Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • Cochin Shipyard Limited Recruitment 2024: ಉಡುಪಿಯಲ್ಲಿ ಉದ್ಯೋಗಾವಕಾಶ; ಮಾಸಿಕ 1 ಲಕ್ಷಕ್ಕೂ ಮೀರಿದ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

    Cochin Shipyard Limited Recruitment 2024: ಉಡುಪಿಯಲ್ಲಿ ಉದ್ಯೋಗಾವಕಾಶ; ಮಾಸಿಕ 1 ಲಕ್ಷಕ್ಕೂ ಮೀರಿದ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

    Cochin Shipyard Limited Recruitment 2024: ಕೇಂದ್ರ ಸರಕಾರದ ಹುದ್ದೆ ಹುಡುಕುವವರಿಗೆ ಇದೊಂದು ಸುವರ್ಣಾವಕಾಶ. ಹೌದು, ಕೊಚ್ಚಿನ ಶಿಪ್‌ಯಾರ್ಡ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಿಂದಿ ಟ್ರಾನ್ಸ್‌ಲೇಟರ್‌ ಹುದ್ದೆಯ ಭರ್ತಿಗೆ ನೇಮಕಾತಿ ನಡೆಯಲಿದ್ದು, ಫೆ.26, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಈ ಹುದ್ದೆಯ ಪೋಸ್ಟಿಂಗ್‌ ಉಡುಪಿಯಲ್ಲಿ ನೀಡಲಾಗುತ್ತದೆ.

    ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಹುದ್ದೆಯ ಕುರಿತು ಹೆಚ್ಚಿನ ಮಾಹಿತಿ ಅಂದರೆ ವೇತನ, ಅರ್ಜಿ ಶುಲ್ಕ, ವಯೋಮಿತಿ ಇತ್ಯಾದಿ ತಿಳಿದುಕೊಳ್ಳುವುದು ಮುಖ್ಯ. ಈ ಕೆಳಗೆ ಹುದ್ದೆಯ ಕುರಿತ ಮಾಹಿತಿಯನ್ನು ಸವಿವರವಾಗಿ ನೀಡಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 05-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-02-2024

    ವೇತನ: ಈ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ 28,000 ರೂ.-ರೂ.1,10,000 ವೇತನವಿರುತ್ತದೆ.

    ಹುದ್ದೆ: ಹಿಂದಿ ಟ್ರಾನ್ಸ್‌ಲೇಟರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
    ಹುದ್ದೆ ಸಂಖ್ಯೆ: 01 ಹುದ್ದೆ

    ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿಯಲ್ಲಿ ಇಂಗ್ಲಿಷ್ ಕಡ್ಡಾಯ ಆಯ್ಕೆ ವಿಷಯವಾಗಿ ಪಡೆದಿರಬೇಕು. ಹಾಗೂ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಅನುವಾದದಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಹೊಂದಿರಬೇಕು.

    ಅನುಭವ: ಕೇಂದ್ರ/ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇಂಗ್ಲಿಷ್‌ನಿಂದ ಹಿಂದಿಗೆ ಭಾಷಾಂತರದಲ್ಲಿ ಐದು ವರ್ಷಗಳ ಅನುಭವ ಹೊಂದಿರುವವರಿಗೆ ಆದ್ಯತೆ.

    ವಯೋಮಿತಿ: ಕೊಚ್ಚಿನ್‌ ಶಿಪ್‌ಯಾರ್ಡ್‌ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯಸ್ಸು 45 ವರ್ಷ ಮೀರಿರಬಾರದು. PwBD ಅಭ್ಯರ್ಥಿಗಳಿಗೆ ಹತ್ತು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಪವರ್‌ ಪಾಯಿಂಟ್‌ ಪ್ರೆಸೆಂಟೇಶನ್‌, ಸಂದರ್ಶನದ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಕೊಚ್ಚಿನ್‌ ಶಿಪ್‌ ಯಾರ್ಡ್‌ ಲಿಮಿಟೆಡ್‌ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಪ್ಲೈ ಮಾಡಲು ತಿಳಿಸಲಾಗಿದೆ. ಈ ಲಿಂಕ್‌ ಕ್ಲಿಕ್‌ ಮಾಡುವ ಮೂಲಕ ಅಭ್ಯರ್ಥಿಗಳು ನೇರವಾಗಿ ಅಪ್ಲೈ ಮಾಡಬಹುದು.

