ್ 37 ವರ್ಷ ಗರಿಷ್ಠ
    ಪ್ರಾಜೆಕ್ಟ್ ಮ್ಯಾನೇಜರ್, ಡಿವೈ. ಮ್ಯಾನೇಜರ್ ಗರಿಷ್ಠ 33 ವರ್ಷ
    ಡಿವೈ. ಪ್ರಾಜೆಕ್ಟ್ ಮ್ಯಾನೇಜರ್, ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಗರಿಷ್ಠ 30 ವರ್ಷ
    ಮ್ಯಾನೇಜ್ಮೆಂಟ್ ಟ್ರೈನಿ ಗರಿಷ್ಠ 29 ವರ್ಷ
    ಜೂನಿಯರ್ ಇಂಜಿನಿಯರ್ ಗರಿಷ್ಠ 28 ವರ್ಷ.
    ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

    ಅರ್ಜಿ ಶುಲ್ಕ:
    ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 1000/-, SC, ST, PWD ಮತ್ತು ಇಲಾಖಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ. ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • ARIES Jobs: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ARIES; ಈಗಲೇ ಅಪ್ಲೈ ಮಾಡಿ

    ARIES Jobs: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ARIES; ಈಗಲೇ ಅಪ್ಲೈ ಮಾಡಿ

    ARIES Recruitment 2024: ಆರ್ಯಭಟ್ಟ ರೀಸರ್ಚ್ ಇನ್‌ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ (ARIES) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಸ್ಥೆ ಅರ್ಜಿಯನ್ನು ಆಹ್ವಾನಿಸಿದೆ. ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೈನಿತಾಲ್ – ಉತ್ತರಾಖಂಡ, ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಈ ಹುದ್ದೆಗಳಿಗೆ ಪೋಸ್ಟಿಂಗ್‌ ಆಗಲಿದೆ. ಹಾಗಾಗಿ ಆಸಕ್ತ ಅಭ್ಯರ್ಥಿಗಳು ದಿನಾಂಕ 04-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20-04-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-05-2024

    ಹುದ್ದೆಯ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ಆರ್ಯಭಟ್ಟ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ (ARIES) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಯ ಪೋಸ್ಟಿಂಗ್‌ ನೈನಿತಾಲ್ – ಉತ್ತರಾಖಂಡ, ಬೆಂಗಳೂರು – ಕರ್ನಾಟಕ ದಲ್ಲಿ ಆಗಲಿದೆ. ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಆಯ್ಕೆಯಾದರೆ ಮಾಸಿಕ ರೂ. 42,000/- ವೇತನ ದೊರಕಲಿದೆ

    ವಿದ್ಯಾರ್ಹತೆ:ARIES ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, MCA, Ph.D ಮಾಡಿರುವ ಅಭ್ಯರ್ಥಿಗಳು ಈ ಮೇಲೆ ತಿಳಿಸಿದ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

    ವಯೋಮಿತಿ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷ ಆಗಿರಬೇಕು. ಆರ್ಯಭಟ್ಟ ರಿಸರ್ಚ್ ಇನ್‌ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗುವುದು.

    ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ: ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