Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • IIMB Recruitment 2024: ಬೆಂಗಳೂರಿನ ಐಐಎಂಬಿಯಲ್ಲಿ ಉದ್ಯೋಗ ಖಾಲಿ ಇದೆ; ಈಗಲೇ ಅಪ್ಲೈ ಮಾಡಿ

    IIMB Recruitment 2024: ಬೆಂಗಳೂರಿನ ಐಐಎಂಬಿಯಲ್ಲಿ ಉದ್ಯೋಗ ಖಾಲಿ ಇದೆ; ಈಗಲೇ ಅಪ್ಲೈ ಮಾಡಿ

    IIMB Recruitment 2024: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIMB) ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ಸಂಖ್ಯೆಯನ್ನು ಇನ್ನೂ ನಿರ್ದಿಷ್ಟಪಡಿಸಿಲ್ಲ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಐಐಎಂಬಿಯಲ್ಲಿ ಖಾಲಿ ಇರುವ ಅಕಾಡೆಮಿಕ್ ಅಸೋಸಿಯೇಟ್ – ಮಾರ್ಕೆಟಿಂಗ್ ಏರಿಯಾ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು 27-ಮೇ-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 13-05-2024
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-05-2024

    ಹುದ್ದೆಯ ಕುರಿತ ಹೆಚ್ಚಿನ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ಇಲ್ಲಿ ಅಕಾಡೆಮಿಕ್‌ ಅಸೋಸಿಯೇಟ್‌ – ಮಾರ್ಕೆಟಿಂಗ್‌ ಏರಿಯಾ ಹುದ್ದೆಗಳ ಭರ್ತಿ ಮಾಡಲಾಗುತ್ತಿದ್ದು, ಈ ಹುದ್ದೆಗೆ ಆಯ್ಕೆಯಾದವರಿಗೆ ಪ್ರತಿ ತಿಂಗಳು ಸ್ಪೈಪೆಂಡ್‌ ರೂಪದಲ್ಲಿ ರೂ.38ಸಾವಿರ-44 ಸಾವಿರದವರೆಗೆ ಸಿಗಲಿದೆ.

    ವಿದ್ಯಾರ್ಹತೆ: IIMB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿಯನ್ನು ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಪ್ರಕಾರ ಅಭ್ಯರ್ಥಿಗಳು ಐಐಎಂಬಿ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನಿಯಮಗಳ ಪ್ರಕಾರ ನೀಡಲಾಗಿದೆ.

    ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • BRBNMPL Recruitment 2024: ನೋಟ್‌ ಮುದ್ರಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    BRBNMPL Recruitment 2024: ನೋಟ್‌ ಮುದ್ರಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    BRBNMPL Recruitment 2024: ಭಾರತೀಯ ರಿಸರ್ವ್‌ ಬ್ಯಾಂಕ್‌ ನೋಟ್‌ ಮುದ್ರಣ ಪ್ರೈವೇಟ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಮೈಸೂರು, ಪಶ್ಚಿಮ ಬಂಗಾಳದ ಸಾಲ್ಬೋನಿಯಲ್ಲಿರುವ ತನ್ನ ಪ್ರೆಸ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 6 ಹುದ್ದೆಗಳು ಖಾಲಿ ಇದ್ದು, ಹುದ್ದೆಯ ಕುರಿತ ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.

    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ.14, 2024
    ನಿರ್ದಿಷ್ಟಪಡಿಸಿದ ಪ್ರದೇಶಗಳಲ್ಲಿ ವಾಸಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ, 21, 2024

    ಹುದ್ದೆಗಳ ಹೆಸರು ಮತ್ತು ವೇತನ;
    ಕಾರ್ಮಿಕ ಮತ್ತು ಸಮಾಜ ಕಲ್ಯಾಣದಲ್ಲಿ ಮುಖ್ಯ ಕಲ್ಯಾಣ ಅಧಿಕಾರಿ -ರೂ.69,700/-
    ಕಲ್ಯಾಣ ಅಧಿಕಾರಿ/ ಸುರಕ್ಷತಾ ಅಧಿಕಾರಿ – ರೂ.56,100/- ರಿಂದ ಪ್ರಾರಂಭವಾಗುತ್ತದೆ.