    ಶಾರ್ಟ್‌ ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಅಂಚೆ ಮೂಲಕ ಸಂದರ್ಶನದ ಲೆಟರ್‌ ಕಳುಹಿಸಲಾಗುವುದಿಲ್ಲ. ಇ-ಮೇಲ್ ಮೂಲಕ ತಿಳಿಸಲಾಗುವುದು. ಆಯ್ಕೆಯ ವೇಳಾಪಟ್ಟಿಯನ್ನು ಇ-ಮೇಲ್/CSL ವೆಬ್‌ಸೈಟ್ www.cochinshipyard.in ಮೂಲಕ ಶಾರ್ಟ್‌ಲಿಸ್ಟ್ ಮಾಡಿದ ಅರ್ಜಿದಾರರಿಗೆ ತಿಳಿಸಲಾಗುತ್ತದೆ. ಆಯ್ಕೆಗೆ ಸಂಬಂಧಿಸಿದ ಕುರಿತ ಎಲ್ಲಾ ಮಾಹಿತಿಗಳನ್ನು ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ ಮೂಲಕ ಆಗಾಗ್ಗೆ ಪರಿಶೀಲಿಸಲು ವಿನಂತಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

  • KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಫ್‌ಡಿಎ, ಸಹಾಯಕ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ವಿವರ

    KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಫ್‌ಡಿಎ, ಸಹಾಯಕ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ವಿವರ

    KUWSDB: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇದೀಗ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್‌) ಹಾಗೂ 14 ‘ಸಿʼ ಗ್ರೂಪ್‌ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಕುರಿತು ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-03-2024
    ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 14-03-2024

    ಹುದ್ದೆಗಳ ವಿವರ:
    ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಉದ್ಯೋಗ ಇಲಾಖೆಯಿಂದ
    ಸಹಾಯಕ ಇಂಜಿನಿಯರ್‌ (ಸಿವಿಲ್‌) : 50, ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್‌ ಸಿ): 14 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 64 ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವೇತನ ಶ್ರೇಣಿ:
    ಸಹಾಯಕ ಇಂಜಿನಿಯರ್‌ (ಸಿವಿಲ್‌: ರೂ.43,100-ರೂ.83,900
    ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್‌ ಸಿ): ರೂ.27,650-ರೂ.52,650

    ಶೈಕ್ಷಣಿಕ ಅರ್ಹತೆ; ಸಹಾಯಕ ಇಂಜಿನಿಯರ್‌ (ಸಿವಿಲ್)‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್‌ ಇಂಜಿನಿಯರಿಂಗ್‌ ಪದವಿಯನ್ನು ಸಿವಿಲ್‌ ವಿಭಾಗದಲ್ಲಿ ಪಡೆದಿರಬೇಕು
    ಪ್ರಥಮ ದರ್ಜೆ ಲೆಕ್ಕ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಂ ಪದವಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು, ಹಾಗೂ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
    ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

    ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ -2ಎ/2ಬಿ/3ಎ/3ಬಿ) ರೂ.750
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500 ಅರ್ಜಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ.

    ಅರ್ಜಿ ಸಲ್ಲಿಸುವ ವಿಧಾನ; ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಗೆ ಭೇಟಿ ನೀಡಿ ಅಲ್ಲಿ ಆನ್‌ಲೈನ್‌ ಮುಖಾಂತರ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ, ಪ್ರತ್ಯೇಕ ಅರ್ಜಿಯ ಮುಖಾಂತರ ಸಲ್ಲಿಸಬೇಕು. ಆದರೆ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕ ಶುಲ್ಕವನ್ನು ಕೂಡಾ ಪಾವತಿ ಮಾಡಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

