Category: KPSC

  • KPSC Job: ಕೆಪಿಎಸ್‌ಸಿ ಇಂದ 364 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

    KPSC Job: ಕೆಪಿಎಸ್‌ಸಿ ಇಂದ 364 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

    Karnataka SSLR Recruitment 2024: ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 364 ಲ್ಯಾಂಡ್‌ ಸರ್ವೇಯರ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲು ಇಚ್ಛಿಸುವವರು ಈ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 10-Apr-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2024
    ಭೂಮಾಪಕರ (HK) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 06-Jul-2024
    ಭೂಮಾಪಕರ (HK) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 07-Jul-2024
    ಭೂಮಾಪಕರ (RPC) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 20-ಜುಲೈ-2024
    ಭೂಮಾಪಕರ (RPC) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 21-ಜುಲೈ-2024

    ಹುದ್ದೆಯ ಈ ಕೆಳಗೆ ನೀಡಲಾಗಿದೆ.
    ಭೂಮಾಪಕರ ಹುದ್ದೆ:
    ಹೈದರಾಬಾದ್‌ -ಕರ್ನಾಟಕ ವೃಂದ (HK)-100
    ಉಳಿಕೆ ಮೂಲ ವೃಂದ (RPC)-264

    ಶೈಕ್ಷಣಿಕ ಅರ್ಹತೆ:
    ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ITI, 12th, ಡಿಪ್ಲೊಮಾ, B.E ಅಥವಾ B.Tech ಸಿವಿಲ್ ಇಂಜಿನಿಯರಿಂಗ್ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
    CAT-2ಎ/2ಬಿ/3ಎ/3ಬಿ- 03 ವರ್ಷ, SC/ST/Cat-1- 05 ವರ್ಷ, PWD/ವಿಧವೆ- 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: SC/ST/Cat-I/PWD ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300, ಸಾಮಾನ್ಯ ಅಭ್ಯರ್ಥಿಗಳು: ರೂ.600/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್‌ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಸೂಚಿಸಲಾಗಿದೆ.

    ವೇತನ: ಅಭ್ಯರ್ಥಿಗಳಿಗೆ ಮಾಸಿಕ ರೂ.23,500-ರೂ.47,650 ಶ್ರೇಣಿಯಲ್ಲಿ ವೇತನ ನೀಡಲಾಗುವುದು.

    ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಲಿಂಕ್‌ಗೆ ಕ್ಲಿಕ್‌ ಮಾಡಿ
    ಭೂ ಮಾಪಕ (HK), ಭೂ ಮಾಪಕ (RPC) ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

  • KAS Jobs 2024: ಕೆಪಿಎಸ್‌ಸಿ ಇಂದ ಕೆಎಎಸ್‌ ಹುದ್ದೆಗಳ ನೇಮಕ; 384 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

    KAS Jobs 2024: ಕೆಪಿಎಸ್‌ಸಿ ಇಂದ ಕೆಎಎಸ್‌ ಹುದ್ದೆಗಳ ನೇಮಕ; 384 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

    Karnataka KAS Jobs 2024: ಕರ್ನಾಟಕ ಗೆಜೆಟೆಡ್‌ ಪ್ರೊಬೆಷನರ್‌ ನಿಯಮಗಳಡಿಯಲ್ಲಿ ಗೆಜೆಟೆಡ್‌ ಪ್ರೊಬೆಷನರ್‌ 2023-24 ನೇ ಸಾಲಿನ ಹುದ್ದೆಗಳನ್ನು ಭರ್ತಿ ಮಾಡಲು ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಒಟ್ಟು 384 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಆರಂಭಿಕ ದಿನಾಂಕ; 04-03-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2024
    ಪೂರ್ವಭಾವಿ ಪರೀಕ್ಷಾ ದಿನಾಂಕ (ತಾತ್ಕಾಲಿಕ) : 05-05-2024

    ಹುದ್ದೆಗಳ ವಿವರ;
    ಹುದ್ದೆ ಹೆಸರು: ಗೆಜೆಟೆಡ್‌ ಪ್ರೊಬೆಷನರ್‌ (ಕೆಎಎಸ್‌ ಹುದ್ದೆಗಳು) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ:
    ಗ್ರೂಪ್‌ ಎ ಹುದ್ದೆಗಳು: 159
    ಗ್ರೂಪ್‌ ಬಿ ಹುದ್ದೆಗಳು: 225