    ವಿದ್ಯಾರ್ಹತೆ: ಕಾರ್ಮಿಕ ಮತ್ತು ಸಮಾಜ ಕಲ್ಯಾಣದಲ್ಲಿ ಮುಖ್ಯ ಕಲ್ಯಾಣ ಅಧಿಕಾರಿ ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿ/ಡಿಪ್ಲೋಮಾ ಮಾಡಿರಬೇಕು.
    ಕಲ್ಯಾಣ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ಸಮಾಜ ವಿಜ್ಞಾನದಲ್ಲಿ ಸಂಬಂಧಿತ ವಿಷಯದಲ್ಲಿ ಡಿಪ್ಲೋಮಾ ಮಾಡಿರಬೇಕು.
    ಸುರಕ್ಷತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ಡಿಪ್ಲೋಮಾ ಇಂಜಿನಿಯರಿಂಗ್‌/ ತಂತ್ರಜ್ಞಾನ/ಭೌತಶಾಸ್ತ್ರ/ರಸಾಯನಶಾಸ್ತ್ರದಲ್ಲಿ ಮಾಡಿರಬೇಕು.

    ವಯೋಮಿತಿ:
    ಕಾರ್ಮಿಕ ಮತ್ತು ಸಮಾಜ ಕಲ್ಯಾಣದಲ್ಲಿ ಮುಖ್ಯ ಕಲ್ಯಾಣ ಅಧಿಕಾರಿ – 45 ವರ್ಷ ಮೀರಿರಬಾರದು.
    ಕಲ್ಯಾಣ ಅಧಿಕಾರಿ – 40 ವರ್ಷ ಮೀರಿರಬಾರದು.
    ಸುರಕ್ಷತಾ ಅಧಿಕಾರಿ – 40 ವರ್ಷ ಮೀರಿರಬಾರದು.

    ಅರ್ಜಿ ಶುಲ್ಕ: ಮೇಲೆ ತಿಳಿಸಿದ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳು ರೂ.300 ಅರ್ಜಿ ಶುಲ್ಕ ಪಾವತಿ ಮಾಡಬೇಕು. ಪೇ ಆರ್ಡರ್‌/ ಬ್ಯಾಂಕ್‌ ಡ್ರಾಫ್ಟ್‌ ಮೂಲಕ ಬೆಂಗಳೂರಿನಲ್ಲಿ ಪಾವತಿ ಮಾಡಬೇಕು. ಅಭ್ಯರ್ಥಿಗಳು ಪಾವತಿ ವಿಧಾನ ಅನುಸರಿಸುವುದು ಮುಖ್ಯ. ಬೇರೆ ಯಾವುದೇ ರೀತಿಯಲ್ಲಿ ಮಾಡಿದ ಪಾವತಿ ವಿಧಾನವನ್ನು ಅನುಸರಿಸುವುದಿಲ್ಲ. ಒಮ್ಮೆ ಶುಲ್ಕ ಪಾವತಿ ಮಾಡಿದರೆ ಮರುಪಾವತಿ ಮಾಡಲಾಗುವುದಿಲ್ಲ.

    ಆಯ್ಕೆ ಪ್ರಕ್ರಿಯೆ: ಶಾರ್ಟ್‌ಲಿಸ್ಟ್‌ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳು ಮತ್ತು ಅರ್ಜಿ ಶುಲ್ಕದೊಂದಿಗೆ ಕೊನೆಯ ದಿನಾಂಕದ ಮೊದಲು ಅಂಚೆ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಅರ್ಜಿ ಸಲ್ಲಿಸಬೇಕಾದ ವಿಳಾಸ: The Chief General Manager, Bharatiya Reserve Bank Note Mudran Private Limited No.3 & 4, I Stage, I Phase, B.T.M. Layout, Bannerghatta Road Post Box No. 2924, D.R. College P.O., Bengaluru 560 029.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • KHPT Jobs:  ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಸರಕಾರ

    KHPT Jobs: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಸರಕಾರ

    KHPT Recruitment 2024: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಮಾಹಿತಿಯನ್ನು ಆಧರಿಸಿ ಅರ್ಜಿ ಸಲ್ಲಿಸಬಹುದು. ಒಟ್ಟು 9 ಹುದ್ದೆಗಳು ಖಾಲಿ ಇದ್ದು, ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ, ಬೆಳಗಾವಿ-ಕರ್ನಾಟಕ, ಹಾವೇರಿ-ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಮೇಲ್ಕಂಡ ಹುದ್ದೆಯ ಕುರಿತು ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆನ್‌ಲೈನ್‌ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 06-05-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-05-2024
    ನರ್ಸ್‌ ಮೆಂಟರ್ಸ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 09-05-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-05-2024

    ಹುದ್ದೆಯ ವಿವರ ಇಲ್ಲಿದೆ:
    ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಇಲ್ಲಿ ಕ್ವಾಲಿಟೇಟಿವ್‌ ರಿಸರ್ಚ್‌ ಅಸೋಸಿಯೇಟ್‌, ತಾಂತ್ರಿಕ ಬೆಂಬಲ ಸಂಯೋಜಕರು, ನರ್ಸ್ ಮೆಂಟರ್ಸ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ: ಕ್ವಾಲಿಟೇಟಿವ್‌ ರಿಸರ್ಚ್‌ ಅಸೋಸಿಯೇಟ್‌- 1 ಹುದ್ದೆ
    ತಾಂತ್ರಿಕ ಬೆಂಬಲ ಸಂಯೋಜಕರು- 1 ಹುದ್ದೆ
    ನರ್ಸ್ ಮೆಂಟರ್ಸ್ – 7 ಹುದ್ದೆಗಳು

    ವೇತನ: KHPT ಮಾನದಂಡಗಳ ಪ್ರಕಾರ ಮೇಲ್ಕಂಡ ಹುದ್ದೆಗಳಿಗೆ ವೇತನ ನಿಗದಿಪಡಿಸಲಾಗಿದೆ.

    ವಿದ್ಯಾರ್ಹತೆ: ಕ್ವಾಲಿಟೇಟಿವ್‌ ರಿಸರ್ಚ್‌ ಅಸೋಸಿಯೇಟ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Phil, Ph.D ಅನ್ನು ಮಾಡಿರಬೇಕು.
    ಅಭ್ಯರ್ಥಿಗಳು ಸಮಾಜಶಾಸ್ತ್ರ, ಮಾನವಶಾಸ್ತ್ರ, ಸಾರ್ವಜನಿಕ ಆರೋಗ್ಯ, ಅಥವಾ ಯಾವುದೇ ಸಂಬಂಧಿತ ಸಾಮಾಜಿಕ ವಿಜ್ಞಾನಗಳಲ್ಲಿ 1-2 ವರ್ಷಗಳ ಅನುಭವವನ್ನು ಹೊಂದಿರಬೇಕು.
    ತಾಂತ್ರಿಕ ಬೆಂಬಲ ಸಂಯೋಜಕರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರಬೇಕು.
    ನರ್ಸ್‌ ಮೆಂಟರ್ಸ್‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, B.Sc ಪೂರ್ಣಗೊಳಿಸಿರಬೇಕು.

    ವಯೋಮಿತಿ: KHPT ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯನ್ನು ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ ನಿಯಮ ಪ್ರಕಾರ ನೀಡಲಾಗಿದೆ.

    ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ: ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

  • Court Jobs: ಮಂಡ್ಯದ ಕೋರ್ಟ್‌ನಲ್ಲಿ 41 ಹುದ್ದೆಗಳು ಖಾಲಿ ಇದೆ; ಈಗಲೇ ಅರ್ಜಿ ಸಲ್ಲಿಸಿ

    Court Jobs: ಮಂಡ್ಯದ ಕೋರ್ಟ್‌ನಲ್ಲಿ 41 ಹುದ್ದೆಗಳು ಖಾಲಿ ಇದೆ; ಈಗಲೇ ಅರ್ಜಿ ಸಲ್ಲಿಸಿ

    Mandya District Court Peon Recruitment 2024: ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 41 ಹುದ್ದೆಗಳು ಖಾಲಿ ಇದ್ದು ಆಸಕ್ತರು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. 41 ಜವಾನರು (ಪೀವನ್‌) ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಆರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 03-05-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-06-2024 (11.59 ರಾತ್ರಿ)
    ಆನ್‌ಲೈನ್‌ ಮೂಲಕ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 04-06-2024 (ರಾತ್ರಿ 11.59 ರವರೆಗೆ)