  • Indian Coast Guard Job: ಕರಾವಳಿ ಪಡೆಯಲ್ಲಿ ಉದ್ಯೋಗ ಮಾಡಬೇಕೇ? 260 ನಾವಿಕರ ನೇಮಕ, ದ್ವಿತೀಯ ಪಿಯುಸಿ ಅರ್ಹತೆ, ಕೂಡಲೇ ಅರ್ಜಿ ಹಾಕಿ

    Indian Coast Guard Job: ಕರಾವಳಿ ಪಡೆಯಲ್ಲಿ ಉದ್ಯೋಗ ಮಾಡಬೇಕೇ? 260 ನಾವಿಕರ ನೇಮಕ, ದ್ವಿತೀಯ ಪಿಯುಸಿ ಅರ್ಹತೆ, ಕೂಡಲೇ ಅರ್ಜಿ ಹಾಕಿ

    Indian Coast Guard Recruitment 2024: ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಕೆಲಸ ಮಾಡಲು ಆಸಕ್ತಿ ಇದೆಯೇ? ಭಾರತೀಯ ಕರಾವಳಿ ಪಡೆಯಲ್ಲಿ ನಿಮಗೆ ಸಾಕಷ್ಟು ಅವಕಾಶಗಳಿದ್ದು, ಇದನ್ನು ನೀವು ಸದುಪಯೋಗ ಪಡೆದುಕೊಳ್ಳಬಹುದು. ಭಾರತೀಯ ಕರಾವಳಿಯ ರಕ್ಷಣಾ ಪಡೆಯಲ್ಲಿ ಜೆನೆರಲ್‌ ಡ್ಯೂಟಿ ನಾವಿಕ ಹುದ್ದೆಗಳನ್ನು ವಿವಿಧ ವಲಯಗಳಲ್ಲಿ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಪೂರ್ಣಾವಧಿಯ ಹುದ್ದೆ ಇದಾಗಿದ್ದು, ಆಸಕ್ತ ಅಭ್ಯರ್ಥಿಗಳು 27-02-2024 ರೊಳಗೆ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ: 13-02-2024
    ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 27-02-2024

    ಹುದ್ದೆಗಳ ವಿವರ;
    ಹುದ್ದೆ ಹೆಸರು: ಭಾರತೀಯ ಕರಾವಳಿ ರಕ್ಷಣಾ ಪಡೆಯು ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
    ಒಟ್ಟು ಹುದ್ದೆಗಳು: ಭಾರತೀಯ ಕರಾವಳಿ ರಕ್ಷಣಾ ಪಡೆಯು ಒಟ್ಟು 260 ಹುದ್ದೆಗಳಿಗೆ ನೇಮಕಾತಿ ನಡೆಸಲಿದೆ.

    ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01 ಸೆಪ್ಟಂಬರ್‌ 2002 ಮತ್ತು 31 ಆಗಸ್ಟ್‌ 2006 ನಡುವೆ ಜನಿಸಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು. ಕನಿಷ್ಟ 18 ವಯಸ್ಸಾಗಿದ್ದು, ಗರಿಷ್ಠ 22 ವರ್ಷ ಮೀರದವರು ಅರ್ಜಿ ಸಲ್ಲಿಸಲು ಅರ್ಹರು. ಈ ಹುದ್ದೆಗೆ ವಯೋಮಿತಿ ಮೀಸಲಾತಿ ಸಡಿಲಿಕೆಯನ್ನು ನೀಡಲಾಗಿದ್ದು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ನೀಡಲಾಗಿದೆ.

    ವೇತನ: ಈ ಹುದ್ದೆಗಳಿಗೆ ಆಯ್ಕೆಯಗುವ ಅಭ್ಯರ್ಥಿಗಳಿಗೆ ಬೇಸಿಕ್‌ ಪೇ ರೂ.21,700 ನೀಡಲಾಗುವುದು. ಇದರ ಜೊತೆಗೆ ಎಲ್ಲಾ ಭತ್ಯೆಗಳು ದೊರಕುತ್ತದೆ. ಇದರಲ್ಲಿ ಪ್ರಮೋಷನ್‌ ಕೂಡಾ ಇರಲಿದೆ.

