Category: banks

  • PSCB : ಭರ್ಜರಿ ಉದ್ಯೋಗವಕಾಶ

    PSCB : ಭರ್ಜರಿ ಉದ್ಯೋಗವಕಾಶ

    ಪಂಜಾಬ್ ಸ್ಟೇಟ್ ಕೋಅಪರೇಟಿವ್ ಬ್ಯಾಂಕ್ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಮೇ, 20, 2021 ಕೊನೆಯ ದಿನಾಂಕವಾಗಿದೆ. ಅರ್ಜಿ ಶುಲ್ಕ, ಅರ್ಜಿ ವಿವರ, ಹುದ್ದೆ ಇತ್ಯಾದಿಗಳನ್ನು ಕೆಳಗೆ ನೀಡಲಾಗಿದೆ.ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-04-2021
    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-05-2021

    ಹುದ್ದೆ: ಸೀನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತರಿರುವ ಅಭ್ಯರ್ಥಿಗಳು ಡಿಗ್ರಿ/ಪಿಜಿಎಂಎಫ್ ಸಿ/ಎಂಬಿಎ/ಸಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು. ಒಟ್ಟು 40 ಹುದ್ದೆಗಳಿವೆ.
    ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ/ ಎಂಎಫ್ ಸಿ/ ಎಂಬಿಎ/ಸಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು. ಒಟ್ಟು ಹುದ್ದೆಗಳ ಸಂಖ್ಯೆ 60.
    ಮಾಹಿತಿ ತಂತ್ರಜ್ಞಾನ ಅಧಿಕಾರಿ ಹುದ್ದೆಗೆ ಬಿಇ/ಬಿಟೆಕ್/ಬಿಎಸ್ಸಿ(ಇಂಜಿನಿಯರಿಂಗ್) ಎಂಸಿಎ/ಎಂ.ಎಸ್ಸಿ (ಐಟಿ) ವಿದ್ಯಾರ್ಹತೆ ಹೊಂದಿರಬೇಕು. ಒಟ್ಟು ಹುದ್ದೆ 07.
    ಕ್ಲರ್ಕ್ ಕಮ್ ಡಿಇಒ ಹುದ್ದೆಗೆ ಅರ್ಜಿ ಸಲ್ಲಿಸುವವರು ಡಿಪ್ಲೋಮಾ (ಕಂಪ್ಯೂಟರ್)/ಯಾವುದೇ ಡಿಗ್ರಿ/ ಪಿಜಿ ವಿದ್ಯಾರ್ಹತೆ ಯನ್ನು ಹೊಂದಿರಬೇಕು. ಒಟ್ಟು ಹುದ್ದೆ 739.
    ಸ್ಟೆನೋ ಟೈಪಿಸ್ಟ್ ಈ ಹುದ್ದೆಗೆ ಡಿಪ್ಲೋಮಾ (ಕಂಪ್ಯೂಟರ್) ಯಾವುದೇ ಪದವಿ/ಪಿಜಿ/ಟೈಪಿಂಗ್ ಜ್ಞಾನ ಹೊಂದಿರಬೇಕು. ಒಟ್ಟು ಹುದ್ದೆ 10.

    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 37 ವರ್ಷ ಮೀರಿರಬಾರದು.

    ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರವೇ ಸಲ್ಲಿಸಬೇಕು.

    ಅರ್ಜಿ ಶುಲ್ಕ : ಎಸ್ ಸಿ / ಎಸ್ ಟಿ ಅಭ್ಯರ್ಥಿಗಳಿಗೆ ರೂ. 700/- ಹಾಗೂ ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳು ರೂ. 1400/- ನ್ನು ಪಾವತಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • SBI : ಭರ್ಜರಿ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

    SBI : ಭರ್ಜರಿ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

    ಭಾರತೀಯ ಸ್ಟೇಟ್ ಬ್ಯಾಂಕ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ.

    ಹುದ್ದೆ : ಕ್ಲರ್ಕ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ ಸಂಖ್ಯೆ : 5237

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಎಪ್ರಿಲ್ 27, 2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 17, 2021

    ಕರ್ನಾಟಕದಲ್ಲಿ 509 ಕ್ಲರ್ಕ್ ಹುದ್ದೆಗಳನ್ನು ನೇಮಕ ಮಾಡಲಾಗುವುದು.

    ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿವಿಯಿಂದ ಯಾವುದೇ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

    ವಿದ್ಯಾಭ್ಯಾಸ : ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪಾಸ್ ಮಾಡಿರಬೇಕು.