    ವಿದ್ಯಾರ್ಹತೆ: ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
    ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷಗಳು, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 41 ವರ್ಷಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷಗಳು

    ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.600, ಪ್ರವರ್ಗ 2(ಎ),2(ಬಿ),3(ಎ),3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ನೆಟ್‌ಬ್ಯಾಂಕಿಂಗ್‌, ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌,ಯುಪಿಐ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
    ಹೊಸದಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅರ್ಜಿದಾರರು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ https://kpsconline.karnataka.gov.in ಗೆ ಭೇಟಿ ನೀಡಬೇಕು ಮತ್ತು ತಮ್ಮನ್ನು ನೋಂದಾಯಿಸಿಕೊಳ್ಳಲು New Registration ಲಿಂಕ್‌ಅನ್ನು ಕ್ಲಿಕ್ ಮಾಡಬೇಕು.
    ನೋಂದಣಿ ಮತ್ತು ಲಾಗಿನ್‌ ರುಜುವಾತುಗಳನ್ನು ಮಾಡಲು ಇಮೇಲ್‌ ಐಡಿ ಮತ್ತು ಮೊಬೈಲ್‌ ಸಂಖ್ಯೆಯನ್ನು ಇಟ್ಟುಕೊಳ್ಳಬೇಕು.
    ಒಮ್ಮೆ ನೋಂದಾಯಿಸಿದ ಮತ್ತು ಲಾಗಿನ್‌ ಆದ ನಂತರ ಅರ್ಜಿದಾರರ ವಿವರಗಳ ನೋಂದಣಿ ಕ್ಲಿಕ್‌ ಮಾಡಿ ಅಲ್ಲಿ ಕೇಳಲಾದ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಬೇಕು.
    ಅಭ್ಯರ್ಥಿಗಳು ಒಮ್ಮೆ ಮಾತ್ರ ಅರ್ಜಿ ಭರ್ತಿ ಮಾಡಬೇಕಾಗುತ್ತದೆ. ಹಾಗಾಗಿ ನಿಮ್ಮ user id ಮತ್ತು passoword ಗಳನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು.
    ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಎಲ್ಲಾ ವಿವರಗಳು ಸರಿಯಾಗಿದೆಯೇ ಎಂದು ಪರಿಶೀಲಿಸಬೇಕು. ಅನಂತರ ಸಲ್ಲಿಸು ಬಟನ್‌ ಕ್ಲಿಕ್‌ ಮಾಡಬೇಕು. ಸಲ್ಲಿಸಿದ ನಂತರ ವಿವರಗಳನ್ನು ತಪ್ಪಾಗಿ ಸಲ್ಲಿಸಿದ್ದಲ್ಲಿ ಸರಿಪಡಿಸಿಕೊಳ್ಳಲು ಆಯೋಗಕ್ಕೆ ಪತ್ರ ವ್ಯವಹಾರ ಅಥವಾ ಇ-ಮೇಲ್‌ ಮೂಲಕ ಕಳುಹಿಸುವ ಕೋರಿಕೆಯನ್ನು ಪರಿಗಣಿಸಲಾಗುವುದಿಲ್ಲ.

    ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಭರ್ತಿ ಮಾಡಿ, ಭಾವಚಿತ್ರ./ಸಹಿ/ವಯೋಮಿತಿ/ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಅಪ್ಲೋಡ್‌ ಮಾಡಿದ ನಂತರ ಶುಲ್ಕವನ್ನು ನೆಟ್‌ಬ್ಯಾಂಕಿಂಗ್‌/ಡೆಬಿಟ್‌ ಕಾರ್ಡ್‌/ಕ್ರೆಡಿಟ್‌ ಕಾರ್ಡ್‌/ಯುಪಿಐ ಮೂಲಕ ಸಂದಾಯ ಮಾಡಬಹುದು.

    ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು/ಭಾವಚಿತ್ರ/ಸಹಿಯನ್ನು ಅಪ್ಲೋಡ್‌ ಮಾಡದೇ ಇರುವ ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್‌ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತೊಂದರೆ ಉಂಟಾದಲ್ಲಿ ಈ ಕೆಳಕಂಡ ಹೆಲ್ಪ್‌ಲೈನ್‌ ನಂಬರ್‌ ಅನ್ನು ಸಂಪರ್ಕಿಸಲು ಸೂಚಿಸಲಾಗಿದೆ. 080-30574957/30574901

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • ಕೆಪಿಎಸ್‌ಸಿ ವಾಣಿಜ್ಯ ತೆರಿಗೆ ಇನ್‌ಸ್ಪೆಕ್ಟರ್‌ ಹುದ್ದೆಗಳ ನೇಮಕ ಪರೀಕ್ಷೆ- ಉತ್ತರ ಕೀ ಪ್ರಕಟ

    ಕೆಪಿಎಸ್‌ಸಿ ವಾಣಿಜ್ಯ ತೆರಿಗೆ ಇನ್‌ಸ್ಪೆಕ್ಟರ್‌ ಹುದ್ದೆಗಳ ನೇಮಕ ಪರೀಕ್ಷೆ- ಉತ್ತರ ಕೀ ಪ್ರಕಟ

    ಕರ್ನಾಟಕ ಲೋಕ ಸೇವಾ ಆಯೋಗವು ವಾಣಿಜ್ಯ ತೆರಿಗೆ ಇನ್‌ಸ್ಪೆಕ್ಟರ್‌ ಹುದ್ದೆಗಳ ನೇಮಕಕ್ಕೆ ಸಂಬಂಧಪಟ್ಟಂತೆ ಉತ್ತರ ಕೀ ಪ್ರಕಟಿಸಿದೆ. ಒಟ್ಟು 245 ಹುದ್ದೆಗಳ ನೇಮಕಕ್ಕೆ ಸಂಬಂಧಪಟ್ಟ ಸ್ಪರ್ಧಾತ್ಮಕ ಪರೀಕ್ಷೆಯ ಉತ್ತರ ಕೀಗಳನ್ನು ಪ್ರಕಟಿಸಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು 29-08-2023 ಸಾಲಿನ ಅಧಿಸೂಚನೆಗೆ ಸಂಬಂಧಪಟ್ಟ ಈ ಉತ್ತರ ಕೀಗಳನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಆನ್ಸರ್‌ ಕೀಗಳನ್ನು ನೇರವಾಗಿ ನೋಡಲು ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಹೋಗಬಹುದು.

    ಉತ್ತರ ಕೀಗಳನ್ನು ನೇರವಾಗಿ ನೋಡಲು ಇಲ್ಲಿ ಕ್ಲಿಕ್‌ ಮಾಡಿ

  • ಕೆಪಿಎಸ್ ಸಿ ಪಿಟ್ಟರ್ ಹುದ್ದೆಗಳ ದಾಖಲೆ ಪರಿಶೀಲನೆಗೆ ಆಯ್ಕೆ ಪಟ್ಟಿ ಬಿಡುಗಡೆ

    ಕೆಪಿಎಸ್ ಸಿ ಪಿಟ್ಟರ್ ಹುದ್ದೆಗಳ ದಾಖಲೆ ಪರಿಶೀಲನೆಗೆ ಆಯ್ಕೆ ಪಟ್ಟಿ ಬಿಡುಗಡೆ

    ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್, ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳಲ್ಲಿನ ಫಿಟ್ಟರ್ ಹುದ್ದೆಗಳಿಗೆ ಮೂಲ ದಾಖಲೆಗಳ ಪರಿಶೀಲನೆ ಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ ಗೆ ಭೇಟಿ ನೀಡಿ ಪರಿಶೀಲಿಸಬಹುದು.

