Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • KSRLPS recruitment 2024: ವಿವಿಧ 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಸರಕಾರ

    KSRLPS recruitment 2024: ವಿವಿಧ 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಸರಕಾರ

    KSRLPS Recruitment 2024: ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ (KSRLPS) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 34 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಶಿವಮೊಗ್ಗ-ಚಿಕ್ಕಮಗಳೂರು ಸರ್ಕಾರದಲ್ಲಿ ಈ ಮೇಲೆ ತಿಳಿಸಿದ ಹುದ್ದೆಗೆ ಅಭ್ಯರ್ಥಿಗಳ ಪೋಸ್ಟಿಂಗ್‌ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 10-Apr-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 14-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2024

    ಹುದ್ದೆಯ ಕುರಿತ ವಿವರ ಇಲ್ಲಿದೆ;
    ಹುದ್ದೆಯ ಹೆಸರು ಹಾಗೂ ಸಂಖ್ಯೆ: ಜಿಲ್ಲಾ ವ್ಯವಸ್ಥಾಪಕರು 2 ಹುದ್ದೆಗಳು, ಕಛೇರಿ ಸಹಾಯಕ 1 ಹುದ್ದೆಗಳು, ಬ್ಲಾಕ್ ಮ್ಯಾನೇಜರ್ 20 ಹುದ್ದೆಗಳು, ಕ್ಲಸ್ಟರ್ ಮೇಲ್ವಿಚಾರಕರು 8 ಹುದ್ದೆಗಳು, DEO/MIS ಸಂಯೋಜಕರು 3 ಹುದ್ದೆಗಳು. ಒಟ್ಟು 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆಯ ವಿವರಗಳು: ಜಿಲ್ಲಾ ವ್ಯವಸ್ಥಾಪಕ ಬಿ.ಎಸ್ಸಿ, ಎಂಎಸ್ಸಿ ಮಾಡಿರಬೇಕು. ಕಚೇರಿ ಸಹಾಯಕ ಪದವಿ ಮಾಡಿರಬೇಕು. ಬ್ಲಾಕ್ ಮ್ಯಾನೇಜರ್ B.Sc, M.Sc, ಮಾಸ್ಟರ್ಸ್‌ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು. ಕ್ಲಸ್ಟರ್ ಮೇಲ್ವಿಚಾರಕರು B.Sc, ಪದವಿ, M.Sc, ಸ್ನಾತಕೋತ್ತರ ಪದವಿ ಅರ್ಹತೆ ಹೊಂದಿರಬೇಕು. DEO/MIS ಸಂಯೋಜಕ ಪದವಿ, ಸ್ನಾತಕೋತ್ತರ ಪದವಿಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ವಯೋಮಿತಿ: ಅಭ್ಯರ್ಥಿಗಳು KSRLPS ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ವಯೋಮಿತಿ ಸಡಿಲಿಕೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಮೇಲೆ ತಿಳಿಸಿದ ಎಲ್ಲಾ ಹುದ್ದೆಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ksrlps.karnataka.gov.in ಗೆ ಭೇಟಿ ನೀಡಿ ತಿಳಿದುಕೊಳ್ಳಬಹುದು.

  • Jobs: ಜಿಲ್ಲಾ ಕೋರ್ಟ್‌ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ; ಸ್ಟೆನೋಗ್ರಾಫರ್‌, ಟೈಪಿಸ್ಟ್‌, ಗುಮಾಸ್ತ ಹುದ್ದೆ-10th, PU ಪಾಸಾಗಿದ್ರೆ 52ಸಾವಿರ ಸಂಬಳ

    Jobs: ಜಿಲ್ಲಾ ಕೋರ್ಟ್‌ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ; ಸ್ಟೆನೋಗ್ರಾಫರ್‌, ಟೈಪಿಸ್ಟ್‌, ಗುಮಾಸ್ತ ಹುದ್ದೆ-10th, PU ಪಾಸಾಗಿದ್ರೆ 52ಸಾವಿರ ಸಂಬಳ

