Category: State Govt Jobs

Karnataka Govt Jobs News in Kannada, Job news in kannada, employment news, kpsc update, karnataka police recruitment, bmtc driver jobs, ksrtc driver conductor jobs, gramapanchayiti jobs, bengaluru jobs, mysuru jobs, mangaluru jobs, hassan jobs, jobs in karnataka, jobs near me, ಕರ್ನಾಟಕ ಉದ್ಯೋಗ ವಾರ್ತೆ, ಕೆಪಿಎಸ್‌ಸಿ, ಸರಕಾರಿ ಉದ್ಯೋಗ, ಕನ್ನಡ ಉದ್ಯೋಗಾವಕಾಶ, ಉದ್ಯೋಗ ಮಾಹಿತಿ, ಜಾಬ್‌ ಸುದ್ದಿಗಳು

  • DHFWS ಚಾಮರಾಜನಗರ : ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    ಕೋವಿಡ್ -19 ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಚಾಮರಾಜನಗರ ಈ ಕಚೇರಿಯ ಅಧೀನ ಸಂಸ್ಥೆಗಳಲ್ಲಿ ಖಾಲಿ ಇರುವ ಶುಶ್ರೂಷಕರು, ಕಿರಿಯ ವೈದ್ಯಕೀಯ ಪ್ರಯೋಗಶಾಲ ತಂತ್ರಜ್ಞರು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನಿಯಮಾನುಸಾರ ಮೆರಿಟ್ ಕಂ ರೋಸ್ಟರ್ ಮೂಲಕ ದಿನಾಂಕ 30-09-2021 ರ ವರೆಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿ ಮಾಡುವವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಕಾತಿ ಮಾಡಲು ಹಾಗೂ ಕಚೇರಿಯ ಅಧೀನ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲು 6 ಐಸಿಯು ಹಾಸಿಗೆಗಳನ್ನು ಕಾರ್ಯಗತಗೊಳಿಸುವ ಸಲುವಾಗಿ ವೈದ್ಯಾಧಿಕಾರಿ 8 ಹುದ್ದೆಗಳನ್ನು ತಾತ್ಕಾಲಿಕವಾಗಿ 06 ತಿಂಗಳ ಅವಧಿಗೆ ನೇಮಕಾತಿ ಮಾಡಲು ಹುದ್ದೆಗಳ ಮುಂದೆ ನಮೂದಿಸಿರುವ ದಿನಾಂಕದಂದು ನೇರ ಸಂದರ್ಶನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಕೊಠಡಿ ಸಂಖ್ಯೆ 312, ಮೂರನೇ ಮಹಡಿ, ಜಿಲ್ಲಾಡಳಿತ ಭವನ, ಚಾಮರಾಜನಗರ ಇಲ್ಲಿ ಏರ್ಪಡಿಸಲಾಗಿದೆ. ಆಸಕ್ತರು ತಮ್ಮ ಮೂಲ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳು ( 1 ಜೊತೆ ಜೆರಾಕ್ಸ್ ಪ್ರತಿ) ಹಾಗೂ ಸ್ವ ವಿವರಗಳೊಂದಿಗೆ ನೇರಸಂದರ್ಶನಕ್ಕೆ ಹಾಜರಾಗುವುದು. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಕರ್ತವ್ಯದ ವೇಳೆಯಲ್ಲಿ ಸಂಪರ್ಕಿಸುವುದು.

    ಹುದ್ದೆಯ ಹೆಸರು : ವೈದ್ಯಾಧಿಕಾರಿ 8 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಎಂಬಿಬಿಎಸ್ ತೇರ್ಗಡೆ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.60,000/- ವೇತನವಿರುತ್ತದೆ.

    ಶುಶ್ರೂಷಾಧಿಕಾರಿ: 04 ಹುದ್ದೆ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25,000/- ಮಾಸಿಕ ವೇತನವಿರುತ್ತದೆ. ಅಭ್ಯರ್ಥಿಗಳು ಜಿಎನ್ ಎಂ ನ್ನು ಅಂಗೀಕೃತ ನರ್ಸಿಂಗ್ ಕೌನ್ಸಿಲ್ ನಿಂದ ಪಡೆದುಕೊಂಡಿರಬೇಕು.

