Category: Govt Jobs

  • ಚಿಕ್ಕಮಗಳೂರಿನಲ್ಲಿ ಅರೆಕಾಲಿಕ ಶಿಕ್ಷಕರ ನೇಮಕ

    ಚಿಕ್ಕಮಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸರಕಾರಿ ಬಾಲಕಿಯರ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕ‌ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಅರೆಕಾಲಿಕ ಶಿಕ್ಷಕರ ಹುದ್ದೆಗಳ‌ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅಭ್ಯರ್ಥಿಗಳು ಸಲ್ಲಿಸಬೇಕಾದ ಅಗತ್ಯ ದಾಖಲೆಗಳು : ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಶೈಕ್ಷಣಿಕ ಅರ್ಹತೆಯ ದಾಖಲೆಗಳು.

    WCD ಇಲಾಖೆಯು ಸರಕಾರಿ ಬಾಲಕಿಯರ ಬಾಲಮಂದಿರ ಸಂಸ್ಥೆಗೆ ವಿಜ್ಞಾನ, ಗಣಿತ, ಯೋಗ/ ದೈಹಿಕ, ಕನ್ನಡ, ಇಂಗ್ಲೀಷ್ , ಸಂಗೀತ ವಿಷಯಗಳಿಗೆ ಅರೆಕಾಲಿಕ ಶಿಕ್ಷಕರನ್ನು ಭರ್ತಿ ಮಾಡಲಾಗುತ್ತಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 30, 2021

    ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಚಿಕ್ಕಮಗಳೂರಿನ ಸರಕಾರಿ ಬಾಲಕಿಯರ ಬಾಲ ಮಂದಿರದ ಅಧೀಕ್ಷಕರ ದೂರವಾಣಿ ಸಂಖ್ಯೆ 08262-295693, 9538448394 ನ್ನು ಸಂಪರ್ಕಿಸಬಹುದು.

  • ಚಿಕ್ಕಮಗಳೂರು ಗ್ರಾಮಕಾಯಕ ಮಿತ್ರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ‘ಗ್ರಾಮ ಕಾಯಕ ಮಿತ್ರ’ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಗ್ರಾಮ ಕಾಯಕ ಮಿತ್ರ ರನ್ನು ಗೌರವಧನ ಆಧಾರದಲ್ಲಿ ನೇಮಕ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 03-07-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-07-2021 ಸಂಜೆ 5 ಗಂಟೆಗೆ.

    ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

    ವಿದ್ಯಾರ್ಹತೆ : ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು.

    ವಯೋಮಿತಿ : ಅಭ್ಯರ್ಥಿಯು ದಿ. 01-01-2021 ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಿರಬಾರದು.

    ಹೆಚ್ಚಿನ ವಿವರಗಳಿಗಾಗಿ ತಮ್ಮ ಗ್ರಾಮ ಪಂಚಾಯತಿಗೆ ಸಂಪರ್ಕಿಸಬಹುದಾಗಿದೆ. ಅರ್ಜಿಯು https://chikkamagaluru.nic.in ವೆಬ್‌ಸೈಟ್‌ ನಲ್ಲಿ ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯತಿಗಳಲ್ಲಿ ಲಭ್ಯವಿರುತ್ತದೆ.

  • ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಉದ್ಯೋಗ

    ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, 2013 ( ಎನ್ ಎಫ್ ಎಸ್ ಎ) ರ ನಿಬಂಧನೆ ಅಡಿಯಲ್ಲಿ ಕರ್ನಾಟಕ ಸರಕಾರದಿಂದ ಸ್ಥಾಪಿಸಲಾದ ” ಕರ್ನಾಟಕ ರಾಜ್ಯ ‌ಆಹಾರ ಆಯೋಗಕ್ಕೆ ” ಕಚೇರಿ ಕೆಲಸದ ಪೂರ್ಣ ವೇಳೆಯ ಸದಸ್ಯರು ( ಒಂದು ಹುದ್ದೆ ) ಹುದ್ದೆಗಾಗಿ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ, ಅರ್ಹತಾ ಅಗತ್ಯತೆ,‌ ಅರ್ಜಿ ಫಾರಂ ಹಾಗೂ ಇತರೆ ವಿವರಗಳನ್ನು ಒಳಗೊಂಡ ಸಂಪೂರ್ಣ ಮಾಹಿತಿಗಾಗಿ ಅರ್ಜಿದಾರರು ಇವೆಲ್ಲವನ್ನು ಇಲಾಖೆಯ ವೆಬ್‌ಸೈಟ್‌ : www.ahara.kar.nic.in ಲಿಂಕ್ ನೋಟಿಫಿಕೇಶನ್ ಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಲು ಮನವಿ ಮಾಡಲಾಗಿದೆ.

    ಎಲ್ಲಾ ವಿಧದಲ್ಲೂ ಭರ್ತಿಯಾದ ಅರ್ಜಿಗಳನ್ನು‌ ಸ್ವೀಕರಿಸಲು ಕೊನೆಯ ದಿನಾಂಕ : 07-08-2021

  • ಕೇಂದ್ರೀಯ ಉಗ್ರಾಣ ನಿಗಮ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ, ಜುಲೈ 7 ಕಡೇ ದಿನಾಂಕ

    ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ವಿವರ : ನಿವೃತ್ತ ಸಿಡಬ್ಲ್ಯುಸಿ ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ಸ್, ಟೆಕ್ನಿಕಲ್ ಅಸಿಸ್ಟೆಂಟ್ಸ್, ಜೂನಿಯರ್ ಸೂಪರಿಂಟೆಂಡೆಂಟ್ಸ್, ಸೂಪರಿಂಟೆಂಡೆಂಟ್ ಗಳು, ಉತ್ತರ ಕರ್ನಾಟಕದ ಉಗ್ರಾಣ ಘಟಕಗಳಾದ ಬಿದರ್, ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಸೇಡಂ ಮುಂತಾದ ” ಸ್ವಂತ ಮತ್ತು ಬಾಡಿಗೆ ಉಗ್ರಾಣಗಳಲ್ಲಿ ” ಸಲಹೆಗಾರರಾಗಿ ಕೆಲಸ ಮಾಡಲು ಬೇಕಾಗಿದ್ದಾರೆ. ಅರ್ಜಿದಾರರ ವಿರುದ್ಧ ಯಾವುದೇ ವಿಜಿಲೆನ್ಸ್ ಪ್ರಕರಣ ಬಾಕಿ ಇರಬಾರದು.

    ಆಸಕ್ತರು ತಮ್ಮ ರೆಸ್ಯೂಮ್ ಗಳನ್ನು ಜುಲೈ 7, 2021 ರ ಒಳಗಾಗಿ ” ಪ್ರಾದೇಶಿಕ ವ್ಯವಸ್ಥಾಪಕರು, ಕೇಂದ್ರೀಯ ಉಗ್ರಾಣ ನಿಗಮ, ಪ್ರಾದೇಶಿಕ ಕಚೇರಿ, ಬೆಂಗಳೂರು ಇವರ ಹೆಸರಿಗೆ ಅಥವಾ [email protected].,
    [email protected] ಗೆ ಇ-ಮೇಲ್ ಮೂಲಕ ಕಳುಹಿಸಬಹುದು.

    ಹೆಚ್ಚಿನ ಮಾಹಿತಿಗಾಗಿ 080- 23598866, 23598861

  • ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆ

    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :

    ಹುದ್ದೆಯ ಹೆಸರು : ಕಾನೂನು ಅಧಿಕಾರಿ : ಹುದ್ದೆಯ ಸಂಖ್ಯೆ : 03 : ಅರ್ಹತೆ : ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಕಾರ್ಯನಿರ್ವಹಿಸಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶರು. ಅಥವಾ 2. ಕಾನೂನು ಇಲಾಖೆ ಅಥವಾ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವ ಸರಕಾರದ ಹೆಚ್ಚುವರಿ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆಯಿಲ್ಲದ ನಿವೃತ್ತ ಅಧಿಕಾರಿಗಳು. ನಿವೃತ್ತಿ ಹೊಂದಿದ ದಿನಾಂಕದಿಂದ ಐದು ವರ್ಷಗಳು ಮೀರಿರಬಾರದು. ವೇತನ : ಮಾಹೆಯಾನ ರೂ.1,00,000/- ಇತರೆ ಸೌಲಭ್ಯಗಳು : ಕಚೇರಿಯ ಕೆಲಸಕ್ಕಾಗಿ ಸಹಾಯಕ ಸಿಬ್ಬಂದಿಗಳು, ಕಾರು ಮತ್ತು ಚಾಲಕರನ್ನು ಒದಗಿಸಲಾಗುವುದು.

    ನೋಡಲ್ ಅಧಿಕಾರಿಗಳು‌: ಹುದ್ದೆಯ ಸಂಖ್ಯೆ : 07: ಅರ್ಹತೆ : ಕಾನೂನು ಪದವಿಯನ್ನು ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿರುವ ಕಾನೂನು ಪದವೀಧರರು/ ಸ್ನಾತಕೋತ್ತರ ಪದವೀಧರರು / ವಕೀಲರು. ಕನಿಷ್ಠ 03 ವರ್ಷ ಅನುಭವ ಹೊಂದಿರಬೇಕು. ವಯಸ್ಸು : ಅರ್ಜಿ ಸಲ್ಲಿಸುವ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು. ವೇತನ : ಮಾಹೆಯಾನ ರೂ.45,000 + 5000 ( ಸಂಭಾವನೆ ಮತ್ತು ದೂರವಾಣಿ ಶುಲ್ಕ + ಭತ್ಯೆ ಸೇರಿ)

    ಮೇಲ್ಕಂಡ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 12-07-2021

  • ಗಡಿ ಭದ್ರತಾ ಪಡೆಯಲ್ಲಿ ಎಸ್‌ಎಸ್‌ಎಲ್‌ಸಿ, ಡಿಪ್ಲೊಮಾ ಓದಿರುವವರಿಗೆ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ

    ಬಿಎಸ್ ಎಫ್ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನಲ್ಲಿ ವಿವಿಧ ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

    ಹುದ್ದೆ : 65 ಅಸಿಸ್ಟೆಂಟ್ ಏರ್ ಕ್ರಾಫ್ಟ್ ಮೆಕ್ಯಾನಿಕ್, ಅಸಿಸ್ಟೆಂಟ್ ರೇಡಿಯೋ ಮೆಕ್ಯಾನಿಕ್ ಮತ್ತು ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜುಲೈ 26 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

    ವಿದ್ಯಾರ್ಹತೆ : 10 ನೇ ತರಗತಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

    ವಯೋಮಿತಿ : ಕನಿಷ್ಠ 20 ರಿಂದ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,700/- ರಿಂದ ರೂ.92,300/- ಗಳವರೆಗೆ ವೇತನವನ್ನು ನೀಡಲಾಗುತ್ತದೆ.

    ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

    ವಿದ್ಯಾರ್ಹತೆ : 10 ನೇ ತರಗತಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅಭ್ಯರ್ಥಿಗಳು ರೂ.100/- ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು. ಇತರೆ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.