    ಅರ್ಜಿ ಶುಲ್ಕ: ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶುಲ್ಕ ಪಾವತಿ ಮಾಡಬೇಕಾಗಿಲ್ಲ. ಉಳಿದಂತೆ ಎಲ್ಲರೂ ರೂ.300 ಅರ್ಜಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ. ನೆಟ್‌ ಬ್ಯಾಂಕಿಂಗ್‌, ಇತರೆ ಯುಪಿಐ ಪೇ ಮಾದರಿಯಲ್ಲಿ ಅರ್ಜಿ ಶುಲ್ಕ ಪಾವತಿ ಮಾಡಬಹುದು.

    ವಿದ್ಯಾರ್ಹತೆ: ನಾವಿಕ ಹುದ್ದೆಗೆ ದ್ವಿತೀಯ ಪಿಯುಸಿ ಸೈನ್ಸ್‌ ಪಾಸಾದವರು ಅರ್ಜಿ ಸಲ್ಲಿಸಬಹುದು. ಗಣಿತ ಮತ್ತು ಭೌತಶಾಸ್ತ್ರದಲ್ಲಿ ಓದಿದವರಿಗೆ ಆದ್ಯತೆ ನೀಡಲಾಗುವುದು.

    ಅರ್ಜಿ ಸಲ್ಲಿಸುವ ರೀತಿ ಇಲ್ಲಿದೆ;
    ಅಭ್ಯರ್ಥಿಗಳು https://joinindiancoastguard.cdac.in/cgept/ ವೆಬ್‌ಸೈಟ್‌ಗೆ ಭೇಟಿ ನೀಡಬೇಕು
    ನಂತರ ನಾವಿಕ ನೇಮಕಾತಿ ಹುದ್ದೆಯ ರಿಜಿಸ್ಟ್ರೇಷನ್‌ ಲಿಂಕ್‌ ನೀಡಲಾಗಿರುವುದು ಅದನ್ನು ಕ್ಲಿಕ್‌ ಮಾಡಬೇಕು
    ರಿಜಿಸ್ಟ್ರೇಷನ್‌ ಮೊದಲಿಗೆ ಪಡೆದ ನಂತರ, ಡಿಟೇಲ್ಡ್‌ ಅಪ್ಲಿಕೇಶನನ್ನು ಭರ್ತಿ ಮಾಡಿ
    ಅನಂತರ ನಿಮಗೆ ಫೆ.13 ರ ಅಪ್ಲಿಕೇಶನ್‌ ಲಿಂಕ್‌ ನೀಡಲಾಗುವುದು.

    ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

  • DHFWS Recruitment 2024: ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳು, ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ

    DHFWS Recruitment 2024: ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳು, ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ

    DHFWS Recruitment 2024: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (DHFWS) ಕೊಪ್ಪಳವು ಡಿಎಚ್‌ಎಫ್‌ಎಸ್‌ ಕೊಪ್ಪಳದ ಅಧಿಕೃತ ಸೂಚನೆಯ ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಅಧಿಕಾರಿಗಳು, ನರ್ಸಿಂಗ್‌ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 16 ಫೆಬ್ರವರಿ 2024 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿದೆ.

    ಪ್ರಮುಖ ದಿನಾಂಕಗಳು
    ಅರ್ಹ ಅಭ್ಯರ್ಥಿಗಳು ದಿನಾಂಕ 02-02-2024 ರಿಂದ ದಿನಾಂಕ 16-02-2024 ರವರೆಗೆ ಕೊಪ್ಪಳ ಜಿಲ್ಲಾವೆಬ್‌ ತಾಣ www.koppal.nic.in ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಆಫ್‌ಲೈನ್‌ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

    ಹುದ್ದೆಗಳ ಸಂಖ್ಯೆ: ಒಟ್ಟು 38 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
    ವಯೋಮಿತಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ನಿಯಮಾವಳಿ ಪ್ರಕಾರ ಇರುತ್ತದೆ.
    ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡಬೇಕಾಗಿಲ್ಲ
    ವೇತನ: ಅಭ್ಯರ್ಥಿಗಳು ಈ ಹುದ್ದೆಗೆ ಆಯ್ಕೆಗೊಂಡರೆ ಅವರಿಗೆ ಮಾಸಿಕ ರೂ.13,200-ರೂ.15,939 ವೇತನ ನಿಗದಿಪಡಿಸಲಾಗಿದೆ.