    Tumkur District Court Recruitment 2024: ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 60 ಹುದ್ದೆಗಳು ಖಾಲಿ ಇದ್ದು, ಸ್ಟೆನೋಗ್ರಾಫರ್, ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ತುಮಕೂರು ಇಕೋರ್ಟ್ ಅರ್ಜಿಗಳನ್ನು ಆಹ್ವಾನಿಸಿದೆ. ತುಮಕೂರು – ಕರ್ನಾಟಕ ಸರ್ಕಾರದಲ್ಲಿ ಪೋಸ್ಟಿಂಗ್‌ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 10-Apr-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಈ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ-ಗ್ರೇಡ್‌ III, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 12-03-2024
    ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 10-04-2024

    ಹುದ್ದೆ ಹೆಸರು : ಶೀಘ್ರಲಿಪಿಗಾರ-ಗ್ರೇಡ್-‌III, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ ಹಾಗೂ ಸೇವಕ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ.

    ಹುದ್ದೆಗಳ ವಿವರ:
    1. ಶೀಘ್ರ ಲಿಪಿಗಾರ ಗ್ರೇಡ್‌ III (Stenographer Grade III)
    – ಹುದ್ದೆಗಳ ಸಂಖ್ಯೆ-10 (ಹೊಸ ಹುದ್ದೆ 6, ಬ್ಯಾಕ್‌ಲಾಗ್‌ ಹುದ್ದೆ 4)
    ವೇತನ : ರೂ.27650 -ರೂ.52650 ಶ್ರೇಣಿಯಲ್ಲಿ ವೇತನ ಸಿಗಲಿದೆ.
    ವಿದ್ಯಾರ್ಹತೆ: ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್‌ ಕಮರ್ಷಿಯಲ್‌ ಪ್ರಾಕ್ಟೀಸ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಹಿರಿಯ ಶ್ರೇಣಿ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
    ಆಯ್ಕೆ ವಿಧಾನ: ನೇರ ನೇಮಕಾತಿ, ಕೌಶಲ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    2. ಬೆರಳಚ್ಚುಗಾರ ಹುದ್ದೆ (Typist)
    ಹುದ್ದೆಗಳ ಸಂಖ್ಯೆ 05 (ಹೊಸ ಹುದ್ದೆ 4, ಬ್ಯಾಕ್‌ಲಾಗ್‌ ಹುದ್ದೆ 1)
    ವೇತನ: ರೂ.21400-ರೂ.42000 ವೇತನ ಶ್ರೇಣಿ ದೊರಕಲಿದೆ.
    ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ 3 ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
    ಆಯ್ಕೆ ವಿಧಾನ: ನೇರ ನೇಮಕಾತಿ, ಕೌಶಲ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    3. ಬೆರಳಚ್ಚು-ನಕಲುಗಾರ ಹುದ್ದೆ (Typist-copyist)
    ಹುದ್ದೆಗಳ ಸಂಖ್ಯೆ -05 ಹುದ್ದೆ (ಹೊಸ ಹುದ್ದೆ 3, ಬ್ಯಾಕ್‌ಲಾಗ್‌ ಹುದ್ದೆಗಳು 2)
    ವೇತನ: ರೂ.21400-ರೂ.42000 ಶ್ರೇಣಿಯಲ್ಲಿ ವೇತನ ಸಿಗಲಿದೆ.
    ವಿದ್ಯಾರ್ಹತೆ:
    ಶೈಕ್ಷಣಿಕ ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
    ಆಯ್ಕೆ ವಿಧಾನ: ನೇರ ನೇಮಕಾತಿ, ಕೌಶಲ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    4. ಸೇವಕ ಹುದ್ದೆ (Peon)
    ಹುದ್ದೆಗಳ ಸಂಖ್ಯೆ-40
    ವೇತನ ಶ್ರೇಣಿ: ರೂ.17000-ರೂ.28950
    ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆಯಲ್ಲಿ ಬರೆಯಲು ಓದಲು ತಿಳಿದಿರಬೇಕು.
    ಆಯ್ಕೆಯ ವಿಧಾನ: ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. ಸೇವಕ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಮೀಸಲಾತಿಗನುಗುಣವಾಗಿ 1 ಹುದ್ದೆಗೆ 10 ಅಭ್ಯರ್ಥಿಗಳನ್ನು (1:10ರ ಅನುಪಾತದಲ್ಲಿ) ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 10ನೇ ತರಗತಿಯ ಅಂಕಗಳು ಶ್ರೇಣಿಯಲ್ಲಿದ್ದರೆ (Grade) ಅದನ್ನು ಅಂಕಗಳಾಗಿ ಪರಿವರ್ತಿಸಿ ಗರಿಷ್ಠ ಅಂಕಗಳು, ಪಡೆದ ಅಂಕಗಳು ಮತ್ತು ಶೇಕಡಾವಾರು ನಮೂದುಗಳನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ನಮೂದಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುವುದು.

    ವಯೋಮಿತಿ: ಮೇಲಿನ ಎಲ್ಲಾ ಹುದ್ದೆಗಳಿಗೆ ಕನಿಷ್ಠ ವಯೋಮಿತಿ 18 ವರ್ಷ
    ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ
    ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ
    ಪ.ಜಾ,ಪ.ಪಂ ಮತ್ತ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
    ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.

    ಅರ್ಜಿ ಶುಲ್ಕ:
    ಪ್ರವರ್ಗ-2ಎ,2ಬಿ,3ಎ,3ಬಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.200, ಪ.ಜಾ, ಪ.ಪಂ, ಪ್ರವರ್ಗ-I ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.

    ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು https://tumakuru.dcourts.gov.in ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online payment through Net Banking/ Credit Card/ Debit Card/UPI ID/QR Code ಸೌಲಭ್ಯದ ಮೂಲಕ ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ Demond Draft, Postal Order, Money Order, Challan ಇತ್ಯಾದಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

    ಅಭ್ಯರ್ಥಿಗಳು ಕೌಶಲ ಪರೀಕ್ಷೆ/ ಸಂದರ್ಶನ/ ದಾಖಲೆ ಪರಿಶೀಲನೆ ಸಮಯದಲ್ಲಿ ಈ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು:
    ಆನ್‌ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯ ಪ್ರತಿ
    ಶುಲ್ಕವನ್ನು ಪಾವತಿಸಿದ ರಶೀದಿಯ ಪ್ರತಿ
    ಎಸ್.ಎಸ್.ಎಲ್.ಸಿ/ ತತ್ಸಮಾನ ಅಂಕಪಟ್ಟಿ
    ದ್ವಿತೀಯ ಪಿ.ಯು.ಸಿ/ ತತ್ಸಮಾನ ಅಂಕಪಟ್ಟಿ

    ಅರ್ಜಿ ಸಲ್ಲಿಸುವುದು ಹೇಗೆ?
    ಅರ್ಜಿಗಳನ್ನು ಅಭ್ಯರ್ಥಿಗಳು ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವೆಬ್‌ಸೈಟ್‌ https://tumakuru.dcourts.gov.in ನಲ್ಲೆ ನೀಡಲಾದ ಲಿಂಕ್‌ ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ 12/03/2024 ರಿಂದ 10/04/2024 ರ ರಾತ್ರಿ 11.59 ರೊಳಗೆ ಸಲ್ಲಿಸಬೇಕು.

  • RGUHS Recruitment 2024: ಕೆಇಎ ಇಂದ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

    RGUHS Recruitment 2024: ಕೆಇಎ ಇಂದ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

    RGUHS Recruitment 2024: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 44 ಹುದ್ದೆಗಳು ಖಾಲಿ ಇದ್ದು, ಜೂನಿಯರ್ ಅಸಿಸ್ಟೆಂಟ್, ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತಿದೆ. RGUHS ಅಧಿಕೃತ ಅಧಿಸೂಚನೆಯ ಮೂಲಕ ಮಾರ್ಚ್ 2024 ರ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳು 25-Apr-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-04-2024
    ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 26-04-2024

