
ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ಇಲ್ಲಿ ಖಾಲಿ ಇರುವ 8 ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಘವು ಪೂರೈಸುವ ಮೂಲ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ, ದಿನಾಂಕ 01-10-2021 ರಂದು ಸಂಜೆ 5.00 ಘಂಟೆ ಒಳಗಾಗಿ ಸಂಘಕ್ಕೆ ತಲುಪುವಂತೆ ಸಲ್ಲಿಸತಕ್ಕದ್ದು. ಹುದ್ದೆಯ ಹೆಸರು : ಕಿರಿಯ ಸಹಾಯಕ ವೇತಣ ಶ್ರೇಣಿ : ರೂ.21,400/- ರಿಂದ ರೂ.42,000/- + ಇತರ ಭತ್ಯೆಗಳು ವಿದ್ಯಾರ್ಹತೆ : ಅರ್ಜಿ […]
Source
Category: Govt Jobs
-

ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ಇಲ್ಲಿ ಖಾಲಿ ಇರುವ 8 ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಘವು ಪೂರೈಸುವ ಮೂಲ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ, ದಿನಾಂಕ 01-10-2021 ರಂದು ಸಂಜೆ 5.00 ಘಂಟೆ ಒಳಗಾಗಿ ಸಂಘಕ್ಕೆ ತಲುಪುವಂತೆ ಸಲ್ಲಿಸತಕ್ಕದ್ದು.
ಹುದ್ದೆಯ ಹೆಸರು : ಕಿರಿಯ ಸಹಾಯಕ
ವೇತಣ ಶ್ರೇಣಿ : ರೂ.21,400/- ರಿಂದ ರೂ.42,000/- + ಇತರ ಭತ್ಯೆಗಳು
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಎ/ಬಿಎಸ್ ಸಿ/ಬಿಸಿಎ/ ಬಿಕಾಂ/ ಬಿಬಿಎ ಯಾವುದಾದರೂ ಪದವಿಯಲ್ಲಿ ಕನಿ ಶೇಕಡ 50 ಹಾಗೂ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
ವಯೋಮಿತಿ : ಅಭ್ಯರ್ಥಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು. ಹಾಗೂ ಈ ಕೆಳಕಂಡಂತೆ ಗರಿಷ್ಠ ವಯೋಮಿತಿ ಮೀರಿರಬಾರದು.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಪ್ರವರ್ಗ 1 – 40 ವರ್ಷ
ಹಿಂದುಳಿದ ವರ್ಗದ ಪ್ರವರ್ಗಗಳು – 38 ವರ್ಷ
ಸಾಮಾನ್ಯ ವರ್ಗ – 35 ವರ್ಷಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ


-
KSSFCL ನಿಂದ ವಿವಿಧ ಹುದ್ದೆ
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಈ ಕೆಳಕಂಡ ಹುದ್ದೆಗಳಿಗಾಗಿ ತಾತ್ಕಾಲಿಕ ಗುತ್ತಿಗೆ ಹಾಗೂ ಕನ್ಸಲ್ಟೆಂಟ್ ಆಧಾರದಲ್ಲಿ ಈ ಕೆಳಕಂಡ ವಿಷಯದಲ್ಲಿ ಪರಿಣಿತ/ ವೃತ್ತಿಪರ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಲು ದಿನಾಂಕ 19-08-2021 ರಂದು ನಡೆದ ಆಡಳಿತ ಮಂಡಳಿ ಸಭೆಯು ನಿರ್ಣಯಿಸಿರುವಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಹೆಸರು : ನ್ಯಾಯವಾದಿಗಳು : ಬೆಂಗಳೂರು ಕೇಂದ್ರ ಕಚೇರಿ, – 01 ಹುದ್ದೆ ಸಂಖ್ಯೆ -02