    ವಿದ್ಯಾಭ್ಯಾಸ: ನೇಮಕಾತಿ ಪ್ರಕಟಣೆಯಲ್ಲಿ ಆಯಾ ಹುದ್ದೆಗಳ ಮುಂದೆ ಸೂಚಿಸಿರುವ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಅಭ್ಯರ್ಥಗಳು ಕಡ್ಡಾಯವಾಗಿ ಹೊಂದಿರಲೇಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊರತುಪಡಿಸಿ, ಇತರೆ ಯಾವುದೇ ಸಮಾನಾಂತರ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.
    ಕನ್ನಡ ಭಾಷಾ ಜ್ಞಾನ ಓದುವುದು, ಬರೆಯುವುದು ಮತ್ತು ಮಾತನಾಡುವುದು ಕಡ್ಡಾಯ.
    ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸಿದವರನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅರ್ಜಿ ಸಲ್ಲಿಸುವ ರೀತಿ ಇಲ್ಲಿದೆ;
    DHFS ಕೊಪ್ಪಳ ನೇಮಕಾತಿ ಅಧಿಸೂಚನೆಯ ಪ್ರಕಾರ https://koppal.nic.in/ ಈ ಲಿಂಕ್‌ ಕ್ಲಿಕ್‌ ಮಾಡಿ.
    ನಂತರ ಅರ್ಜಿ ನಮೂನೆಯಲ್ಲಿ ಅಗತ್ಯ ಎಲ್ಲಾ ವಿವರಗಳನ್ನು ನವೀಕರಿಸಿ, ನಂತರ ಇತ್ತೀಚಿನ ನಿಮ್ಮ ಫೋಟೋಗ್ರಾಫ್‌ ಜೊತೆಗೆ ಅಗತ್ಯ ದಾಖಲೆಗಳ ಸ್ಕ್ಯಾನ್‌ ಮಾಡಿ ಅಪ್‌ಲೋಡ್‌ ಮಾಡಿ.
    ಅರ್ಜಿ ಶುಲ್ಕ ಪಾವತಿಸಿ
    ಕೊನೆಯದಾಗಿ ಪ್ರಕ್ರಿಯೆ ಪೂರ್ಣಗೊಳಿಸಲು ಸಲ್ಲಿಸು ಬಟನ್‌ ಕ್ಲಿಕ್‌ ಮಾಡಿ.

    ಅಭ್ಯರ್ಥಿಗಳು http://www.koppal.nic.in ನ್ನು ಆಯ್ಕೆ ಮಾಡಿ ಆನ್‌ಲೈನ್‌ ಮುಖಾಂತರ ಅರ್ಜಿ ಭರ್ತಿ ಮಾಡಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛೆ ಪಟ್ಟಲ್ಲಿ, ಪ್ರತ್ಯೇಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಭರ್ತಿ ಮಾಡುವ ಮೊದಲು, ಅರ್ಹತೆಗೆ ಸಂಬಂಧಿಸಿದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಹಾಗೂ ನೀಡಿರುವ ಸೂಚನೆಗಳನ್ವಯ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು.

  • Union Bank Recruitment 2024: ಬ್ಯಾಂಕ್‌ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; 606 ಹುದ್ದೆಗಳು, ಆನ್‌ಲೈನ್‌ನಲ್ಲಿ ಈ ರೀತಿ ಅರ್ಜಿ ಸಲ್ಲಿಸಿ!!!

    Union Bank Recruitment 2024: ಬ್ಯಾಂಕ್‌ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; 606 ಹುದ್ದೆಗಳು, ಆನ್‌ಲೈನ್‌ನಲ್ಲಿ ಈ ರೀತಿ ಅರ್ಜಿ ಸಲ್ಲಿಸಿ!!!