    ಹುದ್ದೆಗಳ ವಿವರ ಇಲ್ಲಿದೆ;
    ಹುದ್ದೆಯ ಹೆಸರು ಮತ್ತು ಸಂಖ್ಯೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (RGUHS) ದಲ್ಲಿ 44 ಹುದ್ದೆಗಳು ಖಾಲಿ ಇದ್ದು, ಕಿರಿಯ ಸಹಾಯಕ, ಸಹಾಯಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಪೋಸ್ಟ್ ಹೆಸರು:
    ಜೂನಿಯರ್ ಪ್ರೋಗ್ರಾಮರ್ (ಗ್ರೂಪ್‌-ಬಿ) 5, ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್‌-ಬಿ) 1, ಸಹಾಯಕ ಗ್ರಂಥಪಾಲಕ (ಗ್ರೂಪ್‌-C) 1, ಸಹಾಯಕ (ಗ್ರೂಪ್‌-C) 12, ಕಿರಿಯ ಸಹಾಯಕ (ಗ್ರೂಪ್‌-C) 25 ಹುದ್ದೆಗಳು ಖಾಲಿ ಇದೆ.

    ವಿದ್ಯಾರ್ಹತೆ: ಜೂನಿಯರ್ ಪ್ರೋಗ್ರಾಮರ್ (ಗ್ರೂಪ್‌-ಬಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಅಥವಾ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಜಿನಿಯರಿಂಗ್ ಪದವಿ, MCA ಮಾಡಿರಬೇಕು.
    ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್‌ -ಬಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್‌ನಲ್ಲಿ ಎಂಜಿನಿಯರಿಂಗ್ ಪದವಿ ಮಾಡಿರುವವರು ಅರ್ಜಿ ಸಲ್ಲಿಸಬಹುದು.
    ಸಹಾಯಕ ಗ್ರಂಥಪಾಲಕ (ಗ್ರೂಪ್‌-C) ಹುದ್ದೆಗೆ ಅರ್ಜಿ ಸಲ್ಲಿಸುವವರು ಗ್ರಂಥಾಲಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.
    ಸಹಾಯಕ (ಗ್ರೂಪ್‌-ಸಿ) ಹುದ್ದೆಗೆ ಪದವಿ ಮಾಡಿರಬೇಕು.
    ಜೂನಿಯರ್ ಅಸಿಸ್ಟೆಂಟ್ (ಗ್ರೂಪ್-ಸಿ) ಹುದ್ದೆಗೆ ಪಿಯುಸಿ‌ ಮಾಡಿರುವವರು ಅರ್ಜಿ ಸಲ್ಲಿಸಲು ಅರ್ಹರು.

    ವಯೋಮಿತಿ: ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. SC/ST/Cat-I ಅಭ್ಯರ್ಥಿಗಳಿಗೆ 05 ವರ್ಷ, Cat-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: SC/ST/Cat-I/PWD ಅಭ್ಯರ್ಥಿಗಳು ರೂ.500/-, ಸಾಮಾನ್ಯ/OBC ಅಭ್ಯರ್ಥಿಗಳಿಗೆ ರೂ.750/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ: ಜೂನಿಯರ್ ಪ್ರೋಗ್ರಾಮರ್ (Grop-ಬಿ), ಸಹಾಯಕ ಇಂಜಿನಿಯರ್ (ಸಿವಿಲ್) (Group-ಬಿ) ಹುದ್ದೆಗೆ ರೂ.43100-83900/- ವೇತನ ನಿಗದಿಪಡಿಸಲಾಗಿದೆ. ಸಹಾಯಕ ಗ್ರಂಥಪಾಲಕ (Group-C) ಹುದ್ದೆಗೆ ರೂ.30350-58250/- ವೇತನ, ಸಹಾಯಕ (Group-C) ರೂ.37900-70850/- ವೇತನ, ಕಿರಿಯ ಸಹಾಯಕ (Group-C) ರೂ.21400-42000/- ವೇತನ ಸಿಗಲಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • HGML Recruiment 2024: ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ; ಮಾಸಿಕ ರೂ.48ಸಾವಿರ ಸಂಬಳ

    HGML Recruiment 2024: ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ; ಮಾಸಿಕ ರೂ.48ಸಾವಿರ ಸಂಬಳ

    HGML Recruiment 2024: ಹಟ್ಟಿ ಗೋಲ್ಡ್‌ ಮೈನ್ಸ್‌ ಕಂಪನಿ ಲಿ.,(Hutti Gold Mines Company Limited) ನಿಂದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 168 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ HGML ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಸಹಾಯಕ ಫೋರ್‌ಮನ್, ITI ಫಿಟ್ಟರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ರಾಯಚೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲಿಚ್ಛಿಸುವವರು ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 03-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 19-03-2024
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03-05-2024

    ಹುದ್ದೆಯ ವಿವರ ಈ ಕೆಳಗೆ ನೀಡಲಾಗಿದೆ;
    ಹುದ್ದೆಯ ಹೆಸರು: ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ (HGML) ನಲ್ಲಿ ಒಟ್ಟು 168 ಹುದ್ದೆಗಳು ಖಾಲಿ ಇದ್ದು, ಸಹಾಯಕ ಫೋರ್‌ಮನ್‌, ಐಟಿಐ ಫಿಟ್ಟರ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.20920-48020/- ವೇತನ ಸಿಗಲಿದೆ

    HGML ಹುದ್ದೆಯ ಕಂಪ್ಲೀಟ್‌ ವಿವರ ಇಲ್ಲಿದೆ.
    ಸಹಾಯಕ ಫೋರ್‌ಮನ್ (ಗಣಿ) 16 ಹುದ್ದೆಗಳು, ಸಹಾಯಕ ಫೋರ್‌ಮ್ಯಾನ್ (ಲೋಹಶಾಸ್ತ್ರ) 7 ಹುದ್ದೆಗಳು, ಲ್ಯಾಬ್ ಅಸಿಸ್ಟೆಂಟ್ 1 ಹುದ್ದೆ, ಸಹಾಯಕ ಫೋರ್‌ಮ್ಯಾನ್ (ಭೂವಿಜ್ಞಾನ) 3 ಹುದ್ದೆಗಳು, ಸಹಾಯಕ ಫೋರ್‌ಮನ್ (ಡೈಮಂಡ್ ಡ್ರಿಲ್ಲಿಂಗ್/ಅಂಡರ್‌ಗ್ರೌಂಡ್) 2 ಹುದ್ದೆಗಳು, ಸಹಾಯಕ ಫೋರ್‌ಮನ್ (ಮೆಕ್ಯಾನಿಕಲ್) 19 ಹುದ್ದೆಗಳು, ITI ಫಿಟ್ಟರ್ (ಗಣಿಗಾರಿಕೆ) 56 ಹುದ್ದೆಗಳು, ITI ಫಿಟ್ಟರ್ (ಲೋಹ) 26 ಹುದ್ದೆಗಳು, ITI ಎಲೆಕ್ಟ್ರಿಕಲ್ 4 ಹುದ್ದೆಗಳು, ಸಹಾಯಕ ಫೋರ್‌ಮನ್ (ಸಿವಿಲ್) 1 ಹುದ್ದೆ, ಸಹಾಯಕ ಫೋರ್‌ಮ್ಯಾನ್ (ಎಲೆಕ್ಟ್ರಿಕಲ್) 1 ಹುದ್ದೆ, ಭದ್ರತಾ ನಿರೀಕ್ಷಕ 6 ಹುದ್ದೆಗಳು, ITI ಫಿಟ್ಟರ್ (ಸಮೀಕ್ಷೆ) 2 ಹುದ್ದೆಗಳು,
    ಭದ್ರತಾ ಸಿಬ್ಬಂದಿ 24 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಶೈಕ್ಷಣಿಕ ಅರ್ಹತೆ: ಹುದ್ದೆಗೆ ಅನುಸಾರವಾಗಿ ಅಭ್ಯರ್ಥಿಗಳು ವಿದ್ಯಾರ್ಹತೆಯನ್ನು ಹೊಂದಿರಬೇಕು.

    ವಯೋಮಿತಿ: ಅಭ್ಯರ್ಥಿಗಳ ವಯೋಮಿತಿಯು 35 ವರ್ಷ ಮೀರಿರಬಾರದು. CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷ, SC/ST/Cat-1 ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: SC/ST/Cat-I/Ex-Servicemen/PWD ಅಭ್ಯರ್ಥಿಗಳಿಗೆ ರೂ.100/-, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ರೂ.300/-, ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಅರ್ಜಿ ಶುಲ್ಕ ವಿಧಿಸಲಾಗಿದೆ. ಆನ್‌ಲೈನ್‌ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ: ಸಹಾಯಕ ಫೋರ್‌ಮನ್ (ಗಣಿ), ಸಹಾಯಕ ಫೋರ್‌ಮನ್ (ಲೋಹಶಾಸ್ತ್ರ), ಲ್ಯಾಬ್ ಸಹಾಯಕ, ಸಹಾಯಕ ಫೋರ್‌ಮ್ಯಾನ್ (ಭೂವಿಜ್ಞಾನ), ಸಹಾಯಕ ಫೋರ್‌ಮನ್ (ಡೈಮಂಡ್ ಡ್ರಿಲ್ಲಿಂಗ್/ಅಂಡರ್‌ಗ್ರೌಂಡ್), ಸಹಾಯಕ ಫೋರ್‌ಮನ್ (ಮೆಕ್ಯಾನಿಕಲ್) ಹುದ್ದೆಗಳಿಗೆ ಮಾಸಿಕ ರೂ. 25000-48020/- ವೇತನ ಸಿಗಲಿದೆ.
    ITI ಫಿಟ್ಟರ್ (ಗಣಿಗಾರಿಕೆ), ITI ಫಿಟ್ಟರ್ (ಲೋಹ), ಐಟಿಐ ಎಲೆಕ್ಟ್ರಿಕಲ್ ಹುದ್ದೆಗಳಿಗೆ ಆಯ್ಕೆಯಾದವರಿಗೆ ರೂ.20920-42660/- ವೇತನ ಸಿಗಲಿದೆ.
    ಸಹಾಯಕ ಫೋರ್‌ಮನ್ (ಸಿವಿಲ್), ಸಹಾಯಕ ಫೋರ್‌ಮ್ಯಾನ್ (ಎಲೆಕ್ಟ್ರಿಕಲ್), ಭದ್ರತಾ ನಿರೀಕ್ಷಕ ಹುದ್ದೆಗೆ ರೂ.25000-48020/- ಮಾಸಿಕ ವೇತನವಿರಲಿದೆ.
    ITI ಫಿಟ್ಟರ್ (ಸರ್ವೆ), ಭದ್ರತಾ ಸಿಬ್ಬಂದಿ ರೂ.20920-42660/- ಮಾಸಿಕ ವೇತನವಿರಲಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ. non local application ಈ ಲಿಂಕ್‌ ಕ್ಲಿಕ್‌ ಮಾಡಿ

  • KPSC Group C Recruitment 2024: ಕೆಪಿಎಸ್‌ಸಿ ಇಂದ ವಿವಿಧ ಇಲಾಖೆಗಳಲ್ಲಿನ ಖಾಲಿ ಇರುವ ಹುದ್ದೆಗಳಿಗೆ ಭರ್ಜರಿ ನೇಮಕಾತಿ

    KPSC Group C Recruitment 2024: ಕೆಪಿಎಸ್‌ಸಿ ಇಂದ ವಿವಿಧ ಇಲಾಖೆಗಳಲ್ಲಿನ ಖಾಲಿ ಇರುವ ಹುದ್ದೆಗಳಿಗೆ ಭರ್ಜರಿ ನೇಮಕಾತಿ

    KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗವು (KPSC) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 486 ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನಿಯರ್ ಇಂಜಿನಿಯರ್, ಇಂಡಸ್ಟ್ರಿಯಲ್ ಎಕ್ಸ್‌ಟೆನ್ಶನ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 28-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 29-04-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-05-2024

