Category: Govt Jobs

  • ಬೆಂಗಳೂರು ಸಿಟಿ ಯುನಿವರ್ಸಿಟಿ ; ವಿವಿಧ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಬೆಂಗಳೂರು ನಗರ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಈ ಕೆಳಕಂಡ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಮತ್ತು ಬಹುಶಿಸ್ತೀಯ ಘಟಕ ಮಹಿಳಾ ಕಾಲೇಜಿನಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸ್ನಾತಕೋತ್ತರ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಪೂರ್ಣಕಾಲಿಕ / ಅರೆಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಯುಜಿಸಿ/ ಎಐಸಿಟಿಇ ನಿಯಮಾನುಸಾರ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಹುದ್ದೆ ವಿವರ : ವಿಜ್ಞಾನ ವಿಭಾಗ, ಕಲಾ ವಿಭಾಗ, ವಾಣಿಜ್ಯ ವಿಭಾಗ ಮ್ಯಾನೇಜ್ಮೆಂಟ್

    ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ www.bcu.ac.in ರಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅರ್ಜಿಗಳನ್ನು ಕುಲಸಚಿವರ ಕಚೇರಿ, ಬೆಂಗಳೂರು, ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜ್ ಆವರಣ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು- 560 001 ದಿನಾಂಕ : 09-09-2032 ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸಬಹುದಾಗಿದೆ.

    ನೋಟಿಫಿಕೇಶನ್

  • ಜಿಲ್ಲಾ ಪಂಚಾಯತ ಕಾರ್ಯಾಲಯ ಹಾವೇರಿ : ವಿವಿಧ ಹುದ್ದೆ

    ಹಾವೇರಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ತಾಂತ್ರಿಕ ಸಹಾಯಕರು ( ಅರಣ್ಯ/ಕೃಷಿ/ತೋಟಗಾರಿಕೆ) ಮತ್ತು ಬಿ.ಎಫ್.ಟಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ತಾಂತ್ರಿಕ ಸಹಾಯಕರು ( ಅರಣ್ಯ) – 3 ಹುದ್ದೆ: ಬಿ.ಎಸ್ಸಿ ( ಅರಣ್ಯ) ವಿದ್ಯಾರ್ಹತೆಯನ್ನು ಹೊಂದಿರಬೇಕು.

    ತಾಂತ್ರಿ ಸಹಾಯಕರು ( ಕೃಷಿ) :3 ಹುದ್ದೆ: ಬಿಎಸ್ಸಿ (ಕೃಷಿ) ವಿದ್ಯಾರ್ಹತೆಯನ್ನು ಹೊಂದಿರಬೇಕು.

    ತಾಂತ್ರಿಕ ಸಹಾಯಕರು ( ತೋಟಗಾರಿಕೆ) : 8 ಹುದ್ದೆ: ಬಿಎಸ್ಸಿ ( hori) ವಿದ್ಯಾರ್ಹತೆಯನ್ನು ಹೊಂದಿರಬೇಕು.

    ಬಿ.ಎಫ್.ಟಿ( ಬರಿಗಾಲು ತಜ್ಞ) :8 ಹುದ್ದೆ: ಈ ಹುದ್ದೆಗೆ ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು.

    ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ https://haveri.nic.in/ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-07-2021
    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-08-2021
    ಮೂಲ ದಾಖಲೆಗಳನ್ನು ಪರಿಶೀಲಿಸಲು ‌ನಿಗದಿಪಡಿಸಿರುವ ದಿನಾಂಕ 24-08-2021 ರಂದು ಸಂಜೆ 5 ಹಾಜರಾಗುವ ಅಭ್ಯರ್ಥಿಗಳ ದಾಖಲೆಗಳನ್ನು ಮಾತ್ರ ಪರಿಶೀಲಿಸಲಾಗುವುದು.

    ಆನ್ಲೈನ್ ಮೂಲಕ ಇಲ್ಲಿ ಅರ್ಜಿ ಸಲ್ಲಿಸಿ

  • KSP : ಆಂಗ್ಲ ಹಾಗೂ ಕರ್ನಾಟಕ ವಾದ್ಯಗಾರರ ಹುದ್ದೆಗಳ ನೇಮಕಾತಿ

    ಕೆ.ಎ.ಆರ್.ಪಿ ಮೌಂಟೆಡ್ ಮೈಸೂರು ಇಲ್ಲಿ‌ ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರರ ಹುದ್ದೆಗಳಿಗೆ ನೇಮಕಾತಿಗಾಗಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು ಲಿಪಿಕ ವೃಂದ ಸೇರಿದಂತೆ (ನೇಮಕಾತಿ) ನಿಯಮಗಳು 2004 ರ ಹಾಗೂ ಸರಕಾರದ ಅಧಿಸೂಚನೆ ಅನ್ವಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01-06-2021 ಬೆಳಗ್ಗೆ 10 ಗಂಟೆಯಿಂದ
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-06-2021 ಸಂಜೆ 5.00 ಗಂಟೆಯವರೆಗೆ

    ಹುದ್ದೆ : ಆಂಗ್ಲ ವಾದ್ಯವೃಂದದ ವಾದ್ಯಗಾರರ ಹುದ್ದೆ

    ಹುದ್ದೆಗಳ ಸಂಖ್ಯೆ :17
    ಹುದ್ದೆ ಸ್ಥಳ : ಕರ್ನಾಟಕ
    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 23,500/- ರಿಂದ ರೂ.47, 650/- ವೇತನ ನಿಗದಿಪಡಿಸಲಾಗಿದೆ.