    Union Bank Recruitment 2024: ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಹುದ್ದೆ ಪಡೆಯಲು ಇಚ್ಛೆ ಪಡುವವರಿಗೆ ಸಿಹಿ ಸುದ್ದಿ. ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ (Union Bank Recruitment 2024) ಸ್ಪೆಷಲಿಸ್ಟ್‌ ಆಫೀಸರ್‌ (ಮ್ಯಾನೇಜರ್‌) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 606 ಸ್ಪೆಷಲಿಸ್ಟ್‌ ಆಫಿಸರ್ಸ್‌ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಭಾರತದಲ್ಲಿ ವೃತ್ತಿ ಜೀವನ ಪ್ರಾರಂಭ ಮಾಡಲು ಇಚ್ಛೆ ಪಡುವ ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 03-02-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-02-2024

    ಹುದ್ದೆ ಸಂಖ್ಯೆ: ಯೂನಿಯನ್‌ ಬ್ಯಾಂಕ್‌ನಲ್ಲಿ ಒಟ್ಟು 606 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
    ಹುದ್ದೆಯ ಹೆಸರು: ಸ್ಪೆಷಲಿಸ್ಟ್‌ ಅಧಿಕಾರಿಗಳು (ಮ್ಯಾನೇಜರ್‌) ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

    ವೇತನ: ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 36,000-89890/- ವೇತ ಸಿಗಲಿದೆ.

    ವಯೋಮಿತಿ: ಯೂನಿಯನ್‌ ಬ್ಯಾಂಕ್‌ನ ವಿವಿಧ ಹುದ್ದೆಗೆ ವಿವಿಧ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಈ ಕುರಿತ ಮಾಹಿತಿಗಾಗಿ ಸಂಸ್ಥೆಯ ನೋಟಿಫಿಕೇಶನ್‌ ಚೆಕ್‌ ಮಾಡಬಹುದು. ಉಳಿದ ಹಾಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು, ಇದರಲ್ಲಿ OBC (NCL) ಅಭ್ಯರ್ಥಿಗಳಿಗೆ ಮೂರು ವರ್ಷ, SC/ST ಅಭ್ಯರ್ಥಿಗಳಿಗೆ ಐದು ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

    ಅರ್ಜಿ ಶುಲ್ಕ: SC/ST/PwBD ಅಭ್ಯರ್ಥಿಗಳಿಗೆ ರೂ.175/- ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ ರೂ.850/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಯನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್‌ಲೈನ್‌ ಪರೀಕ್ಷೆ, ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅರ್ಜಿ ಸಲ್ಲಿಸುವ ರೀತಿ ಇಲ್ಲಿದೆ;
    ಮೊದಲನೆಯದಾಗಿ ಅಭ್ಯರ್ಥಿಗಳು ಯೂನಿಯನ್‌ ಬ್ಯಾಂಕ್‌ನ ನೇಮಕಾತಿ ಅಧಿಸೂಚನೆಯನ್ನು ಅಭ್ಯರ್ಥಿಗಳು ಸಂಪೂರ್ಣವಾಗಿ ಪರಿಶೀಲಿಸಬೇಕು.
    ನಂತರ ಐಡಿ, ಮೊಬೈಲ್‌ ಸಂಖ್ಯೆ, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಇತ್ಯಾದಿಗಳನ್ನು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲೇ ಅಭ್ಯರ್ಥಿಗಳು ಸಿದ್ಧಮಾಡಿಟ್ಟುಕೊಳ್ಳಬೇಕು.
    ನಂತರ ವೆಬ್‌ಸೈಟ್‌ನಲ್ಲಿ ಯೂನಿಯನ್‌ ಬ್ಯಾಂಕ್‌ ಸ್ಪೆಷಲಿಸ್ಟ್‌ ಆಫೀಸರ್ಸ್‌ (ಮ್ಯಾನೇಜರ್)‌ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನೀಡಿರುವ ಲಿಂಕನ್ನು ಅಭ್ಯರ್ಥಿಗಳು ಕ್ಲಿಕ್‌ ಮಾಡಬೇಕು
    ಎಲ್ಲಾ ಅಗತ್ಯ ವಿವರಗಳನ್ನು ನಮೂದಿಸಬೇಕು. ಇತ್ತೀಚಿನ ಭಾವಚಿತ್ರ ಜೊತೆ ಅಗತ್ಯ ಪ್ರಮಾಣ ಪತ್ರಗಳ ಸ್ಕ್ಯಾನ್‌ ಅಪಲೋಡ್‌ ಮಾಡಬೇಕು.
    ನಂತರ ಅರ್ಜಿ ಶುಲ್ಕ ಪಾವತಿಸಿ
    ನಂತರ ಕೊನೆಯದಾಗಿ ನೇಮಕಾತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್‌ ಅನ್ನು ಕ್ಲಿಕ್‌ ಮಾಡಿ.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್‌ನ ವೆಬ್‌ಸೈಟ್ www.unionbankofindia.co.in ಭೇಟಿ ನೀಡಿ ವಿವರಗಳನ್ನು ತಿಳಿದುಕೊಳ್ಳಬಹುದು.