    ಜನ್ಮದಿನಾಂಕ, ರಿಜಿಸ್ಟರ್ ನಂಬರ್, ಹೆಸರು ವಿವರಗಳನ್ನು ಕೆಪಿಎಸ್ ಸಿ ಪಟ್ಟಿಯಲ್ಲಿ ನೀಡಿದೆ. ಆಯೋಗ ನಿಗದಿಪಡಿಸಿದ ದಿನಾಂಕದಂದು ಮೂಲದಾಖಲೆಗಳೊಂದಿಗೆ ಅಭ್ಯರ್ಥಿಗಳು ಹಾಜರಾಗಬೇಕು.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಈ ಲಿಂಕ್ ಕ್ಲಿಕ್ ಮಾಡಿ

  • ಕೆಪಿಎಸ್ ಸಿ ಕೀ ಉತ್ತರ ಪ್ರಕಟಣೆ

    ಕೆಪಿಎಸ್ ಸಿ ಕೀ ಉತ್ತರ ಪ್ರಕಟಣೆ

    ಆಯೋಗವು ದಿನಾಂಕ 28-02-2021 ರಂದು ನಡೆದ ವಿವಿಧ ಇಲಾಖೆಗಳಲ್ಲಿನ ಸಹಾಯಕರು/ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ(ವಿಷಯ ಸಂಕೇತ -385), ಸಾಮಾನ್ಯ ಕನ್ನಡ (ವಿಷಯ ಸಂಕೇತ-386) ಸಾಮಾನ್ಯ ಇಂಗ್ಲೀಷ್ ( ವಿಷಯ ಸಂಕೇತ – 387) ರ ಕೀ ಉತ್ತರಗಳನ್ನು ಆಯೋಗದ ಅಂತರ್ಜಾಲ https://kpsc.kar.nic.in ನಲ್ಲಿ ಪ್ರಕಟಿಸಿದೆ. ಮತ್ತು ಸದರಿ ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಆಯೋಗದ ಅಂತರ್ಜಾಲದ ದಿನಾಂಕ 04-03-2021ರ ಪ್ರಕಟಣೆಯಂತೆ ಆಕ್ಷೇಪಣೆಗಳನ್ನು ಸಲ್ಲಿಸಬಹುದೆಂದು ಅಭ್ಯರ್ಥಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಿದೆ.

  • ಕೆಪಿಎಸ್ ಸಿ ಪ್ರಥಮ ದರ್ಜೆ ಸಹಾಯಕ ಆಯ್ಕೆ ಪಟ್ಟಿ ಪ್ರಕಟ

    ಕೆಪಿಎಸ್ ಸಿ ಪ್ರಥಮ ದರ್ಜೆ ಸಹಾಯಕ ಆಯ್ಕೆ ಪಟ್ಟಿ ಪ್ರಕಟ

    ಕರ್ನಾಟಕ ಲೋಕಸೇವಾ ಆಯೋಗವು ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಇದೀಗ ಪ್ರಕಟಿಸಿದೆ. ವಿವರಗಳು ಈ ಕೆಳಗಿನಂತಿವೆ,

    ತಾತ್ಕಾಲಿಕ ಆಯ್ಕೆ ಪಟ್ಟಿಗಳ ಮಾಹಿತಿ :
    2018 ಮತ್ತು 20-21 ನೇ ಸಾಲಿನ ತಿದ್ದುಪಡಿ ಅಧಿಸೂಚನೆಗೆ ಸಂಬಂಧಿಸಿದ ಹುದ್ದೆ ಇದಾಗಿದ್ದು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ 1 ಎಫ್‌ಡಿಎ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ.

    ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ 5 ಕ್ಷೇತ್ರ ಸಹಾಯಕರು-ಹೆಚ್ ಕೆ ವೃಂದ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ. 2018 ಮತ್ತು 20-21 ನೇ ಸಾಲಿನ ತಿದ್ದುಪಡಿ ಅಧಿಸೂಚನೆಗೆ ಸಂಬಂಧಿಸಿದ ಹುದ್ದೆ ಇದಾಗಿದೆ.

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪ ಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿನ 79 ವಿಜ್ಙಾನ ಶಿಕ್ಷಕರು-ಉಳಿಕೆ ಮೂಲ ವೃಂದ (ಗ್ರೂಪ್ ಸಿ) ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

    ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿನ 21 ವಿಜ್ಞಾನ ಶಿಕ್ಷಕರು

    ಹೈ.ಕ ವೃಂದ(ಗ್ರೂಪ್ ಸಿ) ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ.

    ಈ ಎಲ್ಲಾ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

    http://www.kpsc.kar.nic.in/