
ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ( ಜೆಎಸ್ ಸಿಬಿ) ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆ : ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ ( ಡಿಬಿಎ)- 2 ಹುದ್ದೆಗಳು ಹಾಗೂ ಜ್ಯೂನಿಯರ್ ಅಸಿಸ್ಟೆಂಟ್ – 10 ಹುದ್ದೆಗಳು ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 […]
Source
Category: Karnataka Jobs
Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com
-

ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ
-
ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ
ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ( ಜೆಎಸ್ ಸಿಬಿ) ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.
ಹುದ್ದೆ : ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ ( ಡಿಬಿಎ)- 2 ಹುದ್ದೆಗಳು ಹಾಗೂ ಜ್ಯೂನಿಯರ್ ಅಸಿಸ್ಟೆಂಟ್ – 10 ಹುದ್ದೆಗಳು
ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅಭ್ಯರ್ಥಿಗಳು ಅರ್ಜಿಯ ಜೊತೆಗೆ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ನವೆಂಬರ್ 30 ರೊಳಗೆ ಸಲ್ಲಿಸಬೇಕು.
ವಿಳಾಸ : Janatha Seva Cooperative Bank, Post Box no.3, Hampinagara, Bangalore-560104
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಡಿಗ್ರಿಯನ್ನು ಪಡೆದಿರಬೇಕು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-11-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-11-2021
ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ನೋಡಿ
-
ಬೆಂಗಳೂರು ನಗರ ವಿಶ್ವವಿದ್ಯಾನಿಲಯ : ಪೂರ್ಣ/ ಅರೆಕಾಲಿಕ ಅತಿಥಿ ಉಪನ್ಯಾಸಕ ಹುದ್ದೆ
2021-22 ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕಲಾ ಮತ್ತು ವಿಜ್ಞಾನ ವಿಭಾಗಗಳ ಅಡಿಯಲ್ಲಿ ಈ ಕೆಳಗಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಬೋಧಿಸಲು ಪೂರ್ಣ/ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯುಜಿಸಿ ನಿಯಮಗಳ ಪ್ರಕಾರ ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ಜಾಲತಾಣ www.bcu.ac.in ದಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಸಂಬಂಧಿತ ದಾಖಲೆಯ ಪ್ರತಿಗಳೊಂದಿಗೆ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು – 560001 ಇವರಿಗೆ ಕಚೇರಿ ಸಮಯದಲ್ಲಿ ದಿನಾಂಕ : 30-11-2021 ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಲತಾಣಕ್ಕೆ ಭೇಟಿ ನೀಡಿ.
-
ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯಲ್ಲಿ ನರೇಗಾ ಯೋಜನೆಯಡಿ ಉದ್ಯೋಗ : 25,000 ರೂ. ತಿಂಗಳ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇರನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ : ಜಿಲ್ಲಾ ಐ ಇ ಸಿ ಸಂಯೋಜಕ – 1ಹುದ್ದೆ
ತಾಲ್ಲೂಕು ಐಇಸಿ ಸಂಯೋಜಕ – 1 ಹುದ್ದೆ
ತಾಂತ್ರಿಕ ಸಹಾಯಕ ( ಕೃಷಿ ತೋಟಗಾರಿಕೆ )- 3 ಹುದ್ದೆಗಳು
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ – 7 ಹುದ್ದೆಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-11-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :18-11-2021
ಅಭ್ಯರ್ಥಿಗಳು ಅರ್ಜಿಗಳನ್ನು https://chikkamagaluru.nic.in ವೆಬ್ಸೈಟ್ ಮುಖಾಂತರ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ನೋಟಿಫಿಕೇಶನ್ ನೋಡಿ.
-
ಬೆಂಗಳೂರು ನಗರ ಜಿಲ್ಲೆಯಲ್ಲಿ 357 ವಿವಿಧ ಹುದ್ದೆ ; ಈ ಕೂಡಲೇ ಅರ್ಜಿ ಸಲ್ಲಿಸಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 97 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 260 ಅಂಗನವಾಡಿ ಸಹಾಯಕಿಯರ ಗೌರವ ಧನ ಆಧಾರಿತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದಿನಾಂಕ : 16-09-2021 ರಿಂದ 16-10-2021 ರ ತನಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
-
ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ 511 ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೇ ದಿನಾಂಕ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಒಂದು ನವರತ್ನ ಕಂಪನಿ ಮತ್ತು ರಕ್ಷಣಾ ಮಂತ್ರಾಲಯದ ಅಧೀನ ಭಾರತದ ಪ್ರಮುಖ ವೃತ್ತಿಪರ ಎಲೆಕ್ಟ್ರಾನಿಕ್ಸ್ ಕಂಪನಿಗೆ ಬೆಂಗಳೂರು ಸಂಕೀರ್ಣದಲ್ಲಿ ಗುತ್ತಿಗೆಯ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಶಿಕ್ಷಣಾರ್ಥಿ ಇಂಜಿನಿಯರ್- 1 –
ಯೋಜನೆ ಇಂಜಿನಿಯರ್ – 1ವಿದ್ಯಾರ್ಹತೆ : ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ / ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯೂನಿಕೇಶನ್ / ಟೆಲಿಕಮ್ಯುನಿಕೇಶನ್/ ಕಮ್ಯೂನಿಕೇಶನ್/ ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ನ ಇಂಜಿನಿಯರಿಂಗ್ ವಿಷಯದಲ್ಲಿ ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪೂರ್ಣಕಾಲಿಕ ಬಿ.ಇ/ಬಿ.ಟೆಕ್ ಇಂಜಿನಿಯರಿಂಗ್ ಪಡೆದಿರಬೇಕು.
ಹುದ್ದೆಗಳ ಸಂಖ್ಯೆ : ಶಿಕ್ಷಣಾರ್ಥಿ ಇಂಜಿನಿಯರ್ -1 – 308 ಹುದ್ದೆಗಳು. ವೇತನ : 1 ನೇ ವರ್ಷ – ರೂ.25,000/-
2 ನೇ ವರ್ಷ – ರೂ.28,000/-
3 ನೇ ವರ್ಷ – ರೂ. 31,000/-
ಯೋಜನೆ ಇಂಜಿನಿಯರ್ -1 – 203 ಹುದ್ದೆಗಳು. 1 ನೇ ವರ್ಷ ರೂ.35,000/-, 2 ನೇ ವರ್ಷ : ರೂ.40,000/-, 3 ನೇ ವರ್ಷ : ರೂ.45,000/-, 4 ನೇ ವರ್ಷ : ರೂ.50,000/-ಹುದ್ದೆ ಸ್ಥಳ : ಬೆಂಗಳೂರು
ವಯೋಮಿತಿ : ಶಿಕ್ಷಣಾರ್ಥಿ ಇಂಜಿನಿಯರ್ ಹುದ್ದೆಗೆ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 25 ವರ್ಷ, ಹಾಗೂ ಯೋಜನೆ ಇಂಜಿನಿಯರ್ ಹುದ್ದೆಗೆ ಗರಿಷ್ಠ 28 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ :ಶಿಕ್ಷಣಾರ್ಥಿ ಇಂಜಿನಿಯರ್ ಹುದ್ದೆಗೆ ಜನರಲ್,ಇಡಬ್ಲ್ಯುಎಸ್, ಒಬಿಸಿ ಅಭ್ಯರ್ಥಿಗಳು ರೂ.500/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಯೋಜನೆ ಇಂಜಿನಿಯರ್ ಹುದ್ದೆಗೆ ಜನರಲ್, ಇಡಬ್ಲ್ಯುಎಸ್, ಒಬಿಸಿ ಅಭ್ಯರ್ಥಿಗಳು ರೂ.200/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-08-2021
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.bel-india.in ಗೆ ಭೇಟಿ ನೀಡಬಹುದು.