  • RDPR Recruitment 2024; 51 ಹುದ್ದೆಗಳು, ಮಾಸಿಕ ವೇತನ ರೂ.60 ಸಾವಿರ! ಈ ಕೂಡಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ!

    RDPR Recruitment 2024; 51 ಹುದ್ದೆಗಳು, ಮಾಸಿಕ ವೇತನ ರೂ.60 ಸಾವಿರ! ಈ ಕೂಡಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ!

    RDPR Karnataka Recruitment 2024: ಕರ್ನಾಟಕ ಪಂಚಾಯತ್‌ರಾಜ್‌ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಫೆಲೋಶಿಪ್‌ ಇಲ್ಲಿ ಹಲವು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. 51 ಹುದ್ದೆಗಳಿಗೆ ಅರ್ಹ ಮತ್ತು ಅನುಭವ ಹೊಂದಿರುವ ಯುವ ವೃತ್ತಿರಪರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದ ಏಳು ಜಿಲ್ಲೆಗಳ ಪ್ರತಿ ತಾಲ್ಲೂಕಿಗೆ ಒಬ್ಬರನ್ನು ನಿಯುಕ್ತಿ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ವಿವರವಾದ ಮಾಹಿತಿಯನ್ನು ವೆಬ್‌ಸೈಟ್‌ ಮೂಲಕ ಪಡೆದುಕೊಂಡು, ಭರ್ತಿ ಮಾಡಿ, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 22-01-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-02-2024

    ವಯೋಮಿತಿ: ಫೆಲೋಶಿಪ್‌ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 32 ವರ್ಷದೊಳಗಿರಬೇಕು.

    ವೇತನ ಶ್ರೇಣಿ: ಫೆಲೋಗಳಿಗೆ ತರಬೇತಿ ಮತ್ತು ತಾಲೂಕಿನಲ್ಲಿ ನಿಯೋಜನೆ ಮಾಡಿದ ನಂತರ ತಿಂಗಳಿಗೆ ರೂ.60,000 ಫೆಲೋಶಿಪ್‌ ನೀಡಲಾಗುವುದು. ಗ್ರಾಮ ಪಂಚಾಯತಿಗಳಿಗೆ ಪ್ರಯಾಣಿಸಲು ಮಾಸಿಕ ರೂ.1500 ಪ್ರಯಾಣ ಭತ್ಯೆ ನೀಡಲಾಗುವುದು.