    ವಯೋಮಿತಿ: ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಹಾಗೂ 30 ವರ್ಷಗಳನ್ನು ಮೀರಿರಬಾರದು.

    ಅರ್ಜಿ ಶುಲ್ಕ : ಸಾಮಾನ್ಯ ವರ್ಗ, 2( ಎ), 2 ( ಬಿ) , 3 ( ಎ) , 3 ( ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.250/-, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ,ಪ್ರವರ್ಗ -1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.100/-

    ಅರ್ಜಿಗಳನ್ನು ಕಮಾಂಡೆಂಟ್ , ಕೆ.ಆರ್.ಪಿ ಮೌಂಟೆಡ್ ಕಂಪನಿ, ಲಲಿತಮಹಲ್ ರಸ್ತೆ, ಮೈಸೂರು – 570011 ರವರ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕೊನೆಯ ದಿನಾಂಕದೊಳಗೆ ಕಚೇರಿಗೆ ತಲುಪುವಂತೆ ತಲುಪಿಸುವುದು.

    ನಿಗದಿತ ಶುಲ್ಕಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಅಧಿಕೃತ ಶಾಖೆಯಿಂದ ಡಿಡಿಯನ್ನು ” ಕಮಾಂಡೆಂಟ್, ಕೆಎಆರ್ ಪಿ, ಮೌಂಟೆಡ್ ಕಂಪನಿ, ಮೈಸೂರು ರವರ ಹೆಸರಲ್ಲಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸುವುದು.

    ನಿಗದಿತ ಮಾಹಿತಿ/ ಸೂಚನೆಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ www.ksp.gov.in ನಲ್ಲಿ ಪ್ರಕಟಿಸಲಾಗಿದೆ.

    ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ತಮ್ನ ವೈಯಕ್ತಿಕ ಖರ್ಚಿನಲ್ಲಿ ಬೆರಳಚ್ಚು ಮಾಡಿಸಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆತ ಬಣ್ಣದ ಭಾವಚಿತ್ರ ಹಾಗೂ ಸಹಿಯೊಂದಿಗೆ ಅರ್ಜಿಯಲ್ಲಿರುವ ಎಲ್ಲಾ ವಿವರಗಳನ್ನು ಸಮರ್ಪಕವಾಗಿ ಭರ್ತಿ ಮಾಡಿ ಕೆ.ಎ. ಆರ್.ಪಿ ಮೌಂಟೆಡ್ ಕಂಪನಿ ಮೈಸೂರು ಇವರಿಗೆ ಸಲ್ಲಿಸುವುದು.

    ನೋಟಿಫಿಕೇಶನ್

  • 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್), (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ( ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಖಾಲಿ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುತ್ತು‌.

    ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15-06-2021 ಸಂಜೆ 06:00 ಗಂಟೆಯವರೆಗೆ ಮತ್ತು ಶುಲ್ಕವನ್ನು ಅಧಿಕೃತ ಬ್ಯಾ ಅಥವಾ ಸ್ಥಳೀಯ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ 17-06-2021 ಕ್ಕೆ ನಿಗದಿಪಡಿಸಲಾಗಿತ್ತು.

    ಪ್ರಸ್ತುತ ರಾಜ್ಯದಲ್ಲಿನ ಲಾಕ್ ಡೌನ್ ಪರಿಸ್ಥಿತಿಯನ್ನು ಪರಿಗಣನೆಗೆ ತೆಗೆದುಕೊಂಡು ಆಡಳಿತಾತ್ಮಕ ಕಾರಣಗಳಿಂದ ಹಾಗೂ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲು ತೀರ್ಮಾನಿಸಿ, ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 15-06-2021 ರಿಂದ 22-06-2021 ರವರೆಗೆ ಮತ್ತು ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸುವ ದಿನಾಂಕವನ್ನು 17-06-2021 ರಿಂದ 24-06-2021 ರವರೆಗೆ ವಿಸ್ತರಿಸಲಾಗಿದೆ.

  • ಬೆಂಗಳೂರು ನಗರ ಜಿಲ್ಲಾ ಪಂಚಾಯತಿ : ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ

    ಬೆಂಗಳೂರು ನಗರ ಜಿಲ್ಲಾ ಪಂಚಾಯತಿನಲ್ಲಿ ರೂರ್ಬನ್ ಯೋಜನೆಗೆ ಗುತ್ತಿಗೆ ಆಧಾರದಲ್ಲಿ ಹೊರಗುತ್ತಿಗೆ ಸಂಸ್ಥೆಯ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ : ರೀಜನಲ್ ಪ್ಲ್ಯಾನಿಂಗ್ ಸ್ಪೆಷಲಿಸ್ಟ್, ರೂರಲ್ ಡೆವಲಪ್ಮೆಂಟ್ ಮತ್ತು ಮ್ಯಾನೇಜ್ಮೆಂಟ್ ಸ್ಪೆಷಲಿಸ್ಟ್, ಇಂಜಿನಿಯರಿಂಗ್ ಸ್ಪೆಷಲಿಸ್ಟ್, ಸ್ಪೆಷಲ್ ಪ್ಲ್ಯಾನಿಂಗ್ ಪ್ರೊಫೆಷನಲ್, ರೂರಲ್ ಮ್ಯಾನೇಜ್ಮೆಂಟ್ ಪ್ರೊಫೆಷನಲ್.

    ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಕನಿ 25 ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

    ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಮತ್ತು ಇಂಗ್ಲೀಷ್ ಭಾಷೆ ಚೆನ್ನಾಗಿ ತಿಳಿದಿರಬೇಕು.

    ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯ ಯಾವುದೇ ಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು.

    ಮೇಲ್ಕಂಡ ಹುದ್ದೆಯು ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಆಯ್ಕೆಯಾದ ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು. ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ನವೀಕರಿಸಲಾಗುವುದು.

    ಅರ್ಜಿ ಸಲ್ಲಿಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ದಿನಾಂಕ 20-06-2021 ರೊಳಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಡಿ.ಆರ್.ಡಿ.ಎ ಕೋಶ, ಕರಿಯಪ್ಪ ರಸ್ತೆ, ಬನಶಂಕರಿ ದೇವಾಲಯ ಪಕ್ಕ, ಬನಶಂಕರಿ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಸಲ್ಲಿಸುವುದು.

    ಹೆಚ್ಚಿನ ಮಾಹಿತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಜಿಲ್ಲಾ ಪಂಚಾಯಿತಿ ಡಿ.ಆರ್.ಡಿ.ಎ ಕೋಶವನ್ನು ಸಂಪರ್ಕಿಸುವುದು ( 9901031755)

    ಅರ್ಜಿ ನಮೂನೆ ಮತ್ತು ಪ್ರಕಟಣೆಯನ್ನು http://bengaluruurban.nic.in ನಲ್ಲಿ ಪಡೆಯಬಹುದು.

  • BIS ನಲ್ಲಿ ಸೈಂಟಿಸ್ಟ್ ಬಿ ಹುದ್ದೆಗಳ ನೇಮಕ : ಆನ್ಲೈನ್ ಅರ್ಜಿ ಆಹ್ವಾನ

    ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣ ಹಾಗೂ ಗ್ರಾಹಕರ ವ್ಯವಹಾರ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಪ್ರಮಾಣೀಕರಣ ಸಂಸ್ಥೆ ( ಬಿಐಎಸ್) ದೇಶದ ರಾಷ್ಟ್ರೀಯ ಪ್ರಮಾಣೀಕರಣ ಸಂಸ್ಥೆ ಆಗಿದೆ.

    ಉತ್ಪನ್ನ ಪ್ರಮಾಣ ಪತ್ರ ನೀಡುವುದು, ಆಭರಣ ಪ್ರಮಾಣೀಕರಣ, ಪ್ರಯೋಗಾಲಯದ ಪರೀಕ್ಷೆ ಇತ್ಯಾದಿ ಪ್ರಮುಖ ಕೆಲಸಗಳನ್ನು ಬಿಐಎಸ್ ಕಂಪನಿ ನಿರ್ವಹಿಸುತ್ತದೆ.

    ಇಲ್ಲಿ ಪ್ರಸ್ತುತ ವಿವಿಧ ವಿಭಾಗ ಮತ್ತು ವರ್ಗಗಳಲ್ಲಿ ಸೈಂಟಿಸ್ಟ್ ಬಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ : ಸಿವಿಲ್ ಇಂಜಿನಿಯರಿಂಗ್ – 13
    ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್- 02
    ಎನ್ವಾರ್ನ್ಮೆಂಟಲ್ ಇಂಜಿನಿಯರಿಂಗ್- 02
    ಕೆಮಿಸ್ಟ್ರಿ – 07
    ಟೆಕ್ಸ್ ಟೈಲ್ ಇಂಜಿನಿಯರಿಂಗ್ – 04

    ಒಟ್ಟು ಹುದ್ದೆಗಳು : 28

    ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10. ವರ್ಷಗಳ ವಯೋಮಿತಿ ಸಡಿಲಿಕೆ ಕೇಂದ್ರ ಸರಕಾರದ ನಿಯಮಾನುಸಾರ ಅನ್ವಯವಾಗಲಿದೆ.

    ಅಭ್ಯರ್ಥಿಗಳನ್ನು 2019, 2020, 2021 ನೇ ಸಾಲಿನಲ್ಲಿ ಗಳಿಸಿದ ಗೇಟ್ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುತ್ತದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 05-06-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-06-2021

    ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