    KPSC ಇಲಾಖೆಗಳ ಆಧಾರದ ಮೇಲೆ ಹುದ್ದೆಯ ವಿವರಗಳು

    1. ಅಂತರ್ಜಲ ನಿರ್ದೇಶನಾಲಯ 5 ಹುದ್ದೆ
    2. ಪೌರಾಡಳಿತ ನಿರ್ದೇಶನಾಲಯ 84 ಹುದ್ದೆಗಳು
    3. ಸಾರ್ವಜನಿಕ ಗ್ರಂಥಾಲಯ ಇಲಾಖೆ 34 ಹುದ್ದೆಗಳು
    4. ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆ 63 ಹುದ್ದೆಗಳು
    5. ಜಲಸಂಪನ್ಮೂಲ ಇಲಾಖೆ 300 ಹುದ್ದೆಗಳು

    ಪೋಸ್ಟ್‌ಗಳ ಆಧಾರದ ಮೇಲೆ ಕೆಪಿಎಸ್‌ಸಿ ಹುದ್ದೆಗಳು

    1. ಜೂನಿಯರ್ ಇಂಜಿನಿಯರ್ (Junior Engineer) -341 ಹುದ್ದೆಗಳು
    2. ನೀರು ಸರಬರಾಜುದಾರರು (Water Suppliers) – 4 ಹುದ್ದೆ
    3. ಅಧೀನ ನೀರು ಸರಬರಾಜುದಾರರು( Subsidiary Water Suppliers)- 5 ಹುದ್ದೆ
    4. ಕಿರಿಯ ಆರೋಗ್ಯ ನಿರೀಕ್ಷಕರು (Junior Health Inspectors)- 39 ಹುದ್ದೆಗಳು
    5. ಸಹಾಯಕ ಗ್ರಂಥಪಾಲಕರು (Assistant Librarian)- 21 ಹುದ್ದೆಗಳು
    6. ಕೈಗಾರಿಕಾ ವಿಸ್ತರಣಾ ಅಧಿಕಾರಿ (Industrial Extention Officer) – 63 ಹುದ್ದೆಗಳು
    7. ಗ್ರಂಥಪಾಲಕ (Librarian)- 13 ಹುದ್ದೆಗಳು

    ವಿದ್ಯಾರ್ಹತೆ:

    1. ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, ಇಂಜಿನಿಯರಿಂಗ್ ಪದವಿ ಪಾಸ್‌ ಮಾಡಿರಬೇಕು.
    2. ನೀರು ಸರಬರಾಜುದಾರರು, ಸಹಾಯಕ ನೀರು ಸರಬರಾಜುದಾರರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC, ITI ತೇರ್ಗಡೆ ಹೊಂದಿರಬೇಕು.
    3. ಕಿರಿಯ ಆರೋಗ್ಯ ನಿರೀಕ್ಷಕರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC, PUC, ಡಿಪ್ಲೊಮಾ ಮಾಡಿರಬೇಕು.
    4. ಸಹಾಯಕ ಗ್ರಂಥಪಾಲಕರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ]ಡಿಪ್ಲೋಮಾ ಇನ್‌ ಲೈಬ್ರರಿ ಸೈನ್ಸ್‌ ಮಾಡಿರಬೇಕು.
    5. ಕೈಗಾರಿಕಾ ವಿಸ್ತರಣಾ ಅಧಿಕಾರಿ ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ಅಥವಾ ವಾಣಿಜ್ಯ ಅಥವಾ ವ್ಯವಹಾರ ಆಡಳಿತದಲ್ಲಿ ಪದವಿ, ಎಂಜಿನಿಯರಿಂಗ್ ಪದವಿ ಪಡೆದಿರಬೇಕು.
    6. ಗ್ರಂಥಪಾಲಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಡಿಗ್ರಿ ಇನ್‌ ಲೈಬ್ರರಿ ಸೈನ್ಸ್‌ ನಲ್ಲಿ ಪದವಿ ಪಡೆದಿರಬೇಕು.

    ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. SC/ST/Cat-1 ಅಭ್ಯರ್ಥಿಗಳಿಗೆ 05 ವರ್ಷ, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷ, PWD/ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: SC/ST/Cat-I/PWD ಅಭ್ಯರ್ಥಿಗಳು ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಮಾಜಿ ಸೈನಿಕ ಅಭ್ಯರ್ಥಿಗಳು ರೂ.50/-, Cat-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ರೂ.300/-, ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ ವಿವರ: ಜೂನಿಯರ್ ಇಂಜಿನಿಯರ್ ರೂ.33450-62600/-, ನೀರು ಸರಬರಾಜುದಾರರು ರೂ.27650-52650/-, ಸಹಾಯಕ ನೀರು ಸರಬರಾಜುದಾರರು ರೂ.21400-42000/-, ಕಿರಿಯ ಆರೋಗ್ಯ ನಿರೀಕ್ಷಕರು ರೂ.23500-47650/-, ಸಹಾಯಕ ಗ್ರಂಥಪಾಲಕ ರೂ.30350-58250/-, ಕೈಗಾರಿಕಾ ವಿಸ್ತರಣಾಧಿಕಾರಿ ರೂ.33450-62600/-, ಗ್ರಂಥಪಾಲಕ ರೂ.37900-70850/ ಮಾಸಿಕ ವೇತನ ನಿಗದಿಪಡಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್‌ ಕ್ಲಿಕ್ ಮಾಡಿ

    ನೋಟಿಫಿಕೇಶನ್‌ ಗ್ರೂಪ್‌ ಸಿ (HK) with below degree qualification
    ನೋಟಿಫಿಕೇಶನ್‌ ಗ್ರೂಪ್‌ ಸಿ (RPC) with degree qualification
    ನೋಟಿಫಿಕೇಶನ್‌ ಗ್ರೂಪ್‌ ಸಿ (HK) with degree qualification
    ನೋಟಿಫಿಕೇಶನ್‌ ಗ್ರೂಪ್‌ ಸಿ (RPC) with below degree qualification

  • Karnataka Pdo Recruitment 2024: ಕೆಪಿಎಸ್‌ಸಿ ಇಂದ ಪಿಡಿಒ ಹುದ್ದೆಗಳ ನೇಮಕಾತಿ; ಡಿಗ್ರಿ ಪಾಸಾದವರಿಗೆ ಜಾಬ್‌, ವೇತನ ರೂ.70,850

    Karnataka Pdo Recruitment 2024: ಕೆಪಿಎಸ್‌ಸಿ ಇಂದ ಪಿಡಿಒ ಹುದ್ದೆಗಳ ನೇಮಕಾತಿ; ಡಿಗ್ರಿ ಪಾಸಾದವರಿಗೆ ಜಾಬ್‌, ವೇತನ ರೂ.70,850

    KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗವು (KPSC) ತನ್ನ ಅಧಿಕೃತ ಅಧಿಸೂಚನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 247 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ʼಪಂಚಾಯತ್‌ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 15-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-04-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024

    ಹುದ್ದೆಯ ವಿವರ;
    ಹುದ್ದೆ ಹೆಸರು:
    ಪಂಚಾಯತ್‌ ಡೆವಲಪ್‌ಮೆಂಟ್‌ ಆಫೀಸರ್‌ (HK)-97 ಹುದ್ದೆ
    ಪಂಚಾಯತ್‌ ಡೆವಲಪ್‌ಮೆಂಟ್‌ ಆಫೀಸರ್‌ (RPC)- 150 ಹುದ್ದೆ
    ಒಟ್ಟು 247 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

    ವೇತನ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.37,900-ರೂ.70,850 ವೇತನವಿರಲಿದೆ.

    ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ, ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. SC/ST/Cat-1 ಅಭ್ಯರ್ಥಿಗಳಿಗೆ 05 ವರ್ಷ, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷ, PWD/ವಿಧವೆ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಶೈಕ್ಷಣಿಕ ಅರ್ಹತೆ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

    ಅರ್ಜಿ ಶುಲ್ಕ:
    SC/ST/Cat-I/PWD ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-, ಸಾಮಾನ್ಯ ಅಭ್ಯರ್ಥಿಗಳು: ರೂ.600/- ಅರ್ಜಿ ಶುಲ್ಕ ಪಾವತಿ ಮಾಡಬೇಕು. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಪಿಡಿಒ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ
    ನೋಟಿಫಿಕೇಶನ್‌ -HK
    ನೋಟಿಫಿಕೇಶನ್‌ -RPC
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