    ವಯೋಮಿತಿ : ಈ ಹುದ್ದೆಗೆ ಕನಿಷ್ಠ 20 ಹಾಗೂ ಗರಿಷ್ಠ 28 ವಯೋಮಿತಿ ಮೀರದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗೆ ರೂ. 750/- ಹಿಂದುಳಿದ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ.750/- ಎಸ್‌ಸಿ/ಎಸ್‌ಟಿ/ಪಿಡಬ್ಲೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

    ರಿಜಿಸ್ಟ್ರೇಷನ್ ಪಡೆದ ಅಭ್ಯರ್ಥಿಗಳಿಗೆ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಜೂನ್ 31, 2021 ರಂದು ಮಾಡಲಾಗುತ್ತದೆ. ಕೊರೊನಾ ಹಿನ್ನೆಲೆಯಲ್ಲಿ ದಿನಾಂಕಗಳಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳು ಇರಬಹುದು. ಆನ್‌ಲೈನ್ ಪೂರ್ವಭಾವಿ ಪರೀಕ್ಷೆಯಲ್ಲಿಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಮತ್ತು ಆಯಾ ರಾಜ್ಯಕ್ಕೆ ಸಂಬಂಧಪಟ್ಟ ಅಧಿಕೃತ ಭಾಷೆಗಳ ಕುರಿತು ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಅಂತಿಮವಾಗಿ ಕ್ಲರ್ಕ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮೂಲ ವೇತನ ರೂ. 13,075 ನೀಡಲಾಗುತ್ತದೆ. ಜತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್: ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್: ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನುಆಹ್ವಾನಿಸಲಾಗಿದೆ.

    ಹುದ್ದೆ : ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 16, 2021

    ಆರ್ಥಿಕ ಸಲಹೆಗಾರ ಹುದ್ದೆ ತಾತ್ಕಾಲಿಕವಾಗಿದ್ದು, ಮೂರು ವರ್ಷಗಳವರೆಗೆ ಇರುತ್ತದೆ. ಅಭ್ಯರ್ಥಿಗಳು ಮಂಡ್ಯ, ಚಾಮರಾಜನಗರ, ತುಮಕೂರು, ಯಾದಗಿರಿ ಈ ಜಿಲ್ಲೆಗಳಲ್ಲಿ ಕೆಲಸ ಮಾಡಬೇಕಾಗಿರುತ್ತದೆ.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವೀಧರರು ಅಥವಾ ನಿವೃತ್ತ/ಸ್ವಯಂ ನಿವೃತ್ತಿ ಪಡೆದ ಬ್ಯಾಂಕ್ ಅಧಿಕಾರಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿಂಗ್ ಜ್ಞಾನದೊಂದಿಗೆ ಹಣಕಾಸಿನ ಸೇವೆಗಳ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ತಿಳುವಳಿಕೆಯುಳ್ಳ 62 ವರ್ಷದೊಳಗಿನವರು ಅರ್ಜಿಯನ್ನು ಸಲ್ಲಿಸಬಹುದು.

    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

    ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಲು ಸೂಚಿಸಲಾಗಿದೆ: Karnataka Gramin Bank, Branch Office, Ballari, Karnataka ಈ ವಿಳಾಸಕ್ಕೆ ರಿಜಿಸ್ಟರ್, ಸ್ಪೀಡ್ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 22-04-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ : 08392-236428

  • ಎಸ್‌ಬಿಐ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

    ಎಸ್‌ಬಿಐ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ರೆಗ್ಯುಲರ್ ಮತ್ತು ಗುತ್ತಿಗೆ ಆಧಾರಿತ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲು ಪ್ರಾರಂಭಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಆಹ್ವಾನಿಸಿದೆ.

    ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 13-04-2021
    ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ : 05-05-2021
    ಪರೀಕ್ಷೆ ದಿನಾಂಕ : 23-05-2021

    ಹುದ್ದೆ : ಎಸ್‌ಬಿಐ ಸ್ಪೆಷಲಿಸ್ಟ್‌ ಕೇಡರ್ ಆಫೀಸರ್ ಹುದ್ದೆಗಳ ಪೈಕಿ ಮ್ಯಾನೇಜರ್, ಸೀನಿಯರ್ ಸ್ಪೆಷಿಯಲ್ ಎಕ್ಸಿಕ್ಯೂಟಿವ್, ಸೀನಿಯರ್ ಎಕ್ಸಿಕ್ಯೂಟಿವ್, ಡೆಪ್ಯೂಟಿ ಚೀಫ್ ಟೆಕ್ನಾಲಜಿ ಆಫೀಸರ್, ಮ್ಯಾನೇಜರ್, ಎಕ್ಸಿಕ್ಯೂಟಿವ್, ಡಾಟಾ ಅನಾಲಿಸ್ಟ್‌, ಡಿವೈ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

    ವಿದ್ಯಾರ್ಹತೆ : ಹುದ್ದೆಗಳಗನುಸಾರವಾಗಿ ಅಭ್ಯರ್ಥಿಗಳು ಬಿಎ/ಎಂಎ/ಎಂಬಿಎ/ಬಿಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ಅರ್ಜಿ ಶುಲ್ಕ : ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳು ರೂ. 750/-ಅರ್ಜಿ ಶುಲ್ಕವನ್ನು ಪಾವತಿಸಬೇಕು.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