    ವಿದ್ಯಾರ್ಹತೆ: ಸಾಮಾಜಿಕ ವಿಜ್ಞಾನಗಳಾದ ಸಮಾಜಶಾಸ್ತ್ರ ಅಥವಾ ಅರ್ಥಶಾಸ್ತ್ರ ಅಥವಾ ಗ್ರಾಮೀಣಾಭಿವೃದ್ಧಿ ಅಥವಾ ಸಮಾಜ ಕಾರ್ಯ ಅಥವಾ ಸಾರ್ವಜನಿಕ ನೀತಿ ವಿಷಯಗಳಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಸ್ನಾತಕ ಪದವೀಧರರು ಅಭಿವೃದ್ಧಿ ವಲಯದಲ್ಲಿ ಕನಿಷ್ಠ 1-2 ವರ್ಷಗಳ ಕ್ಷೇತ್ರ ಮಟ್ಟದ ಅನುಭವ ಹೊಂದಿದ್ದಲ್ಲಿ ಮಾತ್ರ ಆಯ್ಕೆಗೆ ಪರಿಗಣಿಸಲಾಗುವುದು ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಕ್ಷೇತ್ರಮಟ್ಟದ ಅನುಭವ ಹೊಂದಿದ್ದಲ್ಲಿ ಹೆಚ್ಚುವರಿ ಅಂಕಗಳೊಂದಿಗೆ ಪರಿಗಣಿಸಲಾಗುವುದು. ಕ್ಷೇತ್ರ ಮಟ್ಟದ ಅನುಭವ ಹೊಂದಿರುವ ಸ್ನಾತಕೋತ್ತರ ಪದವೀಧರರನ್ನು ಕಾರ್ಯಕ್ಷಮತೆ ಮೌಲ್ಯಮಾಪನಕ್ಕೊಳಪಟ್ಟು ಆದ್ಯತೆ ನೀಡಲಾಗುವುದು. M.Phil ಅಥವಾ Ph.D ಉನ್ನತ ವಿದ್ಯಾರ್ಹತೆ ಅಪೇಕ್ಷಣೀಯವಾಗಿದ್ದು, ಹೆಚ್ಚುವರಿ Weightage ಅನ್ನು ನೀಡಲಾಗುವುದು.

    ಷರತ್ತುಗಳು:
    ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಮಾತನಾಡಲು, ಓದಲು ಮತ್ತು ಬರೆಯಲು ತಿಳಿದಿರಬೇಕು. ಕ್ಷೇತ್ರಮಟ್ಟದಲ್ಲಿ ಮತ್ತು ನಾಗರಿಕರೊಂದಿಗೆ ಕೆಲಸ ಮಾಡಲು ಕನ್ನಡ ಭಾಷೆಯ ಜ್ಞಾನವು ಪ್ರಮುಖವಾಗಿದೆ. ಫೆಲೋಗಳು ಕಲ್ಯಾಣ ಕರ್ನಾಟಕ ವಿಭಾಗದ ಯಾವುದೇ ತಾಲ್ಲೂಕಿಗೆ ನಿಯೋಜಿಸಿದರೂ ಕೆಲಸ ಮಾಡಲು ಸಿದ್ಧರಿರಬೇಕು.
    ಫೆಲೋಷಿಪ್‌ನ ಸಂಪೂರ್ಣ ಅವಧಿಯವರೆಗೆ ನಿಯುಕ್ತಿಗೊಳಿಸಲಾದ ತಾಲ್ಲೂಕಿನಲ್ಲಿಯೇ ವಾಸ್ತವ್ಯ ಮಾಡಬೇಕು ಮತ್ತು ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯತಿಗಳಿಗೆ ನಿರಂತರವಾಗಿ ಪ್ರವಾಸ ಕೈಗೊಳ್ಳುವುದು ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವುದು ಕಡ್ಡಾಯವಾಗಿರುತ್ತದೆ.
    ಫೆಲೋಗಳು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲ್ವಿಚಾರಣೆ ಮತ್ತು ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುವುದು.

    ಆಯ್ಕೆ ವಿಧಾನ: ಮೆರಿಟ್‌ ಕಮ್‌ ಅಪ್ಟಿಟ್ಯೂಡ್‌ ಮೌಲ್ಯಮಾಪನ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಫೆಲೋಗಳನ್ನು ಆಯ್ಕೆ ಮಾಡಲಾಗುವುದು.

    ಸೂಚನೆ: ಅಂಚೆ, ಕೊರಿಯರ್‌, ಆಯುಕ್ತಾಲಯದಲ್ಲಿ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಹಾಯಕ ನಿರ್ದೇಶಕರು, ಮೊಬೈಲ್‌ ಸಂಖ್ಯೆ -9740790530, ಪಂಚಾಯತ್‌ರಾಜ್‌ ಆಯುಕ್ತಾಲುರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