    ಪ್ರಯೋಗ ಶಾಲಾ ತಂತ್ರಜ್ಞರು : 15 ಹುದ್ದೆಗಳು : ಈ ಹುದ್ದೆಗೆ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಜೊತೆಗೆ ಡಿಎಂಎಲ್ ಟಿ ಅಥವಾ ಪಿಯುಸಿ ಜೊತೆಗೆ ಪ್ಯಾರಾಮೆಡಿಕಲ್ ಬೋರ್ಡ್ ಲ್ಯಾಬ್ ಟೆಕ್ನಿಶಿಯನ್ ಹೊಂದಿರ ಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.20,000/- ವೇತನವಿರುತ್ತದೆ.

    ಫಾರ್ಮಸಿಸ್ಟ್ : 26 ಹುದ್ದೆಗಳು : ಈ ಹುದ್ದೆಗೆ 2 ವರ್ಷಗಳ ಡಿಪ್ಲೋಮಾ ಕೋರ್ಸ್ ಡಿಫಾರ್ಮಾ ದಲ್ಲಿ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.20,000/- ವೇತನವಿರುತ್ತದೆ.

    ವಯೋಮಿತಿ : ಜನರಲ್ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಸಿಎಟಿ1 ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.

    ನೇರ ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: 11-06-2021 ಸಮಯ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ.

  • ಕೃಷಿ ವಿಶ್ವವಿದ್ಯಾಲಯ ಧಾರವಾಡ : ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ನೇರ ಸಂದರ್ಶನ

    ಕೃಷಿ ವಿಶ್ವವಿದ್ಯಾಲಯ ಧಾರವಾಡ, ಸ್ನಾತಕೋತ್ತರ ಶಿಕ್ಷಣ ನಿರ್ದೇಶನಾಲಯ, ಕೃಷಿ ನಗರ ಧಾರವಾಡ ಅಡಿಯಲ್ಲಿ ವಿವಿಧ ಡಿಪ್ಲೋಮಾ ಮಹಾ ವಿದ್ಯಾಲಯದಲ್ಲಿ ತಾತ್ಕಾಲಿಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ: ಟೆಕ್ನಿಕಲ್ ಅಸಿಸ್ಟೆಂಟ್ – 01

    ಹುದ್ದೆ ಅವಧಿ : 179 ದಿನಗಳವರೆಗೆ ತಾತ್ಕಾಲಿಕವಾಗಿ ತೊಡಗಿಸಿಕೊಳ್ಳಲಾಗುವುದು.

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,600/- ವೇತನ ನಿಗದಿಪಡಿಸಲಾಗಿದೆ.

    ವಯೋಮಿತಿ : ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

    ಸಂದರ್ಶನವು ದಿನಾಂಕ 21-06-2021 ರಂದು ಬೆಳಿಗ್ಗೆ 11 ಗಂಟೆಗೆ ಡೀನ್(ಸ್ನಾತಕೋತ್ತರ ಕಚೇರಿ), ಕೃ.ವಿ.ವಿ ಧಾರವಾಡದಲ್ಲಿ ಆನ್ಲೈನ್ ಮೂಲಕ ನಡೆಯಲಿದೆ.

    ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಬಯೋಡೇಟಾ, ಮೂಲ ಅಂಕಪಟ್ಟಿಗಳು ಮತ್ತು ಕೆಲಸದ ಅನುಭವದ ಪ್ರಮಾಣ ಪತ್ರಗಳನ್ನು ಈ ಇ- ಮೇಲ್ [email protected] ವಿಳಾಸಕ್ಕೆ ದಿನಾಂಕ 19-06-2021 ರ ಬೆಳಿಗ್ಗೆ 10.00 ಗಂಟೆಯೊಳಗಾಗಿ ಸ್ಕ್ಯಾನ್ ಪ್ರತಿ ಸಲ್ಲಿಸತಕ್ಕದ್ದು.

    ಸಂದರ್ಶನದ ಆನ್ಲೈನ್ ಜ಼ೂಮ್ ಮೀಟಿಂಗ್ ಐಡಿ ಮತ್ತು ಪಾಸ್ ವರ್ಡ್ ನ್ನು ದಿನಾಂಕ 19-06-2021ರ ಸಾಯಂಕಾಲ 5.00 ರ ಒಳಗಾಗಿ ತಿಳಿಸಲಾಗುವುದು.

    ನೋಟಿಫಿಕೇಶನ್

  • PMKVY : ತರಬೇತಿಗೆ ಅರ್ಜಿ ಆಹ್ವಾನ

    ಆರೋಗ್ಯ ವಲಯದಲ್ಲಿ ಕೊರೊನಾ ನಿಯಂತ್ರಿಸುವ ಸಲುವಾಗಿ ಹೆಚ್ಚಿನ ಪರಿಣಿತ ಸಹಾಯಕ ತಾಂತ್ರಿಕ ಸಿಬ್ಬಂದಿಯ ಅವಶ್ಯಕತೆ ಇದೆ. ಇದಕ್ಕಾಗಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ತರಬೇತಿಯನ್ನು ನೀಡುತ್ತಿದ್ದು, ಆಸಕ್ತರು ಅರ್ಜಿಯನ್ನು ಹಾಕಬಹುದು.

    ಜನರಲ್ ಡ್ಯೂಟಿ ಅಸಿಸ್ಟೆಂಟ್ (ಜಿಡಿಎ), ಜನರಲ್ ಡ್ಯೂಟಿ ಅಸಿಸ್ಟೆಂಟ್ ಅಡ್ವಾನ್ಸಡ್ ( ಕ್ರಿಟಿಕಲ್ ಕೇರ್) ಹಾಗೂ ಹೋಮ್ ಹೆಲ್ತ್ ಏಡ್ ತರಬೇತಿ ನೀಡಲಾಗುತ್ತದೆ. ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು.

    ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಶಿಯನ್ ಬೇಸಿಕ್, ಫ್ಲೆಬೊಟೊಮಿಸ್ಟ್ ಹಾಗೂ ಮೆಡಿಕಲ್ ರೆಕಾರ್ಡ್‌ ಅಸಿಸ್ಟೆಂಟ್ ತರಬೇತಿಗೆ ಪಿಯುಸಿ ತೇರ್ಗಡೆಯಾಗಿರಬೇಕು ಮತ್ತು ಮೆಡಿಕಲ್ ಇಕ್ವಿಪ್ ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್ ತರಬೇತಿಗೆ ಎಸ್ ಎಸ್ ಎಲ್ ಸಿ/ಐಟಿಐ/ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.

    ಆಸಕ್ತ ಅಭ್ಯರ್ಥಿಗಳು ಈ ವಿವಧ ಕೋರ್ಸ್‌ಗಳ ತರಬೇತಿಗೆ ಸಂಬಂಧಿಸಿದ ವಿವರಗಳಿಗಾಗಿ ಫಾರ್ಮ್ ಲಿಂಕ್ www.koppal.nic.in ನಲ್ಲಿ ಪಡೆಯಬಹುದು.

  • ನರೇಗಾ ಯೋಜನೆಯಡಿ ಉದ್ಯೋಗವಕಾಶ

    ಧಾರವಾಡ ಜಿಲ್ಲಾ ಪಂಚಾಯತ್ ಪ್ರಧಾನ ಕಛೇರಿಯಲ್ಲಿ, ಹಾಗೂ ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ಅಳ್ನಾವರ ಹಾಗೂ ಅಣ್ಣಿಗೇರಿ ತಾಲ್ಲೂಕು ಪಂಚಾಯತಿಗಳಿಗೆ ಹಾಗೂ ಅನುಷ್ಠಾನ ಇಲಾಖೆಗಳಿಗೆ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯವಿರುವ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಸರಕಾರದ ನಡುವಳಿಯನುಸಾರ ಆಯ್ಕೆ ಮಾಡಬೇಕಾಗಿರುತ್ತದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆಗಳ ವಿವರ : ಸಹಾಯಕ ಜಿಲ್ಲಾ ಸಮನ್ವಯ ಅಧಿಕಾರಿ ( ADPC ) , ಜಿಲ್ಲಾ ಐ.ಇ.ಸಿ.ಸಂಯೋಜಕರು, ತಾಲೂಕು ಎಂ.ಐ.ಎಸ್ ಸಂಯೋಜಕರು, ತಾಲೂಕು ಐಇಎಸ್ ಸಂಯೋಜಕರು, ತಾಲೂಕು ಸಂಯೋಜಕರು, ಡಾಟಾ ಎಂಟ್ರಿ ಅಪರೇಟರ್, ತಾಂತ್ರಿಕ ಸಹಾಯಕರು ( ಕೃಷಿ), ತಾಂತ್ರಿ ಸಹಾಯಕರು ( ಅರಣ್ಯ), ತಾಲೂಕು ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ : 14

    ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 03-06-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-06-2021

    ವಿದ್ಯಾರ್ಹತೆ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಪಿಯು/ಪದವಿ/ಇಂಜಿನಿಯರಿಂಗ್ ಪಾಸ್ ಆದವರು ಅರ್ಜಿ ಸಲ್ಲಿಸಬಹುದು.