    ಕೇಡರ್ ಆಫೀಸರ್ ಹುದ್ದೆ ಗುತ್ತಿಗೆ / ರೆಗ್ಯುಲರ್ ಆಧಾರದ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ ಮಾಡಿ

  • ಬ್ಯಾಂಕ್ ಆಫ್ ಬರೋಡ ವಿವಿಧ ಹುದ್ದೆಗೆ ನೇಮಕ

    ಬ್ಯಾಂಕ್ ಆಫ್ ಬರೋಡ ವಿವಿಧ ಹುದ್ದೆಗೆ ನೇಮಕ

    ಬ್ಯಾಂಕ್ ಆಫ್ ಬರೋಡಾನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಚೀಫ್ ಎಕಾನಮಿಸ್ಟ್ -01
    ಪಬ್ಲಿಕ್ ರಿಲೇಷನ್ ಆಫೀಸರ್ – 01
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 29-04-2021

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿಶುಲ್ಕವನ್ನು ಆನ್‌ಲೈನ್‌ ನಲ್ಲಿ ಪಾವತಿಸಬಹುದು.
    ಜನರಲ್, ಒಬಿಸಿ, ಇಡ್ಬ್ಲುಎಸ್, ಅನ್‌ರಿಸರ್ವ್‌ಡ್ ಅಭ್ಯರ್ಥಿಗಳಿಗೆ ರೂ.6೦೦/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ. ಪಿಡ್ಬ್ಲುಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ. 1೦೦/- ಅರ್ಜಿ ಶುಲ್ಕವನ್ನು ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಡಬ್ಲುಎಸ್ ಪೋಸ್ಟ್‌ ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಚೀಫ್ ಎಕಾನಮಿಸ್ಟ್ ಪೋಸ್ಟ್‌ ನೋಟಿಫಿಕೇಶನ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • SBI ಕ್ಲರ್ಕ್ ಫಲಿತಾಂಶ ಬಿಡುಗಡೆ

    SBI ಕ್ಲರ್ಕ್ ಫಲಿತಾಂಶ ಬಿಡುಗಡೆ

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು, ಎಸ್‌ಬಿಐ ಕ್ಲರ್ಕ್ 2020 ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಎಸ್‌ಬಿಐ ಕ್ಲರ್ಕ್ 2020 ಪರೀಕ್ಷೆ ಬರೆದ ಅಭ್ಯರ್ಥಿಗಳು ಮೊದಲ ಕಾಯ್ದಿರಿಸಿದ ಪಟ್ಟಿಯನ್ನುsbi.co.in ವೆಬ್‌ಸೈಟ್ ಗೆ ಭೇಟಿ ನೀಡಿ ಚೆಕ್ ಮಾಡಲು ಅವಕಾಶವಿದೆ.

    ಎಸ್‌ಬಿಐ ಕ್ಲರ್ಕ್ 2020 ಫಲಿತಾಂಶವನ್ನು ಮುಖ್ಯ ಪರೀಕ್ಷೆಗೆ ಬಿಡುಗಡೆ ಮಾಡಿದೆ. ಈ ಪರೀಕ್ಷೆಯನ್ನು ನವಂಬರ್ 07 ಮತ್ತು ಡಿಸೆಂಬರ್ 31,2020 ರಂದು ಮಾಡಲಾಗಿತ್ತು. ಈ ನೇಮಕಾತಿ ಪ್ರಕ್ರಿಯೆ ಮೂಲಕ 8000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ವಿಶೇಷ ನೇಮಕಾತಿ ಡ್ರೈವ್ ನಲ್ಲಿ 130 ಹುದ್ದೆಗಳನ್ನು. 7870 ಹುದ್ದೆಗಳನ್ನು ರೆಗ್ಯುಲರ್ ಆಧಾರದಲ್ಲಿ ನೇಮಕ ಮಾಡಲಾಗುತ್ತದೆ.

    ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಇತರೆ ದಾಖಲೆಗಳನ್ನು ಪರಿಶೀಲನೆಗೆ ನಿಗದಿಪಡಿಸಿದ ದಿನಾಂಕದಂದು ನೀಡಬೇಕು. ಆಯ್ಕೆಯಾದ ಅಭ್ಯರ್ಥಿಗಳನ್ನು ಎಸ್‌ಬಿಐ ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್ ವಿಭಾಗಕ್ಕೆ ಜೂನಿಯರ್ ಅಸಿಸ್ಟೆಂಟ್ ಆಗಿ ನೇಮಕ ಮಾಡಿಕೊಳ್ಳಲಾಗುತ್ತದೆ.