    ಹುದ್ದೆಯ ಕುರಿತ ವಿವರ ಇಲ್ಲಿದೆ: ಮಂಡ್ಯ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ 41 ಹುದ್ದೆಗಳು ಇದ್ದು, ಜವಾನ ಹುದ್ದೆಗೆ ಭರ್ತಿ ಮಾಡಲಾಗುವುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.17 ಸಾವಿರದಿಂದ ರೂ.28950 ರವರೆಗೆ ವೇತನ ಸಿಗಲಿದೆ.

    ಶೈಕ್ಷಣಿಕ ಅರ್ಹತೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಮಾಡಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು.

    ವಯೋಮಿತಿ: ಕನಿಷ್ಠ 18 ವರ್ಷ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗದವರಿಗೆ 35 ವರ್ಷ, ಒಬಿಸಿ ವರ್ಗದವರಿಗೆ 38 ವರ್ಷ, ಎಸ್‌ಸಿ/ಎಸ್‌ಟಿ, ಪ್ರವರ್ಗ-1-40 ವರ್ಷ ಗರಿಷ್ಠ ವಯೋಮಿತಿಯನ್ನು ಮೀರರಬಾರದು.

    ಆಯ್ಕೆ ಪ್ರಕ್ರಿಯೆ: ಎಸ್‌ಎಸ್‌ಎಲ್‌ಸಿ ತರಗತಿಯ ಗರಿಷ್ಠ ಅಂಕಗಳ ಆಧಾರದಲ್ಲಿ, ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್‌ ಮಾಡಲಾಗುವುದು. ನಂತರ ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.150, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1 ವಿಶೇಷ ಚೇತನ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಾಗಿಲ್ಲ.

  • Karnataka 1000 VAO Jobs: 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿಗೆ ದಿನಾಂಕ ವಿಸ್ತರಣೆ; ಹೊಸ ವೇಳಾಪಟ್ಟಿ ಇಲ್ಲಿದೆ

    Karnataka 1000 VAO Jobs: 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿಗೆ ದಿನಾಂಕ ವಿಸ್ತರಣೆ; ಹೊಸ ವೇಳಾಪಟ್ಟಿ ಇಲ್ಲಿದೆ

    Karnataka VA Recruitment 2024: ಕರ್ನಾಟಕ ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಈಗಾಗಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆಯನ್ನು ಮಾಡಿದೆ.

    ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 03-04-2024 ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿತ್ತು. ಆದರೆ ಆನ್‌ಲೈನ್‌ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಿ, ದಿನಾಂಕ 04-05-2024 ರ ವರೆಗೆ ಅರ್ಜಿಗೆ, 07-05-2024 ರವರೆಗೆ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲು ಕೋರಿದ್ದರಿಂದ ಈ ಕೆಳಗಿನಂತೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ.

    ಪ್ರಮುಖ ದಿನಾಂಕಗಳು:( ವಿಸ್ತರಣೆ ಮಾಡಿದ ದಿನಾಂಕ)
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2024
    ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 18-05-2024

    ಹುದ್ದೆಯ ವಿವರ ಇಲ್ಲಿದೆ; ಉಳಿಕೆ ಮೂಲ ವೃಂದ- 869 ಹುದ್ದೆಗಳು ಮತ್ತು ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ- 131 ಹುದ್ದೆಗಳು

    ವೇತನ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಯಾಗುವವರಿಗೆ ಮಾಸಿಕ ರೂ.21,400-42000ರೂ. ವೇತನ ದೊರಕಲಿದೆ.

    ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ-2ಎ/2ಬಿ/3ಎ/3ಬಿ) ಹುದ್ದೆಗೆ ಅಭ್ಯರ್ಥಿಗಳು ರೂ.750 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳು ರೂ.500 ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
    (ಓಮ್ಮೆ ಪಾವತಿ ಮಾಡಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ)

    ವಿದ್ಯಾರ್ಹತೆ: ವಿದ್ಯಾರ್ಹತೆಯ ಕುರಿತ ಹೆಚ್ಚಿನ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

    ವಯೋಮಿತಿ: ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ.
    ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
    ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

    ಆಯ್ಕೆ ವಿಧಾನ: ಮೇಲ್ಕಂಡ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್‌ -ಒಎಂಆರ್‌ ಮಾದರಿ ಮೂಲಕ ಪರೀಕ್ಷೆ ನಡೆಸಲಾಗುವುದು.

  • KPSC Jobs: ಕೆಪಿಎಸ್‌ಸಿ ಇಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಲಿಂಕ್‌ ಬಿಡುಗಡೆ; ಅರ್ಜಿ ಸಲ್ಲಿಸಲು ಮೇ.28 ಕೊನೆಯ ದಿನಾಂಕ

    KPSC Jobs: ಕೆಪಿಎಸ್‌ಸಿ ಇಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಲಿಂಕ್‌ ಬಿಡುಗಡೆ; ಅರ್ಜಿ ಸಲ್ಲಿಸಲು ಮೇ.28 ಕೊನೆಯ ದಿನಾಂಕ

    KPSC Recruitment 2024: ಕರ್ನಾಟಕ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿತ್ತು. ಇವೆಲ್ಲ ಹುದ್ದೆಗಳು ಪದವಿಗಿಂತ ಕಡಿಮೆ ವಿದ್ಯಾರ್ಹತೆಯನ್ನು ಒಳಗೊಂಡ ಹುದ್ದೆ. ಇದೀಗ ಈ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ ಲಿಂಕ್‌ ಬಿಡುಗಡೆಯನ್ನು ಮಾಡಲಾಗಿದೆ.

    ಯಾವೆಲ್ಲ ಹುದ್ದೆಗಳಿಗೆ ಆನ್‌ಲೈನ್‌ ಲಿಂಕ್‌ ಬಿಡುಗಡೆ ಮಾಡಲಾಗಿದೆ?
    ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ
    ಪದವಿ ಮಟ್ಟದ ಗ್ರೂಪ್‌ ಸಿ ವೃಂದದ ಹುದ್ದೆ – 313 RPC
    ಪದವಿ ಮಟ್ಟದ ಗ್ರೂಪ್‌ ಸಿ ವೃಂದದ ಅಧಿಸೂಚನೆ – 60 RPC, 16 HK
    ಹೈದರಾಬಾದ್‌ ಕರ್ನಾಟಕ ವೃಂದದ ಗ್ರೂಪ್‌ ಸಿ ಅಧಿಸೂಚನೆ – 97 HK
    ಗ್ರೂಪ್‌ ಎ ವೃಂದದ ಬ್ಯಾಕ್‌ಲಾಗ್‌ ಹುದ್ದೆಯ ಅಧಿಸೂಚನೆ – ಹೊಮಿಯೋಪತಿ ಅಸಿಸ್ಟೆಂಟ್‌ ಪ್ರೊಫೆಸರ್‌ (anatomy)
    ಗ್ರೂಪ್‌ ಬಿ ಹುದ್ದೆಗಳಿಗೆ ಅಧಿಸೂಚನೆ- 277 RPC, 50HK
    MVI ಹುದ್ದೆಗೆ ಅಧಿಸೂಚನೆ – ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ( 70RPC, 06HK)

    ಈ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ ಏನು? ವೇತನ ಎಷ್ಟು? ವಯೋಮಿತಿ ಇವೆಲ್ಲವನ್ನು ತಿಳಿಯಲು ಈ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-04-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-05-2024
    ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : 28-05-2024

    ಅರ್ಜಿದಾರರಿಗೆ ಸೂಚನೆ: ಅಭ್ಯರ್ಥಿಗಳು kpsconline.karnataka.gov.in ನಲ್ಲಿ ನೋಂದಾಯಿಸಲು ವಿನಂತಿಸಲಾಗಿದೆ. ನಮ್ಮ ಹಿಂದಿನ ವೆಬ್‌ಸೈಟ್‌ಗಳಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಮತ್ತೊಮ್ಮೆ ಹೊಸ ವೆಬ್‌ಸೈಟ್ನಲ್ಲಿ ಮರು ನೋದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ.