Category: Dakshina Kannada

  • DKMUL : ವಿವಿಧ ಹುದ್ದೆಗಳಿಗೆ ಮೇ 28 ಕೊನೆ ದಿನಾಂಕ

    DKMUL : ವಿವಿಧ ಹುದ್ದೆಗಳಿಗೆ ಮೇ 28 ಕೊನೆ ದಿನಾಂಕ

    ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ನೇಮಕಾತಿ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ದಿನಾಂಕ 28/05/2021 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಗಳ ವಿವರ, ಅರ್ಜಿ ಶುಲ್ಕ ಇತರೆ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

    ಹುದ್ದೆ : ತಾಂತ್ರಿಕಾಧಿಕಾರಿ, ವಿಸ್ತರಣಾಧಿಕಾರಿ, ಡೈರಿ ಸುಪರ್ ವೈಸರ್, ಲೆಕ್ಕ ಸಹಾಯಕರು, ಆಡಳಿತ ಸಹಾಯಕರು, ಮಾರುಕಟ್ಟೆ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಯೋಮಿತಿ : 18-35(ಸಾಮಾನ್ಯ), 18-38 (ಪ್ರವರ್ಗ 2ಎ, 2ಬಿ, 3ಎ, 3ಬಿ), 18-40 ( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ)

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ : ವಿವಿಧ ಹುದ್ದೆಗಳು : ಈ ಕೂಡಲೇ ಅರ್ಜಿ ಸಲ್ಲಿಸಿ

    ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ : ವಿವಿಧ ಹುದ್ದೆಗಳು : ಈ ಕೂಡಲೇ ಅರ್ಜಿ ಸಲ್ಲಿಸಿ

    ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ರಾಮೀಣ ಪ್ರದೇಶದಿಂದ ಹಾಲನ್ನು ಸಂಗ್ರಹಿಸಿ, ಸಂಸ್ಕರಿಸಿ ಉತ್ಕೃಷ್ಟ ಗುಣಮಟ್ಟದ ವಿವಿಧ ಹಾಲಿನ ಉತ್ಪನ್ನಗಳನ್ನು ತಯಾರಿಗೆ ಮಾಡಿ ಪಾಶ್ಚರೀಕರಿಸಿದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ಸರಬರಾಜು ಮಾಡುವ FSSC 22000 Ver 5.0 ದೃಢೀಕರಣ ಪ್ರಮಾಣಪತ್ರ ಮತ್ತು FSSAI ಆಹಾರ ಸುರಕ್ಷತೆ ಮತ್ತು ಸಂರಕ್ಷಣೆ ಕಾಯಿದೆ 2006 ನಿಯಮ 2011 ರನ್ವಯ ನೋದಾವಣೆಗಾಗಿ ಲೈಸೆನ್ಸ್ ಹೊಂದಿದ ಹಾಗೂ ನ್ಯಾಷನಲ್ ಡೇರಿ ಡೆವಲಪ್‌ಮೆಂಟ್ ಬೋರ್ಡ್ ವತಿಯಿಂದ ಕ್ವಾಲಿಟಿ ಮಾರ್ಕ್ ಪ್ರಮಾಣ ಪತ್ರವನ್ನು ಹಾಗೂ ರಾಷ್ಟ್ರೀಯ ಮಟ್ಟದಲ್ಲಿ “ಎಕ್ಸೆಲೆನ್ಸಿ ಅವಾರ್ಡ್” ಪಡೆದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುತ್ತದೆ. ಸಂಸ್ಥೆಯ ಕಾರ್ಯಾಚರಣೆಯನ್ನು ಬಲಪಡಿಸಲು ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಈ ಕೆಳಗಿನಂತಿದೆ:

    1. ಸಹಾಯಕ ವ್ಯವಸ್ಥಾಪಕರು -07
    2. ತಾಂತ್ರಿಕಾಧಿಕಾರಿ (ಡಿ.ಟಿ) -04
    3. ತಾಂತ್ರಿಕಾಧಿಕಾರಿ (ಪರಿಸರ) -01
    4. ತಾಂತ್ರಿಕ ಅಧಿಕಾರಿ ( ಇಂಜಿನಿರಿಂಗ್) – 01
    5. ವಿಸ್ತರಣಾಧಿಕಾರಿ ದರ್ಜೆ – 08
    6. ಡೈರಿ ಸೂಪರ್‌ವೈಸರ್ ದರ್ಜೆ -05
    7. ಆಡಳಿತ/ಮಾರುಕಟ್ಟೆ ಸಹಾಯಕರು ದರ್ಜೆ -10
    8. ಕೆಮಿಸ್ಟ್ ದರ್ಜೆ -12
    9. ಲೆಕ್ಕ ಸಹಾಯಕರು ದರ್ಜೆ – 02
    10. ಕಿರಿಯ ತಾಂತ್ರಿಕರು – 30

    ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿ 18 ವರ್ಷಗಳು ಮತ್ತು ಗರಿಷ್ಠ ವಯೋಮಿತಿ 1. ಸಾಮಾನ್ಯ ಅರ್ಹತೆ – 35 ವರ್ಷಗಳು, 2. ಪ್ರವರ್ಗ 2a, 2b,3a 3b ಅಭ್ಯರ್ಥಿಗಳಿಗೆ 38 ವರ್ಷಗಳು, 3. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ -1 – 40 ವರ್ಷಗಳು. ಅಂಗವಿಕಲರಿಗೆ ಮತ್ತು ವಿಧವರೆಯರಿಗೆ ವಯೋಮಿತಿಯಲ್ಲಿ ಗರಿಷ್ಠ ಹತ್ತು ವರ್ಷಗಳ ಸಡಿಲಿಕೆ ಇರುತ್ತದೆ.

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 500/- ( ಬ್ಯಾಂಕ್ ಶುಲ್ಕ ಪ್ರತ್ಯೇಕ) ಮತ್ತು ಇತರೆ ಅಭ್ಯರ್ಥಿಗಳಿಗೆ ರೂ. 800/- ( ಬ್ಯಾಂಕ್ ಶುಲ್ಕ ಪ್ರತ್ಯೇಕ )

    ಹೆಚ್ಚಿನ ಎಲ್ಲಾ ವಿವರಗಳನ್ನು ಒಳಗೊಂಡ ನೇಮಕಾತಿ ಪ್ರಕಟಣೆ, ವಿವಿಧ ನಮೂನೆಗಳು ಮತ್ತು ಇತರೆ ವಿವರಗಳನ್ನು ಒಕ್ಕೂಟದ ವೆಬ್‌ಸೈಟ್ www.dkmul.comನಲ್ಲಿರುವ career menu ಕ್ಲಿಕ್ ಮಾಡಿ. ಅದರಲ್ಲಿರುವ ವಿವರವಾದ ನೇಮಕಾತಿ ಪ್ರಕಟಣೆಯನ್ನು ಓದಿ, ತದನಂತರ apply online ಲಿಂಕ್‌ನನ್ನು ಕ್ಲಿಕ್ ಮಾಡಿ. ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಖುದ್ದಾಗಿ/ಅಂಚೆ ಮೂಲಕ ಬಂದ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

    ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 28-04-2021
    ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 28-05-2021
    ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 29-05-2021 ಸಂಜೆ 5.30 ಗಂಟೆಯವರೆಗೆ

  • ಕ್ಯಾಂಪ್ಕೋ: ಲಿಖಿತ ಪರೀಕ್ಷೆ ಮುಂದೂಡಿಕೆ

    ಕ್ಯಾಂಪ್ಕೋ: ಲಿಖಿತ ಪರೀಕ್ಷೆ ಮುಂದೂಡಿಕೆ

    ದಿ ಕ್ಯಾಂಪ್ಕೋ ಲಿಮಿಟೆಡ್ ಜ್ಯೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ( A/M) ಟ್ರೈನಿ ಮತ್ತು ಜ್ಯೂನಿಯರ್ ಗ್ರೇಡರ್ ಟ್ರೈನಿ ಹುದ್ದೆಗೆ ಲಿಖಿತ ಪರೀಕ್ಷೆ ಯನ್ನು ಶಾರದಾ ವಿದ್ಯಾಲಯ ಮತ್ತು ಸೇಂಟ್ ಆಗ್ನೇಸ್ ಕಾಲೇಜಿನಲ್ಲಿ ದಿನಾಂಕ 25-04-2021 ರಂದು ನಿಗದಿಪಡಿಸಲಾಗಿತ್ತು. ಆದರೆ ಕೋವಿಡ್-19 ಕೊರೊನಾ ವೈರಸ್ ಹರಡುತ್ತಿರುವ ಕಾರಣ ಲಿಖಿತ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ.

  • ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 34 ಜವಾನ ಹುದ್ದೆಗಳಿಗೆ ನೇಮಕ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ

    ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 34 ಜವಾನ ಹುದ್ದೆಗಳಿಗೆ ನೇಮಕ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ

    ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಜವಾನ( Peon) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 34 ಹುದ್ದೆಗಳು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 19-04-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-05-2021(11.59 ರಾತ್ರಿ)

    ವಿದ್ಯಾರ್ಹತೆ : ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

    ಕನ್ನಡ ಓದಲು ಬರೆಯಲು ತಿಳಿದಿರಬೇಕು.

    ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವಯೋಮಿತಿಯವರಾಗಿರಬೇಕು.

    ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪ್ರವರ್ಗ-I ರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ಧೃಢೀಕರಣ ಪತ್ರ ಹೊಂದಿದ್ದಲ್ಲಿ‌ ಗರಿಷ್ಠ 40 ವರ್ಷ.

    ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ಪ್ರಮಾಣ ಪತ್ರ ಹೊಂದಿದ್ದಲ್ಲಿ ಗರಿಷ್ಠ 38 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.

    ಅರ್ಜಿ ಶುಲ್ಕ : ಸಾಮಾನ್ಯ ವರ್ಗ, 2ಎ, 2 ಬಿ, 3 ಎ, 3 ಬಿ ಸೇರಿದ ಅಭ್ಯರ್ಥಿಗಳಿಗೆ ರೂ. 200/-, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1 ಹಾಗೂ ಎಲ್ಲಾ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

    ಆನ್ಲೈನ್ ಹೊರತು ಪಡಿಸಿ ಬೇರೆ ಯಾವುದೇ ಬೇರೆ ಯಾವುದೇ ವಿಧಾನದಲ್ಲಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು : ವಿವಿಧ ಹುದ್ದೆ : ಎಪ್ರಿಲ್ 22 ಕಡೇ ದಿನಾಂಕ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು : ವಿವಿಧ ಹುದ್ದೆ : ಎಪ್ರಿಲ್ 22 ಕಡೇ ದಿನಾಂಕ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾದ್ಯಂತ ಕೋವಿಡ್ -19 ನಿಯಂತ್ರಣ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಧೀನದಲ್ಲಿರುವ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಲು ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಲ್ಯಾಬ್ ಟೆಕ್ನಿಶಿಯನ್ – 03
    ಫಾರ್ಮಸಿಸ್ಟ್ – 08

    ಹುದ್ದೆ ಸಮಯ : ಸೆ. 30 ರವರೆಗೆ ಗುತ್ತಿಗೆ ಆಧಾರದಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಏಪ್ರಿಲ್‌ 22 ರಂದು ಬೆಳಗ್ಗೆ 11 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನೇರ ಸಂದರ್ಶನ‌ ನಡೆಯಲಿದೆ.

    ಹೆಚ್ಚಿನ ಮಾಹಿತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲೋಕೋಪಯೋಗಿ ಕಟ್ಟಡ ‌ಸಂಕೀರ್ಣ, ನೆಹರು ಮೈದಾನ ರಸ್ತೆ, ಮಂಗಳೂರು ಸಂಪರ್ಕಿಸಬಹುದು.

  • ಪ್ರಧಾನಮಂತ್ರಿ ಮಾತೃವಂದನ ಯೋಜನೆಯಡಿ ಮಂಗಳೂರಿನಲ್ಲಿ ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

    ಪ್ರಧಾನಮಂತ್ರಿ ಮಾತೃವಂದನ ಯೋಜನೆಯಡಿ ಮಂಗಳೂರಿನಲ್ಲಿ ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

    ಪ್ರಧಾನಮಂತ್ರಿ ಮಾತೃವಂದನ ಯೋಜನೆಯ ಜಿಲ್ಲಾ ಕೋಶದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 31, 2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ಟಾರ- ಮಂಗಳೂರು ಇಲ್ಲಿ ಸಂಪರ್ಕಿಸಬಹುದು.

    ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ಮೇಲಿನ ವಿಳಾಸದಲ್ಲಿ ಪಡೆಯಬಹುದು.