    ಸರಕಾರಿ ಕೆಲಸದ ಅವಧಿಯಲ್ಲಿ ಮಾತ್ರ ಆನ್ಲೈನ್ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಬೆಳಿಗ್ಗೆ 10.30 ರಿಂದ ಸಂಜೆ 4:30 ರವರೆಗೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • 223 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

    223 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

    ಚಾಮರಾಜನಗರ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 70 ಅಂಗನವಾಡಿ ಕಾರ್ಯಕರ್ತೆ ಹಾಗೂ 153 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‌.ಎಸ್‌.ಎಲ್.ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ತೇರ್ಗಡೆ ಹಾಗೂ ಗರಿಷ್ಠ ವಿದ್ಯಾರ್ಹತೆ 9 ನೇ ತರಗತಿ ತೇರ್ಗಡೆಯಾಗಿರಬೇಕು.

    ಅರ್ಹ ಅಭ್ಯರ್ಥಿಗಳು ಎಲ್ಲಾ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 26-04-2021 ಬೆಳಗ್ಗೆ 10.00ಗಂಟೆ ಯಿಂದ 25-05-2021 ರ ಸಂಜೆ 5.30 ಗಂಟೆಯೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :26-04-2021 ಬೆಳಗ್ಗೆ 10.00 ಗಂಟೆಯಿಂದ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-05-2021 ಸಂಜೆ 5.30 ರವರೆಗೆ
    ಆನ್‌ಲೈನ್‌ನಲ್ಲಿ ಸ್ವೀಕರಿಸಲಾದ ಅರ್ಜಿಗಳ ಪರಿಶೀಲನೆ : 26-05-2021 ರಿಂದ 31-05-2021 ರವರೆಗೆ
    ಅರ್ಹರಾದ ಅಭ್ಯರ್ಥಿಗಳ ಪಟ್ಟಿಗೆ ಆಯ್ಕೆ ಸಮಿತಿಯಿಂದ ಅನುಮೋದನೆ ಪಡೆಯುವುದು : 01-06-2021 ರಿಂದ 03-06-2021 ರವರೆಗೆ
    ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಣೆ ಹಾಗೂ ಸಾರ್ವಜನಿಕ ಆಕ್ಷೇಪಣೆ ಸಲ್ಲಿಸುವಿಕೆಗೆ ಕಾಲಾವಕಾಶ : 04-06-2021 ರಿಂದ 11-06-2021ರವರೆಗೆ
    ಆಕ್ಷೇಪಣೆ ಬಂದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ : 14-06-2021 ರಿಂದ 21-06-2021 ರವರೆಗೆ
    ಪರಿಶೀಲನೆ ನಂತರ ಆಯ್ಕೆ ಸಮಿತಿಯ ಸಭೆ ನಡೆಸಿ,ಅಂತಿಮ ಆಯ್ಕೆ ಪಟ್ಟಿಗೆ ಅನುಮೋದನೆ ಪಡೆಯಲು ಕಾಲಾವಕಾಶ : 22-06-2021 ರಿಂದ 24-06-2021 ರವರೆಗೆ

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಕಲಬುರಗಿ : ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

    ಕಲಬುರಗಿ : ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

    ಸೇಡಂ ತಾಲೂಕಿನ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಅತಿಥಿ ಶಿಕ್ಷಕರ ನೇಮಕಾತಿ

    ಅರ್ಜಿ ಸಲ್ಲಿಸಬೇಕಾದ ಕೊನೆಯ ದಿನಾಂಕ : ಎಪ್ರಿಲ್ 10, 2021

    ಸಮಾಜ ಕಲ್ಯಾಣ ಇಲಾಖೆ ( ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ) ವ್ಯಾಪ್ತಿಯಲ್ಲಿ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿ ಇರುವ ಸಮಾಜ ವಿಜ್ಞಾನ ( ಆಂಗ್ಲ ಮಾಧ್ಯಮ ) ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

    ವಿದ್ಯಾರ್ಹತೆ : ಅರ್ಜಿಗಳನ್ನು ಸಲ್ಲಿಸುವವರು ಬಿ.ಎ, ಬಿ.ಇಡಿ ಪಾಸಾಗಿರಬೇಕು. ಶಿಕ್ಷಕರನ್ನು ಗೌರವ ಧನದ ಆಧಾರದ ಮೇಲೆ ಶಾಲಾ ಹಂತದಲ್ಲಿ ನಿಯಮಾವಳಿಗೆ ಒಳಪಟ್ಟು ನೇಮಕ ಮಾಡಲಾಗುವುದು. ನಿವೃತ ಶಿಕ್ಷಕರು ಕೂಡಾ ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಶೈಕ್ಷಣಿಕ ದಾಖಲೆಗಳೊಂದಿಗೆ 2021, ಎಪ್ರಿಲ್ 10 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ : 8747924789