Category: Govt Jobs

  • ಡಿಬಿಟಿ-ಕೌಶಲ್ಯ ವಿಜ್ಞಾನ ಕಾರ್ಯಕ್ರಮದಡಿ ಡೇಟಾ ಎಂಟ್ರಿ ಅಪರೇಟರ್ ಹುದ್ದೆ

    ಭಾರತ ಸರಕಾರದ ಜೈವಿಕ ತಂತ್ರಜ್ಞಾನ ಇಲಾಖೆಯಿಂದ ಮಂಜೂರಾಗಿರುವ ಡಿಬಿಟಿ-ಕೌಶಲ್ಯ ವಿಜ್ಞಾನ ಕಾರ್ಯಕ್ರಮದಡಿ ತಾತ್ಕಾಲಿಕವಾಗಿ ಕನ್ಸಲ್ಟನ್ಸಿ ಆಧಾರದ ಮೇಲೆ ಸಮಾಲೋಚಕರು ಮತ್ತು ಡೇಟಾ ಎಂಟ್ರಿ ಅಪರೇಟರ್ ಗಳ ಸೇವೆಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಸಲಹೆಗಾರರು ಹಾಗೂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.itbtst.karnataka.gov.in ಅಥವಾ ಇ- ಮೇಲ್ ವಿಳಾಸ [email protected] ರಲ್ಲಿ ಸಂಪರ್ಕಿಸುವುದು
    ಸದರಿ ಅರ್ಜಿಗಳನ್ನು ಆನ್ಲೈನ್ / ಆಫ್ಲೈನ್ ಮೂಲಕ ಸಲ್ಲಿಸಲು 24 ನೇ ಸೆಪ್ಟೆಂಬರ್‌ 2021 ಕೊನೆಯ ದಿನಾಂಕವಾಗಿರುತ್ತದೆ.

  • ರೈಲು ಮೂಲಸೌಕರ್ಯ ಕಂಪನಿ( ಕರ್ನಾಟಕ) ವಿವಿಧ ಹುದ್ದೆ

    ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ ( ಕರ್ನಾಟಕ) ನಿಯಮಿತ ಕ – ರೈಡ್ ” ಬೆಂಗಳೂರು ಉಪನಗರ ರೈಲು ಯೋಜನೆ” ಮತ್ತು ಇನ್ನಿತರ ರೈಲ್ವೆ ದ್ವಿಪಥೀಕರಣ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿರುವ ಕರ್ನಾಟಕ ಸರಕಾರ ಮತ್ತು ರೈಲ್ವೆ ಸಚಿವಾಲಯದ ಜಂಟಿ ಉದ್ಯಮವಾಗಿದ್ದು ಈ ಕೆಳಗಿನ ಹುದ್ದೆಗಳಿಗೆ ನಿಯೋಜನೆ/ ಒಪ್ಪಂದದ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಿದ್ದಾರೆ.

    ಹುದ್ದೆ : ಪ್ರಧಾನ ವ್ಯವಸ್ಥಾಪಕರು/ಟ್ರಾಫಿಕ್ ಅಪರೇಷನ್ಸ್, ಪ್ರಧಾನ ವ್ಯವಸ್ಥಾಪಕರು / ಕಾರ್ಯನಿರ್ವಾಹಕ ನಿರ್ದೇಶಕರು/ವಿದ್ಯುತ್, ಹಿರಿಯ ಡಿಜಿಎಂ/ಜೆಜಿಎಂ/ಎಜಿಎಂ/ಡಿಸೈನ್, ಕಾರ್ಯನಿರ್ವಾಹಕರು( ಆಟೋ ಕ್ಯಾಡ್ ಡಿಸೈನ್), (ಬಿಐಎಂ),(ರೋಲಿಂಗ್ ಸ್ಟಾಕ್ ಎಲೆಕ್ಟ್ರಿಕಲ್), ( ರೋಲಿಂಗ್ ಸ್ಟಾಕ್ ಮೆಕ್ಯಾನಿಕಲ್), ಎಲೆಕ್ಟ್ರಿಕಲ್ ಜನರಲ್/ಎಂಇಪಿ, ಎಲೆಕ್ಟ್ರಿಕಲ್/ಓಎಚ್ಒ.

    ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 07-10-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.kride.in ನಲ್ಲಿ ಅರ್ಜಿ ಸಲ್ಲಿಸಬಹುದು.

  • 316 ದ್ವಿತೀಯ ದರ್ಜೆ ಲೆಕ್ಕ ಸಹಾಯಕ,1143 ಗ್ರಾ.ಪಂ.ಕಾರ್ಯದರ್ಶಿಗಳ ನೇರ ನೇಮಕಾತಿ

    ರಾಜ್ಯದ ಗ್ರಾಮ ಪಂಚಾಯತಿ ಕಾರ್ಯದರ್ಶಿ ( ಗ್ರೇಡ್ 2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ರಾಜ್ಯ ಸರಕಾರ ನಿರ್ಧರಿಸಿ ಆದೇಶ ಪ್ರಕಟಿಸಿದೆ.

    ಈ ಹುದ್ದೆಗಳಿಗೆ ಪ್ರಸ್ತುತ ಸೇವೆಯಲ್ಲಿರುವ ಗ್ರಾಮ ಪಂಚಾಯತಿ ನೌಕರರ ವೃಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿರುವುದು. ಇದರಿಂದ ಗ್ರಾಮ ಪಂಚಾಯತಿ ನೌಕರರಿಗೆ ಬಡ್ತಿ ಭಾಗ್ಯವೂ ದೊರೆಯಲಿದೆ.

    ಕೊರೊನಾ ಕಾರಣದಿಂದಾಗಿ ನೇರ ನೇಮಕಾತಿ ಪ್ರಕ್ರಿಯೆಯನ್ನು ತೆರವುಗೊಳಿಸಲಾಗಿಸೆ. ಆ ಮೂಲಕ, ಹಲವು ವರ್ಷಗಳಿಂದ ಪದೋನ್ನತಿಗೆ ಕಾಯುತ್ತಿರುವ ಗ್ರಾಮ‌ ಪಂಚಾಯತಿಯ ವಿವಿಧ ವೃಂದಗಳ ಇದರ ಅನುಕೂಲ‌ ಪಡೆಯಲಿದೆ.

    ಗ್ರಾಮ ಪಂಚಾಯತಿ ಕಾರ್ಯದರ್ಶಿ ( ಗ್ರೇಡ್ -2) ಒಟ್ಟು ಖಾಲಿ ಹುದ್ದೆಗಳು 1143 ಇದೆ. ಗ್ರಾಮ ಪಂಚಾಯತಿ ನೌಕರರಿಂದ 800 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ದ್ವಿತೀಯ ದರ್ಜೆ ಲೆಕ್ಕಸಹಾಯಕರ ಹುದ್ದೆಗಳ ಪೈಕಿ ಒಟ್ಟು 316 ಹುದ್ದೆಗಳು ಖಾಲಿ ಇದ್ದು, ಗ್ರಾಮ ಪಂಚಾಯತಿ ನೌಕರರಿಂದ 158 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

    ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್ 2) ಮತ್ತು ದ್ವಿತೀಯ ದರ್ಜೆ ಲೆಕ್ಕಸಹಾಯಕರ ಹುದ್ದೆಗಳಿಗೆ ಬಿಲ್ ಕಲೆಕ್ಟರ್, ಅಕೌಂಟೆಂಟ್, ಕ್ಲರ್ಕ್, ಟೈಪಿಸ್ಟ್, ಕ್ಲರ್ಕ್ ಕಮ್ ಡಾಟಾ ಎಂಟ್ರಿ ಅಪರೇಟರ್ ವೃಂದದ ಹುದ್ದೆಗಳಿಂದ ನೇರ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ( ಆರ್ ಡಿಪಿಆರ್) ಪ್ರಧಾನ ಕಾರ್ಯದರ್ಶಿ ಅವರು ಸೂಚಿಸಿದ್ದಾರೆ.

    ಗ್ರಾಮ ಪಂಚಾಯತಿ ಕಾರ್ಯದರ್ಶಿ ( ಗ್ರೇಡ್ -2) ವೃಂದದ ಶೇಕಡ 70 ರಷ್ಟು ಹುದ್ದೆಗಳನ್ನು 3:2 ಅನುಪಾತದಲ್ಲಿ ನೇಮಕಾತಿಗೆ ಅವಕಾಶ ನೀಡಲಾಗಿದೆ. ಅಂದರೆ, ಮೊದಲ ಮೂರು ಹುದ್ದೆಗಳನ್ನು ಬಿಲ್ ಕಲೆಕ್ಟರ್ ವೃಂದದ ನೌಕರರಿಂದ, ನಂತರ ಎರಡು ಹುದ್ದೆಗಳನ್ನು ಅಕೌಂಟೆಂಟ್, ಕ್ಲರ್ಕ್, ಟೈಪಿಸ್ಟ್ ಕಂ ಡಾಟಾ ಎಂಟ್ರಿ ಅಪರೇಟರ್ ವೃಂದದ ಮೂಲಕ ನೇಮಕಾತಿ ಮಾಡಲಾಗುತ್ತದೆ.

    ಗ್ರಾಮ ಪಂಚಾಯತಿಯಲ್ಲಿ ಕನಿಷ್ಠ 6 ವರ್ಷ ಕೆಲಸ ಮಾಡಿದ ಸಿಬ್ಬಂದಿ ನೇರ ನೇಮಕಾತಿಗೆ ಅರ್ಹತೆ ಪಡೆಯುತ್ತಾರೆ. ಈ ರೀತಿ ಬಡ್ತಿಗೆ ಅರ್ಹತೆ ಪಡೆದವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ 100 ಅಂಕಗಳ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ಪ್ರಸ್ತುತ ಸೇವೆಯಲ್ಲಿರುವ ಸಿಬ್ಬಂದಿಯ ಜ್ಯೇಷ್ಠತಾ ಪಟ್ಟಿ ಮಾಡಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕದ ಆಧಾರದಲ್ಲಿ ಮೀಸಲಾತಿ ನಿಯಮ ಅನ್ವಯ ಆಯ್ಕೆಪಟ್ಟಿ ಪ್ರಕಟಿಸಬೇಕು ಎಂದು ಸೂಚಿಸಲಾಗಿದೆ. ಉಳಿದ ಶೇ.30 ರಷ್ಟು ಖಾಲಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ( ಕೆಇಎ) ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

    ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ಶೇಕಡಾ 50 ರಷ್ಟು ಹುದ್ದೆಗಳನ್ನು 1:1 ಅನುಪಾತದಲ್ಲಿ ನೇಮಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಉಳಿದ ಶೇ.50 ರಷ್ಟು ಖಾಲಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ( ಕೆಇಎ) ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು.

  • MSME ಟೆಕ್ನಾಲಜಿ ಬೆಂಗಳೂರು : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಎಂಎಸ್ ಎಂಇ ತಂತ್ರಜ್ಞಾನ ಕೇಂದ್ರ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಮಾರ್ಕೆಟಿಂಗ್ ಕಾರ್ಯನಿರ್ವಾಹಕ – 01

    ತರಬೇತಿ ಇಂಜಿನಿಯರ್ – 03

    ಅರ್ಹ ಅರ್ಜಿದಾರರು ತಮ್ಮ ರೆಸ್ಯೂಮ್, ಅರ್ಹತಾ ಪ್ರಮಾಣಪತ್ರಗಳು ಮತ್ತು ಆಧಾರ್ ಕಾರ್ಡ್ ನ ಸ್ಕ್ಯಾನ್ ಮಾಡಿದ ಪ್ರತಿಗಳೊಂದಿಗೆ ಈ ಕೆಳಗಿನ ಇ- ಮೇಲ್ ಗೆ ದಿನಾಂಕ 13 ಸೆಪ್ಟೆಂಬರ್ 2021 ರ ಒಳಗೆ ಕಳುಹಿಸಬೇಕು.

    ಇ-ಮೇಲ್ : [email protected]

  • ತುಮಕೂರು ಜಿಲ್ಲೆಯಲ್ಲಿ 358 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆ

    ತುಮಕೂರು ಜಿಲ್ಲೆಯ 11 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 73 ಅಂಗನವಾಡಿ ಕಾರ್ಯಕರ್ತೆ ( ಮಿನಿ ಅಂಗನವಾಡಿ ಕಾರ್ಯಕರ್ತೆ ಸೇರಿದಂತೆ) ಹಾಗೂ 285 ಸಹಾಯಕಿ ಹುದ್ದೆ ಸೇರಿದಂತೆ ಒಟ್ಟು 358 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.

    ಆನ್ಲೈನ್ ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು. ತದನಂತರ ಸಲ್ಲಿಸಿದ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 04-09-2021 ಕ್ಕೆ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ 35 ವರ್ಷ ಮೀರಿರಬಾರದು.

    ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 06-08-2021 ಬೆಳಿಗ್ಗೆ 10 ಗಂಟೆಯಿಂದ

    ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-09-2021 ರಿಂದ ಸಂಜೆ 5.30 ರವರೆಗೆ.

    https://anganwadirecruit.kar.nic.in/

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ನೋಡಿ

  • ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ವಿವಿಧ ಹುದ್ದೆ

    ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ : ಮಂಜೂರಾದ ಅಪರ ನಿಬಂಧಕರು 01 ಹುದ್ದೆ, ಸಹಾಯಕ ನಿಬಂಧಕರು 1 ಹುದ್ದೆ, ಕೋರ್ಟ್ ಅಧಿಕಾರಿ 01 ಹುದ್ದೆ, ತೀರ್ಪು ಬರಹಗಾರರು 01 ಹುದ್ದೆ, ಕಾನೂನು ಸಹಾಯರು/ ಸಂಶೋಧನಾ ಸಹಾಯಕರು 02 ಹುದ್ದೆ, ಶೀಘ್ರಲಿಪಿಗಾರರು 02 ಹುದ್ದೆ, ಸಹಾಯಕರು 01 ಹುದ್ದೆ ಮತ್ತು ವಾಹನ ಚಾಲಕರು 01 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ಬಾನಿಸಿದೆ.

    ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಪ್ರಥಮತಃ 06 ತಿಂಗಳ ಅವಧಿಗೆ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಆಯೋಗದ ವೆಬ್ಸೈಟ್ www.kshrc.karnataka.gov.in ನಲ್ಲಿ ಅಧಿಸೂಚನೆ ಹಾಗೂ ಅರ್ಜಿ ಪ್ರಪತ್ರದ ವಿವರಗಳನ್ನು ಪ್ರಕಟಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ : 04-09-2021