Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • ಕಿರಿಯ ತರಬೇತಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಹ್ವಾನ

    ಮುಲ್ಕಿ ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆ, ಹಳೆಯಂಗಡಿ , ಕರ್ನಾಟಕ ಸರಕಾರದ ಅನುದಾನಕ್ಕೊಳಪಟ್ಟ ಈ ಸಂಸ್ಥೆಯಲ್ಲಿ ಇಲೆಕ್ಟ್ರಿಶಿಯನ್ ಮತ್ತು ಎಲೆಕ್ಟ್ರೋನಿಕ್ ವೃತ್ತಿಯಲ್ಲಿ ‘ವೃತ್ತಿತತ್ವ’ ಮತ್ತು ‘ ಪ್ರಾಯೋಗಿಕ’ ವಿಷಯಗಳಲ್ಲಿ ತರಬೇತಿ ನೀಡಲು ತಾತ್ಕಾಲಿಕ ಕಿರಿಯ ತರಬೇತಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಸರಕಾರದಿಂದ ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ( DEE), ಎಲೆಕ್ಟ್ರೋನಿಕ್ಸ್ ಮತ್ತು ಕಮ್ಯುನಿಕೇಶನ್ ( DEC) ಅಥವಾ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಐಟಿಐ ಮತ್ತು ಶಿಶಿಕ್ಷು ತರಬೇತಿಯನ್ನು ಮೇಲ್ಕಾಣಿಸಿದ ವೃತ್ತಿಯಲ್ಲಿ ಪಡೆದಿರಬೇಕು.

    ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ, ಭಾವಚಿತ್ರ, ವಿದ್ಯಾರ್ಹತೆ ಅಂಕಪಟ್ಟಿ, ಅನುಭವಗಳ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ತಾ.18-12-2021 ರ ಒಳಗೆ ಇ- ಮೇಲ್ ಮೂಲಕ [email protected] ಹಾಗೂ ಕಾಪಿಯನ್ನು [email protected] ಗೆ ಕಳುಹಿಸತಕ್ಕದ್ದು ಅಥವಾ ಮೇಲೆ ಸೂಚಿಸಿದಂತೆ ಸಂಸ್ಥೆಯ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸತಕ್ಕದ್ದು.

  • ದಿ ಮೈಕೊ ಎಂಪ್ಲಾಯೀಸ್ ಕೋ ಆಪರೇಟಿವ್ ಸೊಸೈಟಿ ಲಿ., ನಲ್ಲಿ ಉದ್ಯೋಗವಕಾಶ- ಸುದ್ದಿಜಾಲ ನ್ಯೂಸ್

    ದಿ ಮೈಕೊ ಎಂಪ್ಲಾಯೀಸ್ ಕೋ ಆಪರೇಟಿವ್ ಸೊಸೈಟಿ ಲಿ., ನಲ್ಲಿ ಉದ್ಯೋಗವಕಾಶ- ಸುದ್ದಿಜಾಲ ನ್ಯೂಸ್


    ದಿ ಮೈಕೊ ಎಂಪ್ಲಾಯೀಸ್ ಕೋ ಆಪರೇಟಿವ್ ಸೊಸೈಟಿ ಲಿ., ಬೆಂಗಳೂರು ಇಲ್ಲಿ ಸಂಘದಲ್ಲಿ ಖಾಲಿ ಇರುವ ಲೆಕ್ಕಗರು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಹಕಾರ ಸಂಘದಲ್ಲಿ ಅಥವಾ ಬ್ಯಾಂಕಿಂಗ್ ಸೇವೆಯಲ್ಲಿ ಕೆಲಸ ನಿರ್ವಹಿಸುವ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ಹುದ್ದೆ : ಲೆಕ್ಕಿಗರು – 01 ಸಂಖ್ಯೆ ವಿದ್ಯಾರ್ಹತೆ : ಬಿ.ಕಾಂ/ ಎಂ.ಕಾಂ/ ಎಂಬಿಎ ಪದವಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ( ಕನಿಷ್ಠ 6 ತಿಂಗಳು ಪ್ರಮಾಣ ಪತ್ರ) ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ […]

    Source

  • ದಿ ಮೈಕೊ ಎಂಪ್ಲಾಯೀಸ್ ಕೋ ಆಪರೇಟಿವ್ ಸೊಸೈಟಿ ಲಿ., ನಲ್ಲಿ ಉದ್ಯೋಗವಕಾಶ- ಸುದ್ದಿಜಾಲ ನ್ಯೂಸ್

    ದಿ ಮೈಕೊ ಎಂಪ್ಲಾಯೀಸ್ ಕೋ ಆಪರೇಟಿವ್ ಸೊಸೈಟಿ ಲಿ., ಬೆಂಗಳೂರು ಇಲ್ಲಿ ಸಂಘದಲ್ಲಿ ಖಾಲಿ ಇರುವ ಲೆಕ್ಕಗರು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಹಕಾರ ಸಂಘದಲ್ಲಿ ಅಥವಾ ಬ್ಯಾಂಕಿಂಗ್ ಸೇವೆಯಲ್ಲಿ ಕೆಲಸ ನಿರ್ವಹಿಸುವ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು.

    ಹುದ್ದೆ : ಲೆಕ್ಕಿಗರು – 01 ಸಂಖ್ಯೆ

    ವಿದ್ಯಾರ್ಹತೆ : ಬಿ.ಕಾಂ/ ಎಂ.ಕಾಂ/ ಎಂಬಿಎ ಪದವಿ ಹೊಂದಿರಬೇಕು.

    ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ( ಕನಿಷ್ಠ 6 ತಿಂಗಳು ಪ್ರಮಾಣ ಪತ್ರ)

    ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಉತ್ತೀರ್ಣತೆ.

    ಅರ್ಜಿಯನ್ನು ಸಂಘದ ಕಚೇರಿಯಿಂದ ಕಚೇರಿ ಸಮಯದಲ್ಲಿ ಅಥವಾ ವೆಬ್ಸೈಟ್ www.boschmes.com ನಿಂದ ಪಡೆಯಬಹುದು.

    ಅರ್ಜಿಯನ್ನು ದಿನಾಂಕ 20.12.2021 ರ ಒಳಗಾಗಿ ( ರಜಾ ದಿನ ಹೊರತುಪಡಿಸಿ) ಸಂಜೆ 5.00 ಘಂಟೆಯೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಅಥವಾ ಸಂಘವನ್ನು ಸಂಪರ್ಕಿಸಬೇಕಾಗಿ ವಿನಂತಿ.

  • ಯಾದಗಿರಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಯಾದಗಿರಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 05 ಅಂಗನವಾಡಿ ಕಾರ್ಯಕರ್ತೆ ಮತ್ತು 12 ಅಂಗನವಾಡಿ ಸಹಾಯಕಿ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 10-12-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-01-2022

    ವಯೋಮಿತಿ : ಕನಿಷ್ಠ 18 ವರ್ಷದಿಂದ 35 ವರ್ಷಗಳ ವಯೋಮಿತಿಯೊಳಗಿರತಕ್ಕದ್ದು. ಅಂಗನವಾಡಿ ಕಾರ್ಯಕರ್ತೆ ನೇಮಕಾತಿಯಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಆದ್ದರಿಂದ ಅಂಗವಿಕಲರಿಗೆ 45 ವರ್ಷಗಳ ವಯೋಮಿತಿಯೊಳಗಿರತಕ್ಕದ್ದು.

    ಸ್ಥಳೀಯತೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸಂಬಂಧಿಸಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಕೇಂದ್ರದ ವ್ಯಾಪ್ತಿಯ ಕಂದಾಯ ಗ್ರಾಮವನ್ನು ಹಾಗೂ ನಗರ ಪ್ರದೇಶದಲ್ಲಿ ಕೇಂದ್ರದ ವ್ಯಾಪ್ತಿಯ ಕಂದಾಯ ವಾರ್ಡ್ ಗಳನ್ನು ಮಾತ್ರ ಪರಿಗಣಿಸಲಾಗುವುದು. ಚುನಾವಣಾ ವಾರ್ಡ್ ಗಳನ್ನು ಪರಿಗಣಿಸಲಾಗುವುದಿಲ್ಲ. ಸ್ಥಳೀಯತೆಯ ಬಗ್ಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಿಂದ 3 ವರ್ಷ ಅವಧಿಯೊಳಗಿನ ತಹಶಿಲ್ದಾರರು/ಉಪತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸುವುದು.

    ಅಂಗನವಾಡಿ ಕಾರ್ಯಕರ್ತೆ : ಕನಿಷ್ಠ ವಿದ್ಯಾರ್ಹತೆ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ.

    ಅಂಗನವಾಡಿ ಕಾರ್ಯಕರ್ತೆ : ಕನಿಷ್ಠ 04 ನೇ‌ ತರಗತಿ ಗರಿಷ್ಠ 09 ತರಗತಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆ ಪರಿಗಣಿಸಲಾಗುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ

    NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ


    ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾ ಟೆಕ್ನಾಲಜಿ ( ಎ‌ನ್ಐಎಫ್ ಟಿ) ಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ತನ್ನ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಸಹಾಯಕ ಪ್ರಾಧ್ಯಾಪಕ ಹುದ್ದೆ ಸಂಖ್ಯೆ : 190 ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-12-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022 ಸಂಜೆ‌ 5.30 ರೊಳಗೆ. ವಿದ್ಯಾರ್ಹತೆ : ನಿಫ್ಟ್ ನಲ್ಲಿ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ ವಿದ್ಯಾರ್ಹತೆಯನ್ನು […]

    Source

  • NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ

    ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾ ಟೆಕ್ನಾಲಜಿ ( ಎ‌ನ್ಐಎಫ್ ಟಿ) ಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ತನ್ನ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಸಹಾಯಕ ಪ್ರಾಧ್ಯಾಪಕ

    ಹುದ್ದೆ ಸಂಖ್ಯೆ : 190

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-12-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022 ಸಂಜೆ‌ 5.30 ರೊಳಗೆ.

    ವಿದ್ಯಾರ್ಹತೆ : ನಿಫ್ಟ್ ನಲ್ಲಿ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ : ಜನವರಿ 31, 2022 ರ ಅನ್ವಯ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು‌. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರೂ. ವೇತನವನ್ನು ನಿಗದಿಪಡಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1,180/- ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.

    ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಅರ್ಜಿ ಸಲ್ಲಿಕೆ ಹೇಗೆ ?

    ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಮಾಹಿತಿಯನ್ನು ಭರ್ತಿ ಮಾಡಬೇಕು. ಆನ್ಲೈನ್ ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 15, 2022 ರೊಳಗೆ ಅರ್ಜಿಯನ್ನು ತಲುಪಿಸಬಹುದು.

    ಕಚೇರಿ ವಿಳಾಸ : Office of Registrar, Head Office, NIFT Campus, Hauz Khas, New Delhi – 110016

    ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ.