Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾ ಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿ ಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.

    ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ( ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು) ಅರ್ಜಿಯನ್ನು ಆಹ್ವಾನಿಸಲಾಗಿದೆ. ಜೂನ್ 20, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಈಗಾಗಲೇ ಎಸ್ ಎಸ್ ಪಿ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭಗೊಂಡಿದ್ದು, ಅರ್ಜಿಯನ್ನು ಪೂರ್ಣಗೊಳಿಸದೇ ಇರುವ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುವಂತೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿದೆ.

    ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ : 8050770005/8050770004

    ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಜಿಲ್ಲಾ ಪಂಚಾಯತ್ ಬಳ್ಳಾರಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಜಿಲ್ಲಾ ಪಂಚಾಯತ್ ಬಳ್ಳಾರಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಶ್ಯಾಮ್ ಪ್ರಸಾದ್ ಮುಖರ್ಜಿ ರೂಬರ್ನ್ ಮಿಷನ್ ಅಡಿಯಲ್ಲಿ ಬಳ್ಳಾರಿ/ವಿಜಯನಗರ ಜಿಲ್ಲೆಯಲ್ಲಿ ಆಯ್ಕೆಯಾದ 04 ಕ್ಲಸ್ಟರ್ ಗಳಿಗೆ ಸಂಬಂಧಿಸಿದಂತೆ ಬಳ್ಳಾರಿ / ವಿಜಯನಗರ ಜಿಲ್ಲೆಯಲ್ಲಿ ಕ್ಲಸ್ಟರ್ ವಾರು ಪ್ರಗತಿ ಮತ್ತು ಮೇಲ್ವಿಚಾರಣೆ ಮಾಡಲು DPMU ಹಾಗೂ CDMU ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಾನವ ಸಂಪನ್ಮೂಲ ‌ಸಂಸ್ಥೆಯ ಮೂಲಕ ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಈ ಕೆಳಗಿನಂತಿವೆ :

    ಹುದ್ದೆ : ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಯುನಿಟ್ ( DPMU) ಬಳ್ಳಾರಿ, ವಿಜಯನಗರ

    1. ರೀಜಿನಲ್ ಪ್ಲ್ಯಾನಿಂಗ್ ಸ್ಪೆಷಲಿಸ್ಟ್ -02
    2. ರೂರಲ್ ಡೆವಲಪ್ಮೆಂಟ್ ಮ್ಯಾನೇಜ್ಮೆಂಟ್ ಸ್ಪೆಷಲಿಸ್ಟ್ -02

    ಕ್ಲಸ್ಟರ್ ಡೆವಲಪ್ಮೆಂಟ್ ಮ್ಯಾನೇಜ್ಮೆಂಟ್ ಯುನಿಟ್ ( CDMU)

    1. ಇಂಜಿನಿಯರಿಂಗ್ ಸ್ಪೆಷಲಿಸ್ಟ್ – 04
      2.ಸ್ಪೆಷಲ್ ಪ್ಲಾನಿಂಗ್ ಪ್ರೊಫೆಷನಲ್ – 04

    3. ರೂರಲ್ ಮ್ಯಾನೇಜ್ಮೆಂಟ್ ಪ್ರೊಫೆಷನಲ್ -04

    ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 25 ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

    ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ವಿದ್ಯಾರ್ಹತೆ ಹಾಗೂ ಇತರೆ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಬಳ್ಳಾರಿ ( ಡಿ.ಆರ್.ಡಿ.ಎ) ಶಾಖೆ, ಕೋಟೆ,ಬಳ್ಳಾರಿ – 583102 ರವರ ಹೆಸರಿಗೆ ಖುದ್ದಾಗಿ/ ಅಂಚೆ ಮೂಲಕ ಅಥವಾ ಇ- ಮೇಲ್ ಮೂಲಕ [email protected] ನಲ್ಲಿ ದಿನಾಂಕ 14-06-2021 ಮಧ್ಯಾಹ್ನ 1.30 ಗಂಟೆಯವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

  • SAST ಮಂಡ್ಯ ಜಿಲ್ಲೆ : 26 ಆರೋಗ್ಯ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

    SAST ಮಂಡ್ಯ ಜಿಲ್ಲೆ : 26 ಆರೋಗ್ಯ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಮಂಡ್ಯ ಜಿಲ್ಲೆಯಲ್ಲಿ 2021-22 ನೇ ಸಾಲಿನ ರಾಜ್ಯ ವಿಪತ್ತು ನಿರ್ವಹಣಾ ನಿಧಿ ಪರಿಹಾರ ಅನುದಾನದಡಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ( SAST) ಕಾರ್ಯಕ್ರಮದ ಕೋವಿಡ್ -19 ರೋಗಿಗಳಿಗೆ SAST ನೊಂದಾಯಿತ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 24*7 ಚಿಕಿತ್ಸೆ, ಮಾಹಿತಿ, ಸೂಕ್ತ ಸಲಹೆ ನೀಡಲು 26 ಜನ ಆರೋಗ್ಯ ಮಿತ್ರರನ್ನು ಗೌರವಧನ ಆಧಾರಿತ ಗುತ್ತಿಗೆ ಆಧಾರದಲ್ಲಿ 3 ತಿಂಗಳ ಅವಧಿಗೆ ( ಕೋವಿಡ್ -19 ಅವಧಿಗೆ ಮಾತ್ರ) ಆಯ್ಕೆ ಪ್ರಕ್ರಿಯೆಯನ್ನು ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಪದವಿ ಮತ್ತು ಸಾಮಾನ್ಯ ಗಣಕಯಂತ್ರ ನಿರ್ವಹಣ ತರಬೇತಿ ಹೊಂದಿರುವ ದೃಢೀಕರಣ ಪತ್ರ ಹಾಗೂ ಉತ್ತಮ ವಾಕ್ ಚಾತುರ್ಯ ಅಭ್ಯರ್ಥಿಗಳು ಹೊಂದಿರಬೇಕು.

    ಹುದ್ದೆಯ ಹೆಸರು : ಆರೋಗ್ಯ ಮಿತ್ರ ( ಗೌರವಧನ ಗುತ್ತಿಗೆ ಆಧಾರಿತ)

    ಹುದ್ದೆಯ ಸಂಖ್ಯೆ : 26

    ವಯೋಮಿತಿ : ಗರಿಷ್ಠ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಕಾರ್ಯಕ್ರಮ : ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ( SAST) ಮಂಡ್ಯ ಜಿಲ್ಲೆ

    ಮಾಸಿಕ ಸಂಚಿತ ಗೌರವಧನ : ರೂ.20,000/-( 3 ತಿಂಯ ಅವಧಿಗೆ ಮಾತ್ರ‌. ಅಂದರೆ ದಿ. 03-06-2021 ರಿಂದ 3 ತಿಂಗಳ ಅವಧಿಗೆ)

    ಅಭ್ಯರ್ಥಿಗಳು ದಿನಾಂಕ : 03-06-2021 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಮಂಡ್ಯ ಜಿಲ್ಲೆ, ಮಂಡ್ಯ ಇವರ ಕಚೇರಿಗೆ ಬೆಳಿಗ್ಗೆ 10:00 ಗಂಟೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ ಮೂಲ ದಾಖಲಾತಿಗಳೊಂದಿಗೆ ಹಾಜರಾಗತಕ್ಕದ್ದು. ಸಂಜೆ 4:00 ರ ನಂತರ ಬಂದ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ.

  • ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ವಿವಿಧ ಹುದ್ದೆ

    ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ವಿವಿಧ ಹುದ್ದೆ

    ವಿಜಯನಗರ ಜಿಲ್ಲೆಯ ಹೊಸಪೇಟೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ‌ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :

    ಹುದ್ದೆ : 2021-22 ನೇ ಸಾಲಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೌಟುಂಬಿಕ ದೌರ್ಜನ್ಯ ಕಾಯಿದೆಯಡಿ ಕಚೇರಿಯ ಕೆಲಸಗಳಿಗೆ ಡಿ ಗ್ರೂಪ್ ಕಂಪ್ಯೂಟರ್ ಅಪರೇಟರ್, ಜವಾನ ಕೆಲಸಗಳಿಗೆ ಸೇರಿದಂತೆ 04 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.

    ರಜಾ ದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 10.30 ರಿಂದ ಸಾಯಂಕಾಲ 4.00 ರವರೆಗೆ ಅರ್ಜಿಗಳನ್ನು ಪಡೆಯಬಹುದಾಗಿದೆ.

    ಆಸಕ್ತರು ಅರ್ಜಿಯನ್ನು ಸಲ್ಲಿಕೆ ಮಾಡಲು ಜೂನ್ 11, 2021 ಕೊನೆಯ ದಿನಾಂಕವಾಗಿದೆ.

    ಜೂನ್, 11 ರ ಮಧ್ಯಾಹ್ನ 4.00 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಹೊಸಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಲು ಸೂಚಿಸಲಾಗಿದೆ.

  • IDSG ಸರ್ಕಾರಿ ಕಾಲೇಜಿನಲ್ಲಿ ಉದ್ಯೋಗವಕಾಶ

    IDSG ಸರ್ಕಾರಿ ಕಾಲೇಜಿನಲ್ಲಿ ಉದ್ಯೋಗವಕಾಶ

    ಚಿಕ್ಕಮಗಳೂರು ಜಿಲ್ಲೆಯ IDSG ಸರಕಾರಿ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್, 01, 2021

    ವಿದ್ಯಾರ್ಹತೆ : ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು. ಜೊತೆಗೆ ಎನ್ ಇಟಿ, ಕೆಎಸ್ ಇಟಿ, ಪಿಹೆಚ್‌ಡಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

    ಅಭ್ಯರ್ಥಿಗಳು ಸಂದರ್ಶನದ ಸಮಯದಲ್ಲಿ ಅಗತ್ಯ ಮೂಲ‌ ದಾಖಲೆಗಳ ಜೊತೆಗೆ ಒಂದು ಸೆಟ್ ಜೆರಾಕ್ಸ್ ಕಾಪಿಗಳನ್ನು ತರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ದೂರವಾಣಿ ಸಂಖ್ಯೆ 9448246988, 08262-22464 ಗೆ ಸಂಪರ್ಕಿಸಬಹುದು.

  • ಚಿಕ್ಕಬಳ್ಳಾಪುರದಲ್ಲಿ 45 ಹುದ್ದೆಗಳು : ಸಂಪೂರ್ಣ ವಿವರ ಇಲ್ಲಿದೆ

    ಚಿಕ್ಕಬಳ್ಳಾಪುರದಲ್ಲಿ 45 ಹುದ್ದೆಗಳು : ಸಂಪೂರ್ಣ ವಿವರ ಇಲ್ಲಿದೆ

    ಜಿಲ್ಲಾ ಆರೋಗ್ಯ ಮತ್ತು ಕುಟು ಕಲ್ಯಾಣ ಅಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ : ವೈದ್ಯರು – 15
    ಶ್ರುಶ್ರೂಷಕರು – 15
    ಗ್ರೂಪ್ ಡಿ – 15

    ವೇತನ : ವೈದ್ಯರು ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಜ ರೂ.60,000/- ವೇತನವಿರುತ್ತದೆ. ಈ ಹುದ್ದೆಗೆ ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ತರಬೇತಿಯಲ್ಲಿ ತೇರ್ಗಡೆ ಹೊಂದಿರಬೇಕು. KMC ( ಕರ್ನಾಟಕ ಮೆಡಿಕಲ್ ಕೌನ್ಸಿಲ್) ನೋಂದಣಿ ಆಗಿರಬೇಕು.

    ಶುಶ್ರೂಷಕರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ‌ ರೂ.25,000/- ವೇತನವಿರುತ್ತದೆ. ಈ ಹುದ್ದೆಗೆ ಬಿಎಸ್ಸಿ ನರ್ಸಿಂಗ್/ಜಿಎನ್ ಎಂ ತರಬೇತಿಯಲ್ಲಿ ತೇರ್ಗಡೆ/ ಪದವಿ ಹೊಂದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೋಂದಣಿ ಆಗಿರಬೇಕು. ವಯಸ್ಸು ಕನಿಷ್ಠ 18 ಆಗಿರಬೇಕು. ಗರಿಷ್ಠ 40 ಮೀರಿರಬಾರದು. ಗಣಕ ಯಂತ್ರ ತರಬೇತಿ ಪೂರೈಸಿರಬೇಕು.
    ಗ್ರೂಪ್ ಡಿ ಗೆ ಮಾಸಿಕ ರೂ.20,000/- ವೇತನವಿರುತ್ತದೆ. ಈ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ವಯಸ್ಸು ಕನಿಷ್ಠ 18 ರಿಂದ 40 ವರ್ಷ ಮೀರಿರಬಾರದು.

    ಕಚೇರಿಯಿಂದಲೇ ನೇರ ಸಂದರ್ಶನ ನಡೆಸಿ‌ ದಾಖಲೆಗಳನ್ನು ಪರಿಶೀಲಿಸಿ ಮಾನ್ಯ ಜಿಲ್ಲಾಧಿಕಾರಿಗಳ ಸಹಮತದೊಂದಿಗೆ ನೇಮಿಸಿಕೊಳ್ಳಲು ಸೂಚಿಸಲಾಗಿರುವ‌ ಮೇರೆಗೆ ಗುತ್ತಿಗೆ ಆಧಾರದಲ್ಲಿ ದಿನಾಂಕ 30-09-2021 ರ ಅವಧಿಯವರೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ದಿನಾಂಕ‌ 29-05-2021 ರಂದು ಸಂಜೆ 5:00 ಗಂಟೆ ಒಳಗೆ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಿದೆ. ಹಾಗೂ ದಿನಾಂಕ 30-05-2021 ರಂದು ಸಂಜೆ ಬೆಳಿಗ್ಗೆ 11.00 ಗಂಟೆಗೆ ಎಲ್ಲಾ ಅರ್ಜಿದಾರರು ಮೂಲ ದಾಖಲೆಗಳೊಂದಿಗೆ ಪರಿಶೀಲನೆಗಾಗಿ ಈ ಕಚೇರಿಗೆ ಹಾಜರಾಗತಕ್ಕದ್ದು.

    ಹೆಚ್ಚಿನ ಮಾಹಿತಿಗಾಗಿ ಈ‌ ಲಿಂಕ್ ಕ್ಲಿಕ್ ಮಾಡಿ