ಬೆಳಗಾವಿ ಪ್ರಾಂತೀಯ ಕಚೇರಿ – 01 ಹುದ್ದೆ ಸಂಖ್ಯೆ – 02ಸನ್ನದು ಲೆಕ್ಕಪರಿಶೋಧಕರು : ಬೆಂಗಳೂರು ಕೇಂದ್ರ ಕಚೇರಿ – 01
ಬೆಳಗಾವಿ ಪ್ರಾಂತೀಯ ಕಚೇರಿ – 01ಹುದ್ದೆ ಸಂಖ್ಯೆ : 2
ಆರ್ಥಿಕ ಸಲಹೆಗಾರರು – 1 ಹುದ್ದೆ
ತಾಂತ್ರಿ ಸಲಹೆಗಾರರು ( ಸಂಯುಕ್ತ ಸಹಕಾರಿ ಸಾಫ್ಟ್‌ವೇರ್ ಅಭಿವೃದ್ಧಿ ) – 1 ಹುದ್ದೆ
ಆಯ್ಕೆ ವಿಧಾನ, ಅರ್ಹತೆ, ಸೇವಾ ಅವಧಿ, ಷರತ್ತು ಇತ್ಯಾದಿಗಳಿಗೆ ಸಂಬಂಧಿಸಿದ ವಿವರವಾದ ಪ್ರಕಟಣೆಯನ್ನು ಹಾಗೂ ಅರ್ಜಿ ನಮೂನೆಯನ್ನು www.souharda.coop ವೆಬ್ಸೈಟ್ ನಲ್ಲಿ ಪ್ರಕಟಿಸಿದ್ದು, ಆಸಕ್ತರು ಅಧಿಸೂಚನೆಯನ್ನು ಗಮನಿಸಿ ಅರ್ಜಿ ಸಲ್ಲಿಸಬಹುದಾಗಿದೆ.
ನೋಟಿಫಿಕೇಶನ್
-
NITK ಸುರತ್ಕಲ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಶಿಕ್ಷಣ ಸಚಿವಾಲಯದಿಂದ ಸ್ಥಾಪಿಸಲಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ, ಸುರತ್ಕಲ್ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/-, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.500, SC/ ST ಮಹಿಳಾ ಮತ್ತು ಇತರೆ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : ಟೆಕ್ನಿಕಲ್ ಅಸಿಸ್ಟೆಂಟ್/ಜೂನಿಯರ್ ಇಂಜಿನಿಯರ್. ಎಸ್ ಎಎಸ್ ಅಸಿಸ್ಟೆಂಟ್ 32
ಸೂಪರಿಂಟೆಂಡೆಂಟ್ 4ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 11-09-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-09-2021ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಬಿಇ/ಪದವಿ/ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ :
Registrar, National Institute of Technology Karnataka, Surathkal, Mangaluru – 575025, Karnataka ,India -
ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
ಬೀದರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಿಂಬಾಕಿ ಹುದ್ದೆಗಳಾದ ಸ್ಟೆನೋಗ್ರಾಫರ್ ಗ್ರೇಡ್ ||| ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಬೀದರ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 13-09-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-10-2021ಹುದ್ದೆ ವಿವರ : ಸ್ಟೆನೋಗ್ರಾಫರ್ ಗ್ರೇಡ್ ||| – 12
ಟೈಪಿಸ್ಟ್ – 9ಅರ್ಜಿ ಶುಲ್ಕ : ಸಾಮಾನ್ಯ ವರ್ಗ : ಪ್ರವರ್ಗ 2A, 2B, 3A,3B ಅಭ್ಯರ್ಥಿಗಳಿಗೆ ರೂ.200
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ – 1 ರೂ.100ವಯೋಮಿತಿ : ಸಾಮಾನ್ಯ ವರ್ಗ : 35 ವರ್ಷ, ಪ್ರವರ್ಗ 2A, 2B, 3A, 3B ; 38 ವರ್ಷ
ಎಸ್ ಸಿ, ಎಸ್ ಟಿ, ಪ್ರವರ್ಗ – 1 : 40 ವರ್ಷವಿದ್ಯಾರ್ಹತೆ : ದ್ವಿತೀಯ ಪಿಯುಸಿ/ ಮೂರು ವರ್ಷದ ಡಿಪ್ಲೊಮಾ/ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹಿರಿಯ ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ , ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ನೋಡಿ
-
ಶ್ರೀ ಬಲಭೀಮ ಜನತಾ ವಿದ್ಯಾವರ್ಧಕ ಸಂಘ, ಸಾಸನೂರ ; ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಶ್ರೀ ಬಲಭೀಮ ಜನತಾ ವಿದ್ಯಾವರ್ಧಕ ಸಂಘ, ಸಾಸನೂರ , ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಈ ಕೆಳಕಾಣಿಸಿಸ ಪ್ರೌಢಶಾಲೆಯಲ್ಲಿ ನಿವೃತ್ತಿಯಿಂದ ಖಾಲಿಯಿರುವ ಒಂದು ಅನುದಾನಿತ ಹುದ್ದೆಯನ್ನು ತುಂಬಿಕೊಳ್ಳಲು ಈ ಕೆಳಗೆ ಕಾಣಿಸಿದ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದ್ದು, ವಿವರ ಈ ಕೆಳಗೆ ನೀಡಲಾಗಿದೆ.
ಹುದ್ದೆ : ಸಹ ಶಿಕ್ಷಕರು ( ಆಂಗ್ಲ)
ಆಸಕ್ತ ಅಭ್ಯರ್ಥಿಗಳು ಜಾಹೀರಾತು ಪ್ರಕಟಗೊಂಡ 21 ದಿನಗಳ ಒಳಗಾಗಿ ತಮ್ಮ ಶೈಕ್ಷಣಿಕ ಪ್ರಮಾಣ ದೃಢೀಕೃತ ಝರಾಕ್ಸ್ ಪ್ರತಿಗಳೊಂದಿಗೆ ರೂಪಾಯಿ 800/- ರಾಷ್ಟ್ರೀಕೃತ ಬ್ಯಾಂಕ್ ಹುಂಡಿಯೊಂದಿಗೆ ( ಡಿಡಿ) ಅಧ್ಯಕ್ಷರು ಶ್ರೀ ಬಲಭೀಮ ಜನತಾ ವಿದ್ಯಾವರ್ಧಕ ಸಂಘ ಸಾಸನೂರ ಇವರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆ ಬ್ಯಾಂಕ್ ಹುಂಡಿಯನ್ನು (ಡಿಡಿ) ಪ್ರತಿ ಎಲ್ಲಾ ಪ್ರಮಾಣ ಪತ್ರಗಳ ಝರಾಕ್ಸ್ ಪ್ರತಿಗಳನ್ನು ಹಚ್ಚಿ ಅಧ್ಯಕ್ಷರು, ಶ್ರೀ ಬಲಭೀಮ ಜನತಾ ವಿದ್ಯಾವರ್ಧಕ ಸಂಘ ವಿಳಾಸಕ್ಕೆ ಸಾಸನೂರ, ತಾಳಿಕೋಟೆ ಜಿಲ್ಲಾ ವಿಜಯಪುರ -586214 ವಿಳಾಸಕ್ಕೆ ಹಾಗೂ ಇನ್ನೊಂದು ಪ್ರತಿಯನ್ನು ಮಾನ್ಯ ಉಪನಿರ್ದೇಶಕರು, ಸಾ.ಶಿ.ಇಲಾಖೆ, ವಿಜಯಪುರ ಇವರಿಗೆ ಸಲ್ಲಿಸಬೇಕು. ಈಗಾಗಲೇ ನಿಗದಿತ ದಿನಾಂಕದಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲಾಖಾ ನಿಯಮಾನುಸಾರವಾಗಿ ಪ್ರತ್ಯೇಕವಾಗಿ ಸಂದರ್ಶನ ಸ್ಥಳ, ದಿನಾಂಕ ಮತ್ತು ವೇಳೆಯನ್ನು ತಿಳಿಸಲಾಗುವುದು.